ಚಿಕ್ಕಬಳ್ಳಾಪುರ ಶಾಸಕರನ್ನು ಹುಡುಕಿಕೊಡಿ: ಡಿಸಿಸಿ ಅಧ್ಯಕ್ಷರಿಂದ ದೂರು

By Web Desk  |  First Published Jul 17, 2019, 4:38 PM IST

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಎನ್‌. ಕೇಶವ ಶೆಟ್ಟಿ ಅವರು ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ ಅವರು ಕಳೆದ 10 ದಿನಗಳಿಂದ ಕಾಣೆಯಾಗಿರೋದಾಗಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಡುಕಲು ಪ್ರಯತ್ನಿಸಿದರೂ ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಬಲವಂತವಾಗಿ ಕೂಡಿಹಾಕಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.


ಚಿಕ್ಕಬಳ್ಳಾಪುರ(ಜು.17): ರಾಜ್ಯ ರಾಜಕಾರಣ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದಲ್ಲಿಯೇ ಎಲ್ಲರ ಕುತೂಹಲದ ಕೇಂದ್ರ ಬಿಂದುವಾಗಿದೆ. ಕಳೆದ ಒಂದಷ್ಟು ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯದ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಚಿಕ್ಕಬಳ್ಳಾಪುರದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕರು ತಮ್ಮ ಕ್ಷೇತ್ರದ ಶಾಸಕರು ಕಾಣೆಯಾಗಿರೋದಾಗಿ ದೂರು ದಾಖಲಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಎನ್‌. ಕೇಶವ ಶೆಟ್ಟಿ ಅವರು ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ ಅವರು ಕಳೆದ 10 ದಿನಗಳಿಂದ ಕಾಣೆಯಾಗಿರೋದಾಗಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tap to resize

Latest Videos

ಆತ್ಮಾಹುತಿ ದಳದಂತೆ ತ್ಯಾಗಕ್ಕೆ ಬಂದಿದ್ದೇವೆ: ಸುಧಾಕರ್!

ಹುಡುಕಲು ಪ್ರಯತ್ನಿಸಿದರೂ ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಬಲವಂತವಾಗಿ ಕೂಡಿಹಾಕಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕ್ಷೇತ್ರದ ಜನರು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದು, ಶಾಸಕರನ್ನು ಹುಡುಕಿ ಕೊಡಬೇಕಾಗಿ ಕೇಳಿಕೊಂಡಿದ್ದಾರೆ.

click me!