ಮುದ್ದೇಬಿಹಾಳ ಪಟ್ಟಣಕ್ಕೆ ಭೇಟಿ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎಸ್ಎಸ್ ಮುಖಂಡರಾದ ಹರೀಶ್ ನಾಟಿಕಾರ್, ಬಸವರಾಜ್ ಸಿದ್ದಾಪುರ ಬಂಧಿತರು.
ವಿಜಯಪುರ (ಫೆ.2): ವಿಜಯಪುರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ವಿಜಯಪುರ ಜಿಲ್ಲೆ ಪ್ರವಾಸ ಮಾಡಲಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬೆಳಗ್ಗೆ 10 ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಬಳ್ಳಾರಿಯ ಜಿಂದಾಲ್ ಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ, ಅಲ್ಲಿಂದ 10:50 ಹೆಲಿಕಾಪ್ಟರ್ ಮೂಲಕ ಮುದ್ದೇಬಿಹಾಳ ಪಟ್ಟಣಕ್ಕೆ 11:45 ಕ್ಕೆ ಆಗಮಿಸಲಿದ್ದಾರೆ. ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಮುಜರಾಯಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯವಿಲ್ಲ: ಉಲ್ಟಾ ಹೊಡೆದರೇ ಸಿಎಂ ಸಿದ್ದರಾಮಯ್ಯ
ಮುದ್ದೇಬಿಹಾಳ ಪಟ್ಟಣದ ವಿಬಿಸಿ ಪ್ರೌಢಶಾಲೆ ಆವರಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಮದ್ಯಾಹ್ನ 2:30 ಕ್ಕೆ ಮುದ್ದೇಬಿಹಾಳ ತಾಲೂಕಿನ ಸರೂರು ಗ್ರಾಮದಲ್ಲಿನ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರೋ ಸಿಎಂ. ಬಳಿಕ 3 ಗಂಟೆಗೆ ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ ಮುದ್ದೇಬಿಹಾಳ ಪಟ್ಟಣಕ್ಕೆ ಪುನಃ ಮರಳಿ ಹೆಲಿಕಾಪ್ಟರ್ ಮೂಲಕ ಬಳ್ಳಾಪುರ ಜಿಂದಾಲ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದಿನ ಕಾರ್ಯಕ್ರಮ ಮುಗಿಸಿ ಜಿಂದಾಲ್ ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಮುದ್ದೇಬಿಹಾಳ ಶಾಸಕ ಸಿ ಎಸ್ ನಾಡಗೌಡ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಸಿಎಂ ಗೆ ಸಾಥ್ ನೀಡಲಿದ್ದಾರೆ.
ಸಿಎಂ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದವರ ಬಂಧನ:
ಮುದ್ದೇಬಿಹಾಳ ಪಟ್ಟಣಕ್ಕೆ ಭೇಟಿ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಎಸ್ಎಸ್ ಮುಖಂಡರಾದ ಹರೀಶ್ ನಾಟಿಕಾರ್, ಬಸವರಾಜ್ ಸಿದ್ದಾಪುರ ಬಂಧಿತರು.
ಇಂದು ವಿಜಯನಗರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಮುದ್ದೇಬಿಹಾಳ ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಮುದ್ದೇಬಿಹಾಳ, ನಾಲ್ವತವಾಡ ಪಟ್ಟಣಗಳಲ್ಲಿ ಅಂಬೇಡ್ಕರ್ ಮೂರ್ತಿ ನಿರ್ಮಾಣ ಕಾಮಗಾರಿ ಅಪೂರ್ಣ ಹಿನ್ನೆಲೆ ಇಂದು ಸಿಎಂ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ದಲಿತ ಸಂಘಟನೆ ಕಾರ್ಯಕರ್ತರು. ಈಗಾಲೇ ಕಾಮಗಾರಿ ಅಪೂರ್ಣವಾಗಿದ್ದು, ಸರಿಪಡಿಸುವಂತೆ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದರು. ಆದರೆ ತಾಲೂಕು ಆಡಳಿತ ನಿರ್ಲಕ್ಷ್ಯದಿಂದ ಸಿಎಂ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದ ಕಾರ್ಯಕರ್ತರು.
ರಾಯಚೂರಿಗೆ ಏಮ್ಸ್ ಮಂಜೂರು ಮಾಡಲು ಕೇಂದ್ರ ಸಚಿವೆ ಸೀತಾರಾಮನ್‌ಗೆ ಪತ್ರ ಬರೆದ ಸಿಎಂ
ಹೀಗಾಗಿ ಸಿಎಂ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸುವ ವೇಳೆ ಯಾವುದೇ ಅಹಿತರಕ ಘಟನೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಲಿತ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.