Bus Accident: ಮಗುಚಿಬಿದ್ದ ಶೈಕ್ಷಣಿಕ ಪ್ರವಾಸದ ಬಸ್: ಐವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

By Sathish Kumar KHFirst Published Jan 2, 2023, 3:45 PM IST
Highlights

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಿಂದ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್‌ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ಮಗುಚಿಬಿದ್ದ ಘಟನೆ ನಡೆದಿದೆ. ಈ ದುರ್ಘಟನೆಯಿಂದ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಉಡುಪಿ/ವಿಜಯನಗರ (ಜ.02): ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಿಂದ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್‌ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ಮಗುಚಿಬಿದ್ದ ಘಟನೆ ನಡೆದಿದೆ. ಈ ದುರ್ಘಟನೆಯಿಂದ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಉಳಿದಂತೆ 15 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ವಾರ್ಷಿಕ ಪ್ರವಾಸಕ್ಕೆ ಕರೆದುಕೊಮಡು ಬರಲಾಗಿತ್ತು. ಈ ವೇಳೆ ಉಡುಪಿ ಜಿಲ್ಲೆಯ ಕಾರ್ಕಳ ತಾಳೂಕಿನ ನಲ್ಲೂರು ಬಳಿ ಬಸ್‌ ಮಗುಚಿ ಬಿದ್ದಿದೆ. ಈ ಘಟನೆಯಿಂದ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಪ್ರಮಾಣದ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯ ನಂತರ ಸಣ್ಣ ಪುಟ್ಟ ಗಾಯಗಳಿಂದ ಬಳಲುತ್ತಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಪ್ರವಾಸಿ ತಾಣಗಳು ಮಾತ್ರವಲ್ಲ, ಚಿಕ್ಕಮಗಳೂರಿನ ಧಾರ್ಮಿಕ ಕ್ಷೇತ್ರಗಳಿಗೂ ಪ್ರವಾಸಿಗರ ದಂಡು

ಪ್ರಾಣಾಪಾಯ ಆಗಿಲ್ಲ: ಇನ್ನು ಬಸ್‌ ಎಡಭಾಗಕ್ಕೆ ವಾಲಿಕೊಂಡು ಬಿದ್ದಿದ್ದರಿಂದ ಎಡಬದಿಯ ಸೀಟಿನಲ್ಲಿ ಕುಳಿತಿದ್ದವರಿಗೆ ಹೆಚ್ಚಿನ  ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ನೆರವಿಗೆ ಬಂದಿದ್ದು, ಗ್ರಾಮದ ಹತ್ತಿರವೇ ಘಟನೆ ನಡೆದಿದ್ದರಿಂದ ರಕ್ಷಣಾ ಕಾರ್ಯಾಚರಣೆಯೂ ತುರ್ತಾಗಿ ನಡೆದಿದೆ. ಗಾಯಾಳುಗಳಿಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಡಲಾಗುತ್ತಿದೆ. ಗಂಭೀರ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತದೆ. ಇನ್ನು ಬಸ್‌ ಅಪಘಾತ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದೆ.

click me!