ಭದ್ರಾ ನದಿಯಲ್ಲಿ ರಿವರ್ ರ‍್ಯಾಪ್ಟಿಂಗ್’ಗೆ ಅನುಮತಿ; ಸ್ಥಳೀಯರ ಆಕ್ರೋಶ

By Web DeskFirst Published Aug 23, 2018, 5:13 PM IST
Highlights

ಕಳಸದಿಂದ‌ ಮಾಗುಂಡಿವರೆಗೂ ರಿವರ್ ರ‍್ಯಾಪ್ಟಿಂಗ್ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ನೂರಾರು ಪ್ರವಾಸಿಗರು ಪ್ರತಿನಿತ್ಯ ರ‍್ಯಾಪ್ಟಿಂಗ್ ಮಾಡಲು ಬರುತ್ತಿದ್ದಾರೆ. ಪ್ರವಾಹದ ನದಿಯಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜಿಲ್ಲಾಡಳಿತ ಅನುಮತಿ ನೀಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು[ಆ.23]: ಪ್ರವಾಹದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ರಿವರ್ ರ‍್ಯಾಪ್ಟಿಂಗ್ ಮಾಡಲು ಚಿಕ್ಕಮಗಳೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಅನುಮತಿ ನೀಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕಳಸದಿಂದ‌ ಮಾಗುಂಡಿವರೆಗೂ ರಿವರ್ ರ‍್ಯಾಪ್ಟಿಂಗ್ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ನೂರಾರು ಪ್ರವಾಸಿಗರು ಪ್ರತಿನಿತ್ಯ ರ‍್ಯಾಪ್ಟಿಂಗ್ ಮಾಡಲು ಬರುತ್ತಿದ್ದಾರೆ. ಪ್ರವಾಹದ ನದಿಯಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜಿಲ್ಲಾಡಳಿತ ಅನುಮತಿ ನೀಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರವಾಹದ ನದಿಯಲ್ಲಿ ರ‍್ಯಾಪ್ಟಿಂಗ್ ಸ್ಪೋರ್ಟ್ಸ್ ಆಡುವುದು ಜೀವದ ಜೊತೆ ಚೆಲ್ಲಾಟವಾಡಿದಂತೆ, ರ‍್ಯಾಪ್ಟಿಂಗ್’ನಿಂದ ಅನಾಹುತವಾದರೆ ನಾವು ಜವಾಬ್ದಾರರಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರವಾಹದ ನದಿಯಲ್ಲಿ ಸಾವುಗಳ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪೊಲೀಸ್ ಇಲಾಖೆ ನದಿ ಪಾತ್ರದಲ್ಲಿ ಟ್ರಿಪ್ ಹೋಗದಂತೆ ಸ್ಥಳೀಯರಿಗೆ ಹಾಗೂ ಪ್ರವಾಸಿಗರಿಗೆ ಮನವಿ ಮಾಡಿಕೊಂಡಿದ್ದಾರೆ. ಒಟ್ಟಾರೆ ಪ್ರವಾಸಿಗರಿಗೆ ಆಟ ಪೊಲೀಸರಿಗೆ ಪ್ರಾಣಸಂಕಟ ಎಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ.

click me!