ಖಾನಾಪುರ ಬಳಿ ಸೇತುವೆ ಮೇಲಿಂದ ಉರುಳಿ ಬಿದ್ದ ಟ್ರ್ಯಾಕ್ಟರ್: 6 ಮಂದಿ ದುರ್ಮರಣ

Published : Feb 08, 2020, 12:46 PM ISTUpdated : Feb 08, 2020, 03:23 PM IST
ಖಾನಾಪುರ ಬಳಿ ಸೇತುವೆ ಮೇಲಿಂದ ಉರುಳಿ ಬಿದ್ದ ಟ್ರ್ಯಾಕ್ಟರ್: 6 ಮಂದಿ ದುರ್ಮರಣ

ಸಾರಾಂಶ

ಸೇತುವೆ ಮೇಲಿಂದ ಟ್ರ್ಯಾಕ್ಟರ್| ಆರು ಮಂದಿ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ|ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ - ಬೋಗೂರ ಗ್ರಾಮದ ಬಳಿ ನಡೆದ ಘಟನೆ|ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಚಿಂತಾಜನಕ|

ಬೆಳಗಾವಿ[ಫೆ.08]:  ಸೇತುವೆ ಮೇಲಿಂದ ಟ್ರ್ಯಾಕ್ಟರ್ ವೊಂದು ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ - ಬೋಗೂರ ಗ್ರಾಮದ ಬಳಿ ಇಂದು[ಶನಿವಾರ] ನಡೆದಿದೆ. 

ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೋಗೂರು ಗ್ರಾಮದ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಬೋಗೂರ ಗ್ರಾಮದಿಂದ ಇಟಗಿಗೆ ಕಬ್ಬು ಕಟಾವು ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಂಭೀರ ಗಾಯಗೊಂಡವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.  ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಕೊಪ್ಪಳದಲ್ಲಿ SECI ಸಂಸ್ಥೆಗಾಗಿ 300 ಮೆಗಾವ್ಯಾಟ್‌ ಸೋಲಾರ್‌ ಪ್ರಾಜೆಕ್ಟ್‌ ಪೂರ್ಣಗೊಳಿಸಿದ ಟಾಟಾ ಪವರ್‌, ಗದಗದಲ್ಲಿ ಸಬ್‌ಸ್ಟೇಷನ್‌
ಕರ್ನಾಟಕಕ್ಕೆ ಮತ್ತೊಂದು ಬಿಗ್ ಇನ್ವೆಸ್ಟ್‌ಮೆಂಟ್, 380 ಕೋಟಿ ಬಂಡವಾಳದ ಜೊತೆಗೆ ಬೆಂಗಳೂರಿಗೆ ದೈತ್ಯ ಕಂಪನಿ ಎಂಟ್ರಿ