PM Kisan: ಇ-ಕೆವೈಸಿ ಮಾಡಿಕೊಳ್ಳಲು ಅಗಸ್ಟ್ 31 ರವರೆಗೆ ಕಾಲಾವಕಾಶ

By Suvarna NewsFirst Published Aug 29, 2022, 2:49 PM IST
Highlights

ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಕಡ್ಡಾಯವಾಗಿ ಅಗಸ್ಟ್ 31 ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಧಾರವಾಡ ಕೃಷಿ ಜಂಟಿ ನಿರ್ದೆಶಕ ರಾಜಶೇಖರ್ ತಿಳಿಸಿದ್ದಾರೆ.

ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ 
ಧಾರವಾಡ: ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಕಡ್ಡಾಯವಾಗಿ ಅಗಸ್ಟ್ 31 ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಧಾರವಾಡ ಕೃಷಿ ಜಂಟಿ ನಿರ್ದೆಶಕ ರಾಜಶೇಖರ್ ತಿಳಿಸಿದ್ದಾರೆ

ಇ-ಕೆವೈಸಿಯನ್ನು https://pmkisan.gov.in  ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದು.ಇ-ಕೆವೈಸಿಯನ್ನು ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in  ವೆಬ್‍ಸೈಟ್‍ನ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕ್ಕಿಸಿ ಆಧಾರ ನಂಬರ್ (ಹಾಗೂ ಕ್ಯಾಪಚಾ ನಮೂದಿಸಿ ತದನಂತರ) ಇರುವ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದು.

ಕೃಷಿ ಸಮ್ಮಾನ್‌ಗೆ ತುಮಕೂರಿನಿಂದ 3 ಲಕ್ಷಕ್ಕೂ ಅಧಿಕ ರೈತರಿಂದ ಅರ್ಜಿ

ಇ-ಕೆವೈಸಿಯನ್ನು ಬಯೋಮೆಟ್ರಿಕ್ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (ಸಿಎಸ್‍ಸಿ) ಭೇಟಿ ನೀಡಿ ಆಧಾರ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದು. ಈ ಪ್ರಕ್ರಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರು ಎಲ್ಲ ಟ್ಯಾಕ್ಸ್ ಒಳಗೊಂಡಂತೆ, ರೂ.15 ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ. 

ಕನ್ನಡಪ್ರಭ ಬಿಸಿನೆಸ್‌ ಅವಾರ್ಡ್‌ ವಿಜೇತ, ಶಿರಸಿಯ ಜೇನು ಕೃಷಿಕನಿಗೆ ಮೋದಿ ಪ್ರಶಂಸೆ

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

click me!