ಬೆಂಗಳೂರು (ಮೇ.24): ಈಗಾಗಲೇ ರಾಮನಗರ ಜಿಲ್ಲೆಗೆ ಕೊರೋನಾ ಸಂದರ್ಭದಲ್ಲಿ ವಿವಿಧ ರೀತಿಯಲ್ಲಿ ನೆರವಾಗುತ್ತಿರುವ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಮತ್ತಷ್ಟು ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ಅವರಿಗೆ ಇಂದು ಹಸ್ತಾಂತರ ಮಾಡಿದೆ.
ಬೆಂಗಳೂರಿನಲ್ಲಿ ಡಿಸಿಎಂ ಭೇಟಿಯಾದ ಕಂಪನಿಯ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗ್ಡೆ ಹಾಗೂ ಹಿರಿಯ ವ್ಯವಸ್ಥಾಪಕ ಕಿರಣ್ 3.5 ಕೋಟಿ ರು. ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡಿದರು.
undefined
ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ ಜಿಲ್ಲಾಡಳಿತದ ಪರವಾಗಿ ವೈದ್ಯಕೀಯ ಸಲಕರಣೆಗಳನ್ನು ಸ್ವೀಕರಿಸಿದರು.
8 ನೆಬಲೈಸರ್, 20 ಗ್ಲೂಕೋ ಮೀಟರ್, 5 ಆಂಬೂ ಬ್ಯಾಗ್, 48 ಪಲ್ಸ್ ಆಕ್ಸಿ ಮೀಟರ್, 200 ನೋಸಲ್ ಪ್ರಾಂಗ್ಸ್, 250 ಆಕ್ಸಿಜನ್ ಮಾಸ್ಕ್, 20 ಆಮ್ಲಜನಕ ಸಾಂದ್ರಕ ಹಾಗೂ 5 ಮಲ್ಟಿ ಪ್ಯಾರಾ ಬೆಡ್ ಸೈಡ್ ಮಾನೀಟರ್ ಹಸ್ತಾಂತರ ಮಾಡಲಾಯಿತು. ಇನ್ನೊಂದು ವಾರದಲ್ಲಿ 30 ಆಮ್ಲಜನಕ ಸಾಂದ್ರಕ ಸರಬರಾಜು ಮಾಡುವುದಾಗಿಯೂ ತಿಳಿಸಿದ್ದಾರೆ.
ಸ್ವಂತ ಹಣದಿಂದ ಆಕ್ಸಿಜನ್ ಪೈಪ್‌ಲೈನ್ ಅಳವಡಿಸಿದ ವೈದ್ಯ..!
ಈ ವೇಳೆ ಉತ್ಪನ್ನಗಳನ್ನು ಪಡೆದು ಮಾತನಾಡಿದ ಡಿಸಿಎಂ ಈಗಾಗಲೇ ಜಿಲ್ಲೆಗೆ ಹಲವಾರು ರೀತಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿ ನೆರವಾಗಿದೆ. ಈಗ ಕೋವಿಡ್ ಸಂಕಷ್ಟದಲ್ಲಿ ಅಗತ್ಯವಾದ ವಿವಿಧ ವೈದ್ಯಕೀಯ ಸಲಕರಣೆಗಳನ್ನು ನೀಡಿದೆ. ಇದಕ್ಕಾಗಿ ಕಂಪನಿಗೆ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದರು.
ಟೊಯೊಟಾ ಕಂಪನಿ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗಡೆ, ಹಿರಿಯ ವ್ಯವಸ್ಥಾಪಕ ಕಿರಣ ಅವರು ಈ ಸಂದರ್ಭದಲ್ಲಿ ಇದ್ದರು.