ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಸೋಮವಾರ ತೆರೆ ಬೀಳಲಿದೆ. ಜ.16 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾರೋಪ ಭಾಷಣ ಮಾಡಲಿದ್ದಾರೆ.
ಧಾರವಾಡ (ಜ.15): ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಸೋಮವಾರ ತೆರೆ ಬೀಳಲಿದೆ. ಜ.16 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾರೋಪ ಭಾಷಣ ಮಾಡಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಅನುರಾಗ್ ಸಿಂಗ್ ಠಾಕೂರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಡಾ.ಕೆ.ಸಿ. ನಾರಾಯಣ ಗೌಡ, ಶ್ರೀ ಆಚಾರ್ ಹಾಲಪ್ಪ ಬಸಪ್ಪ, ಶಂಕರಪಾಟೀಲ್ ಮುನೇನಕೊಪ್ಪ, ಶಾಸಕ ಅಮೃತ ದೇಸಾಯಿ ಭಾಗವಹಿಸಲಿದ್ದಾರೆ. ಸಭಾಂಗಣದ ಒಳಗಡೆ 1500 ಪ್ರತಿನಿಧಿಗಳಿಗೆ ಕಾರ್ಯಕ್ರಮ ವಿಕ್ಷಿಸಲು ಆಸನ ವ್ಯವಸ್ಥೆ ಮಾಡಲಾಗಿದ್ದು ಉಳಿದ 5,500 ಪ್ರತಿನಿಧಿಗಳು ಸಮಾರೋಪ ಸಮಾರಂಭವನ್ನು ವೀಕ್ಷಿಸಲು ವಿಶ್ವವಿದ್ಯಾಲಯ ಆವರಣದಲ್ಲಿ ಎಲ್.ಇ.ಡಿ. ಪರದೆಗಳನ್ನು ಅಳವಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.
National Youth Festival: ಸೇನೆ ಬಗ್ಗೆ ತಿಳಿಯಲು ಎರಡು ವಿಶೇಷ ಮಳಿಗೆಗಳು
ಅಮಿತ್ ತ್ರಿವೇದಿ ರಸಸಂಜೆ: ಮಧ್ಯಾಹ್ನದ ಭೋಜನದ ನಂತರ ಧಾರವಾಡ ವಿಶ್ವವಿದ್ಯಾಲಯ ಕಾಲೇಜು ಮೈದಾನದಲ್ಲಿ ಸಂಜೆ ಬಾಲಿವುಡ್ ಗಾಯಕ ಅಮಿತ್ ತ್ರಿವೇದಿ ಗಾಯನವಿರಲಿದೆ. ಕಲಾವಿದೆ ನಿರುಪಮಾ ರಾಜೇಂದ್ರ ಅವರಿಂದ ಭರತನಾಟ್ಯ ಪ್ರದರ್ಶನ ಇರಲಿದೆ. ಭರ್ಜರಿ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ 26 ನೇ ರಾಷ್ಟ್ರೀಯ ಯುವ ಜನೋತ್ಸವ ಸಂಪನ್ನಗೊಳ್ಳಲಿದೆ.
ಸೇನೆ ಬಗ್ಗೆ ತಿಳಿಯಲು ವಿಶೇಷ ಮಳಿಗೆ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ "ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” (ನೋ ಯುವರ್ ಆರ್ಮಿ) ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ ಯುವ ಜನೋತ್ಸವದ ಅಂಗವಾಗಿ ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ 'ಭಾರತೀಯ ಸೈನ್ಯದ ಕುರಿತು ಒಂದು ಸ್ಟಾಲ್ ನಿರ್ಮಿಸಲಾಗಿದೆ' ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ ಈ ಪಡೆಗಳು ಬಳಸುವ ಅತ್ಯುನ್ನತ ಶಸ್ತ್ರಾಸ್ತ್ರ ಗಳು ಕಾಣ ಸಿಗಲಿವೆ. ದೇಶದ ಸಮರ್ಥ ಪಡೆಗಳ ಬಗ್ಗೆ ತಿಳಿದುಕೊಳ್ಳಲು, ರಾಷ್ಟ್ರದ ಸಾರ್ವಭೌಮತೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಹೆಮ್ಮೆ ಮೂಡಿಸುವ ಉದ್ದೇಶದಿಂದ ಈ ಮಳಿಗೆಗಳನ್ನು ತೆರೆಯಲಾಗಿದೆ.
ಹುಬ್ಬಳ್ಳಿ: ಮೋದಿ ಕಾರ್ಯಕ್ರಮದಲ್ಲಿ ನಾಡಗೀತೆ ವೇಳೆ ಕುಸಿದು ಬಿದ್ದ ಯುವತಿ
ಅಗ್ನಿವೀರ ಸ್ಕೀಮ್ ಪ್ರವೇಶದ ಮಾಹಿತಿ: ಮಳಿಗೆಗಳನ್ನು ಎರಡು ಭಾಗವಾಗಿ ವಿಂಗಡಿಸಲಾಗಿದ್ದು, ಸೇನೆಯಲ್ಲಿ ಬಳಸುವ ಆಯುಧಗಳ ಪ್ರದರ್ಶನ ಮತ್ತು ಅಗ್ನಿವೀರ ಸ್ಕೀಮ್ ಪ್ರವೇಶದ ಕುರಿತು ಮಾಹಿತಿ ನೀಡಲಾಗುತ್ತದೆ. ಆಯುಧಗಳ ಪ್ರದರ್ಶನ ವಿಭಾಗದಲ್ಲಿ, ಭಾರತೀಯ ಸೇನೆಯಲ್ಲಿ ಶಕ್ತಿಯ ಧ್ಯೋತಕವಾಗಿರುವ ಅತ್ಯಾಧುನಿಕ ಆಯುಧಗಳನ್ನು ಇರಿಸಲಾಗಿದೆ. ವಿಶೇಷವಾಗಿ 7.62 ಎಂ.ಎಂ. ಸಿಂಗಲ್ ಅಸಾಲ್ಟ್ ರೈಫಲ್, 7.62ಎಂ.ಎಂ. ಎಲ್,ಎಮ್,ಜಿ, ಎಕೆ-47, ಸ್ನೈಪರ್ ಡಿಎಸ್ಆರ್, ಎಮ್.ಎಮ್.ಜಿ, ರಾಕೆಟ್ ಲಾಂಚರ್ ಗಳನ್ನು ಮತ್ತದರ ವೈಶಿಷ್ಟ್ಯಗಳನ್ನು ಕಣ್ಣಾರೆ ನೋಡಲು, ತಿಳಿದುಕೊಳ್ಳಲು ಅವಕಾಶವಿದೆ. ಸೇನಾ ಪಡೆಗಳು ರಾತ್ರಿ ಮತ್ತು ಹಗಲು ಬಳಸುವ ಕಣ್ಗಾವಲು ಉಪಕರಣಗಳನ್ನು ಪ್ರದರ್ಶಿಸಲಿದ್ದಾರೆ. ದೇಶ ರಕ್ಷಣೆಯಲ್ಲಿ ಕಣ್ಗಾವಲು ವ್ಯವಸ್ಥೆ ಅತ್ಯಂತ ಮಹತ್ವ ಪಡೆದಿದ್ದು, ಈ ವಲಯದಲ್ಲಿನ ನಾವೀನ್ಯತೆಗಳ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ.