ಕೇರಳ ರಾಜ್ಯದಲ್ಲಿ ಟೊಮ್ಯಾಟೋ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯದ ಗಡಿ ಮೂಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಗುಂಡ್ಲುಪೇಟೆ (ಮೇ.13): ಕೇರಳ (Kerala) ರಾಜ್ಯದಲ್ಲಿ ಟೊಮ್ಯಾಟೋ ಜ್ವರ (Tomoto Flu) ಕಾಣಿಸಿಕೊಂಡ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯದ ಗಡಿ ಮೂಲೆ-ಮೂಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ (High Alert). ಕೇರಳದಿಂದ ರಾಜ್ಯಕ್ಕೆ (Karnataka) ಬಂದು ಹೋಗುವವರ ಸಂಖ್ಯೆ ಹೆಚ್ಚಿದ ಹಿನ್ನೆಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ ಖುದ್ದು ಮೂಲೆಹೊಳೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಕೇರಳದಿಂದ ಬರುವ ಪ್ರಯಾಣಿಕರಲ್ಲಿ 5 ವರ್ಷದೊಳಗಿನ ಮಕ್ಕಳಲ್ಲಿ ಟೊಮೆಟೋ ಜ್ವರದ ಗುಣ ಲಕ್ಷಣ ಕಂಡು ಬಂದಲ್ಲಿ ತಪಾಸಣೆಗೆ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ. 5 ವರ್ಷ ತುಂಬದ ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡರೆ ಚಿಕಿತ್ಸೆಗೆ ಗುಂಡ್ಲುಪೇಟೆ (Gundlupete) ಹಾಗೂ ಕಗ್ಗಳ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಗೆ ಕ್ರಮ ತೆಗೆದುಕೊಳ್ಳಲಾಗಿದೆ.
ಖುದ್ದು ತಪಾಸಣೆ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ ಮೂಲೆಹೊಳೆ ತಪಾಸಣಾ ಕೇಂದ್ರಕ್ಕೆ ಆಗಮಿಸಿದಾಗ ಮಳೆ ಶುರುವಾಗಿದೆ. ಮಳೆಯ ನಡುವೆ ಕೇರಳದಿಂದ ಬಂದ ಪ್ರಯಾಣಿಕರನ್ನು ತಡೆದು ಡಿಎಚ್‌ಒ ಖುದ್ದು ತಪಾಸಣೆ ನಡೆಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ ಪತ್ರಕರ್ತರೊಂದಿಗೆ ಮಾತನಾಡಿ, ಕಾಡಂಚಿನ ಗ್ರಾಮದ ಮಕ್ಕಳ ಮೇಲೆ ನಿಗಾ ಇಡುವಂತೆ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗೆ ಈಗಾಗಲೇ ಸೂಚಿಸಲಾಗಿದೆ ಎಂದರು.
undefined
Tomato Flu ಕೇರಳದಲ್ಲಿ ಮಕ್ಕಳಿಗೆ ಟೊಮೆಟೋ ಜ್ವರ, 80ಕ್ಕೂ ಹೆಚ್ಚು ಕೇಸ್ ಪತ್ತೆ!
ಜಿಲ್ಲೆಯಲ್ಲಿ 5 ವರ್ಷದೊಳಗಿನ 67 ಸಾವಿರ ಮಕ್ಕಳಿದ್ದಾರೆ. ಟೊಮ್ಯಾಟೋ ಜ್ವರ ಕೇರಳದಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆ ಕಾಡಂಚಿನ ಮಕ್ಕಳಿರುವ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ತಿಳಿಸಲಾಗಿದೆ ಎಂದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ ಅವರೊಂದಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದ ವ್ಯವಸ್ಥಾಪಕ ಪುಟ್ಟಸ್ವಾಮಿ, ಸಮುದಾಯ ಆರೋಗ್ಯಾಧಿಕಾರಿ ಇದ್ದರು.
ಈ ಜ್ವರದ ಲಕ್ಷಣಗಳು: ಹಲವು ವರ್ಷಗಳಿಂದ ದೇಶಾದ್ಯಂತ ಆಗಾಗ್ಗೆ ಬಾಧಿಸುತ್ತಿರುವ ’ಚಿಕೂನ್‌ಗುನ್ಯಾ’ ರೀತಿಯ ಕೆಲವು ಲಕ್ಷಣಗಳು ಟೊಮೆಟೊ ಜ್ವರದಲ್ಲೂ ಕಾಣಿಸಿಕೊಂಡಿದೆ. ತೀವ್ರ ಜ್ವರ, ಇಡೀ ದೇಹದಲ್ಲಿ ನೋವು, ಕೀಲುಗಳಲ್ಲಿ ಊತ, ಅತಿಯಾದ ಆಯಾಸದಂತಹ ಲಕ್ಷಣಗಳನ್ನು ಗಮನಿಸಲಾಗಿದೆ. ಸೋಂಕಿಗೆ ಒಳಗಾಗಿರುವ ಮಕ್ಕಳ ಚರ್ಮದ ಮೇಲೆ ಗುಳ್ಳೆಗಳು ಎದ್ದಿರುವುದು, ಕೆರೆತ ಉಂಟಾಗಿದೆ. ಇದರೊಂದಿಗೆ ಕೆಮ್ಮು, ನೆಗಡಿ, ಹೊಟ್ಟೆನೋವು, ವಾಂತಿ ಅಥವಾ ಬೇಧಿ, ಹೊಟ್ಟೆತೊಳಸುವಿಕೆ, ಕೈಗಳು, ಮಂಡಿಗಳಲ್ಲಿ ಬಣ್ಣ ಬದಲಾವಣೆ ಉಂಟಾಗುವ ಲಕ್ಷಣಗಳು ಕಾಣಿಸಿಕೊಳ್ಳಬಹುದಾಗಿದೆ. ಈ ಟೊಮೆಟೊ ಜ್ವರಕ್ಕೆ ಕಾರಣವಾಗಿರುವ ಅಂಶಗಳ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ.
ಆರೋಗ್ಯಾಧಿಕಾರಿಗಳು ಈ ಸೋಂಕಿನ ಕುರಿತು ತನಿಖೆ ಕೈಗೊಂಡಿದ್ದಾರೆ. ಕೇರಳದ ಕೊಲ್ಲಂ ಸೇರಿದಂತೆ ಹಲವು ಭಾಗಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಂಡಿರುವುದು ವರದಿಯಾಗಿದೆ. ಸೋಂಕಿತ ವ್ಯಕ್ತಿಯೊಂದಿಗೆ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದಾಗಿದೆ. ಸೋಂಕು ಬಹುಬೇಗ ಹರಡುವುದರಿಂದ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡುವುದನ್ನು ಅನುಸರಿಸಲಾಗುತ್ತಿದೆ. ಜ್ವರದಿಂದಾಗುವ ಬಳಲಿಕೆಯ ಪರಿಣಾಮಗಳಿಂದ ಹೊರಬರಲು ರೋಗಿಗಳು ಅಗತ್ಯ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ. ವರದಿಗಳ ಪ್ರಕಾರ, ಈ ಜ್ವರಕ್ಕೆ ನಿರ್ದಿಷ್ಟವಾದ ಔಷಧ ಇಲ್ಲ. ಸೂಕ್ತ ಆರೈಕೆ ಮತ್ತು ವಿಶ್ರಾಂತಿಯಿಂದ ರೋಗ ಗುಣಮುಖವಾಗುವುದು.
Tomato Flu ಕರ್ನಾಟಕದಲ್ಲಿ ಟೊಮೆಟೋ ಜ್ವರ ಭೀತಿ, ಕೇರಳ ಗಡಿ ಕಟ್ಟೆಚ್ಚರಕ್ಕೆ ಸುಧಾಕರ್ ಸೂಚನೆ!
ಕೇರಳದಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ ಮೂಲೆಹೊಳೆ ಚೆಕ್‌ಪೋಸ್ಟ್ ಕೇಂದ್ರದಲ್ಲಿ ಗುರುವಾರ ತಪಾಸಣೆ ಆರಂಭವಾಗಿದೆ. ಆದರೆ, 5 ವರ್ಷದೊಳಗಿನ ಮಕ್ಕಳ ತಪಾಸಣೆ ನಡೆದಾಗ ರೋಗದ ಗುಣ ಲಕ್ಷಣಗಳು ಕಾಣಿಸಿಕೊಂಡಿಲ್ಲ.
-ಡಾ.ಎಂ.ಎಸ್.ರವಿಕುಮಾರ್, ತಾಲೂಕು ಆರೋಗ್ಯಾಧಿಕಾರಿ