ದತ್ತ ಜಯಂತಿ ಹಿನ್ನೆಲೆ ಪ್ರವಾಸಿಗರಿಗೆ ನಿರ್ಬಂಧ, ಭದ್ರತೆಗೆ 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

By Gowthami K  |  First Published Dec 22, 2023, 3:05 PM IST

ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಭದ್ರತೆಗೆ 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾ ಎಸ್ಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ.


ಚಿಕ್ಕಮಗಳೂರು (ಡಿ.22): ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಈಗಾಗಲೇ ಆಧಿಕೃತ ಚಾಲನೆ ದೊರೆತಿದ್ದು, ಕಳೆದ ವರ್ಷ  ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದತ್ತಭಕ್ತರು ಮಾಲಾಧಾರಣೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಭದ್ರತೆಗೆ 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾ ಎಸ್ಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಾದ್ಯಂತ 28 ಚೆಕ್ ಪೋಸ್ಟ್, ಸಿಸಿ ಟಿವಿ ಅಳವಡಿಗೆ ಮಾಡಲಾಗಿದೆ. ಪ್ರತಿ ಚೆಕ್ ಪೋಸ್ಟ್ ಗೂ ವಿಶೇಷ ದಂಡಾಧಿಕಾರಿಗಳ ನೇಮಕ ಮಾಡಲಾಗಿದೆ. ಜಿಲ್ಲೆಯಾದ್ಯಂತ ಭದ್ರತೆಗಾಗಿ 4000 ಪೊಲೀಸರು, 7ASP, 30 DYSP, 30 ಇನ್ಸ್ಪೆಕ್ಟರ್, ನೂರಾರು ಹೋಂಗಾರ್ಡ್,20 KSRP ತುಕಡಿ ಸೇರಿದಂತೆ ಹಲವು ಸಿಬ್ಬಂದಿಗಳನ್ನು  ನಿಯೋಜನೆ ಮಾಡಲಾಗಿದೆ.

Tap to resize

Latest Videos

undefined

ವೀಕೆಂಡ್, ಕ್ರಿಸ್‌ಮಸ್‌ ಪ್ಲಾನ್ ಮಾಡಿದವರಿಗೆ ನಿರಾಸೆ: 5 ದಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

300ಕ್ಕೂ ಅಧಿಕ ಸಿ.ಸಿ ಕ್ಯಾಮೆರಾ ಹಾಗೂ 50ಕ್ಕೂ ಬಾಡಿ ಕ್ಯಾಮೆರಾ. 2 ಸಿಸಿ ಟಿವಿ ಕ್ಯಾಮೆರಾ ವೀಕ್ಷಣಾ ತಂಡಗಳ ರಚನೆ ಮಾಡಲಾಗದ್ದು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮದ್ಯಪಾನ ನಿಷೇಧ ಮಾಡಲಾಗಿದೆ. ಜೊತೆಗೆ  ದತ್ತಪೀಠ ಮಾರ್ಗದಲ್ಲಿ ಬಾರಿ ವಾಹನಗಳ ಸಂಚಾರನ್ನು ಬಂದ್ ಮಾಡಲಾಗಿದೆ. 

ರೆಸಾರ್ಟ್, ಹೋಂ ಸ್ಟೇ ಮುಂಗಡ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಅವಕಾಶ ಇದ್ದು, ದತ್ತಜಯಂತಿ ವೇಳೆ ಬುಕ್ಕಿಂಗ್ ಮಾಡಿದ ಪ್ರವಾಸಿಗರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಚಿಕ್ಕಮಗಳೂರು ಎಸ್ ಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ.

ದತ್ತಪೀಠದ ಹೆಸರಲ್ಲಿ ಮತ್ತೊಂದು ವಿವಾದ, ದತ್ತಾತ್ರೇಯರ ಸ್ಥಿರಾಸ್ಥಿ- ಚರಾಸ್ಥಿ ಏನಾಯ್ತು?

ಇನ್ನು ಇದೇ 24ರ ಭಾನುವಾರದಂದು ನಗರದಲ್ಲಿ ಸಾವಿರಾರು ಮಹಿಳೆಯರು ಬೃಹತ್ ಸಂಕೀರ್ತನ ಯಾತ್ರೆ ನಡೆಸಿ ದತ್ತಪೀಠದಲ್ಲಿ ಹೋಮ ಹವನ ನಡೆಸುವ ಮೂಲಕ ಅನುಸೂಯ ಜಯಂತಿ ಆಚರಿಸಲಿದ್ದಾರೆ. 25ರ ಸೋಮವಾರದಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು 20 ಸಾವಿರಕ್ಕೂ ಅಧಿಕ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 26ರಂದು ರಾಜ್ಯದ ಮೂಲೆ ಮೂಲೆಗಳಿಂದ ಬರುವ 25,000ಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದಕ್ಕೆ ದರ್ಶನ ಪಡೆಯಲಿದ್ದಾರೆ.   ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ನಾಳೆಯಿಂದ ಡಿ.27ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಡಿ. 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿದೆ.

click me!