ಇಂದು ಜೈಲು ಹಕ್ಕಿ ಪ್ರಜ್ವಲ್ ರೇವಣ್ಣ ಬರ್ತ್ ಡೇ; ಹಳೆ ವಿಡಿಯೋ ಮತ್ತೆ ವೈರಲ್

Published : Aug 05, 2025, 09:06 AM ISTUpdated : Aug 05, 2025, 09:09 AM IST
Prajwal Revanna

ಸಾರಾಂಶ

Former MP Prajwal Revanna: ಅತ್ಯಾ*ಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಈ ವಿಡಿಯೋಗೆ ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

ಬೆಂಗಳೂರು: ಇಂದು ಅತ್ಯಾ*ಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬರ್ತ್ ಡೇ. ಈ ಹಿನ್ನೆಲೆ ಕಳೆದ ಎರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಹಳೆ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಈ ವಿಡಿಯೋ ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಮನೆಗೆಲಸದ ಮಹಿಳೆ ಮೇಲೆ ಅತ್ಯಾ*ಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ನೀಡಿ ಮಹತ್ವದ ತೀರ್ಪು ನೀಡಿದೆ. ಆಗಸ್ಟ್ 1ರಂದು ದೋಷಿ ಎಂದು ಹೇಳಿದ್ದ ನ್ಯಾಯಾಲಯ ಮರುದಿನ ಆಗಸ್ಟ್ 2ರಂದು ಜೀವಾವಧಿ ಶಿಕ್ಷೆ ಜೊತೆ ದಂಡವನ್ನು ಸಹ ವಿಧಿಸಿದೆ.

ಮತ್ತೆ ಮುನ್ನಲೆಗೆ ಬಂದ ಹಳೆ ವಿಡಿಯೋ?

2024ರಲ್ಲಿಯೂ ಪ್ರಜ್ವಲ್ ರೇವಣ್ಣ ಬರ್ತ್ ಡೇ ಸಂದರ್ಭದಲ್ಲಿ ಪರಪ್ಪನ ಅಗ್ರಹಾರದಲ್ಲಿದ್ದನು. ಈ ವರ್ಷ ತಮ್ಮ ಪರವಾಗಿ ತೀರ್ಪು ಬರಲಿದೆ ಎಂಬ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಭ್ರಮನಿರಸನ ಆಗಿತ್ತು. ಇದೀಗ ಈ ಬಾರಿ ಬರ್ತ್ ಡೇ ದಿನವೂ ಪ್ರಜ್ವಲ್ ರೇವಣ್ಣ ಪರಪ್ಪನ ಆಗ್ರಹಾರದಲ್ಲಿದ್ದು, ದೋಷಿ ಶಿಕ್ಷೆಗೆ ಒಳಗಾದ ಖೈದಿಯಾಗಿದ್ದಾನೆ. ಈ ಎಲ್ಲಾ ಬೆಳವಣಿಗೆ ನಡುವೆ 2023ರದ್ದು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಮಾಜಿ ಸಂಸದ ಹೇಳಿದ್ದೇನು?

ಆಗಸ್ಟ್ 5ರ ನನ್ನ ಹುಟ್ಟುಹಬ್ಬದ ದಿನ. ಹಾಗಾಗಿ ಹೆಚ್ಚಿನ ಸಂಖ್ಯೆಯ ಜನರು ನಮ್ಮ ಮನೆ ಮುಂದೆ ಬರೋದು ಬೇಡ. ನನ್ನ ಎಲ್ಲಾ ಅಭಿಮಾನಿಗಳು ಸಹಕರಿಸುತ್ತೀರಾ ಎಂದು ಈ ವಿಡಿಯೋ ಮಾಡುತ್ತಿದ್ದೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿಕೆಯ ಕ್ಲಿಪ್ ಮುನ್ನಲೆಗೆ ಬಂದಿದೆ. ಈ ವಿಡಿಯೋಗೆ ಕಮೆಂಟ್ ಮಾಡಿರುವ ನೆಟ್ಟಿಗರು, ಈ ವರ್ಷದ ಬರ್ತ್ ಡೇ ನಿಮಗೆ ಇದಕ್ಕಿಂತ ಒಳ್ಳೆಯ ಗಿಫ್ಟ್ ಎಂದೆಂದಿಗೂ ಸಿಗಲ್ಲ. ಮನೆ ಮುಂದೆ ಬರೋಕೆ ನೀವೇ ಇಲ್ಲವಲ್ಲಾ? ಪರಪ್ಪನ ಅಗ್ರಹಾರ ಜೈಲಿನೊಳಗೆ ಕೇಕ್ ಮಾಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಸದನಾಗಿ ಆಯ್ಕೆಯಾದ ಬಳಿಕ ಪ್ರಜ್ವಲ್ ರೇವಣ್ಣ ಸಾವಿರಾರು ಕಾರ್ಯಕರ್ತರೊಂದಿಗೆ ಬರ್ತ್ ಡೇ ಆಚರಿಸಿಕೊಂಡಿದ್ದುಂಟು. ಈಗ ಅತ್ಯಾ*ಚಾರ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋ ಪ್ರಜ್ವಲ್, ಬಾಳಲ್ಲಿ ಕಗ್ಗತ್ತಲು ಆವರಿಸಿದೆ.

ಇದನ್ನೂ ಓದಿ: : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ: ಕಾಂಗ್ರೆಸ್ ವಕ್ತಾರೆ ನಜ್ಮಾ ನಜೀರ್ ಪ್ರತಿಕ್ರಿಯೆ

ಪ್ರಜ್ವಲ್‌ ಪ್ರಕರಣದ ಎಸ್‌ಐಟಿ ತಂಡಕ್ಕೆ ಪದಕ: ಪರಮೇಶ್ವರ್‌

ಮಾಜಿ ಸಂಸದ ಪ್ರಜ್ವಲ್ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ತಂಡದವರಿಗೆ ಮುಖ್ಯಮಂತ್ರಿ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯ ನೀಡಿರುವುದು ಐತಿಹಾಸಿಕ ತೀರ್ಪು. ಮೊದಲು ನಮ್ಮ ಎಸ್ಐಟಿಗೆ ಅಭಿನಂದನೆ ಹೇಳ್ತೇನೆ. ನಮ್ಮ ಎಸ್ಐಟಿ ಎಲ್ಲ ದಾಖಲೆ ಕೊಟ್ಟಿತ್ತು. ಪ್ರಕರಣದ ತನಿಖೆ ನಮ್ಮ ಪೊಲೀಸ್ ಇಲಾಖೆ ಕೀರ್ತಿ ತಂದಿದೆ. ಶೀಘ್ರ ತನಿಖೆ ಮುಗಿಸಿದ್ದಾರೆ. ಹೀಗಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತದೆ. ಇದರಲ್ಲಿ ಎರಡನೇ ಮಾತಿಲ್ಲ. ತನಿಖೆ ನಡೆಸಿದ ಎಸ್ಐಟಿ ತಂಡದವರಿಗೆ ಮುಖ್ಯಮಂತ್ರಿ ಪದಕ ಕೊಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ತಿಳಿಸಿದರು.

  1. ಹಾಲಿ, ಮಾಜಿ ಜನಪ್ರತಿನಿಧಿಗಳ ವಿಚಾರಣೆಗೆ ರಾಜ್ಯದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸ್ಥಾಪನೆಯಾದ ಬಳಿಕ ಜೀವಾವಧಿ ಶಿಕ್ಷೆ ವಿಧಿಸಿರುವುದು ಇದೇ ಮೊದಲು.
  2. ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಪ್ರಜ್ವಲ್‌ ಮೇಲ್ಮನವಿ ಸಲ್ಲಿಸಲಿದ್ದಾರೆ. ಜನಪ್ರತಿನಿಧಿ ಕೋರ್ಟ್‌ ವಿಧಿಸಿದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ರಾಜ್ಯದ ಮೊದಲ ವ್ಯಕ್ತಿ ಪ್ರಜ್ವಲ್‌ ರೇವಣ್ಣ ಆಗಲಿದ್ದಾರೆ.
  3. ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವುದರಿಂದ ಅದನ್ನು ವಿಭಾಗೀಯ ಪೀಠವೇ ವಿಚಾರಣೆ ನಡೆಸಬೇಕು. ಅಂದರೆ ಆ ನ್ಯಾಯಪೀಠ ಕೂಡ ಮೊದಲ ಜನಪ್ರತಿನಿಧಿಗಳ ವಿಶೇಷ ವಿಭಾಗೀಯ ಪೀಠ ಆಗಲಿದೆ.
  4. ಈವರೆಗೆ ರಾಜ್ಯದ ಜನಪ್ರತಿನಿಧಿ ವಿಶೇಷ ನ್ಯಾಯಾಲಯವು ಒಬ್ಬ ಮಾಜಿ/ಹಾಲಿ ಜನಪ್ರತಿನಿಧಿಗೆ ವಿಧಿಸಿರುವ ಗರಿಷ್ಠ ಶಿಕ್ಷೆ ಅಂದರೆ ಏಳು ವರ್ಷ ಜೈಲು. ಬೇಲೆಕೇರಿ ಕೇಸಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಆ ಶಿಕ್ಷೆ ಕೊಡಲಾಗಿತ್ತು.

 

 

PREV
Read more Articles on
click me!

Recommended Stories

ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ
ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ