ಚಿಂಚೋಳಿ: ಶವಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ, ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ

Suvarna News   | Asianet News
Published : Mar 28, 2021, 10:54 AM IST
ಚಿಂಚೋಳಿ: ಶವಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ, ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ

ಸಾರಾಂಶ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರೋಡ್ ಕಲ್ಲೂರ ಗ್ರಾಮದ ಬಳಿ ನಡೆದ ಘಟನೆ| ಮೂವರ ಸ್ಥಿತಿ ಚಿಂತಾಜನಕ| ಗಾಯಾಳುಗಳಿಗೆ ಚಿಂಚೋಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ| ಈ ಸಂಬಂಧ ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು| 

ಕಲಬುರಗಿ(ಮಾ.28): ಶವಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ 18 ಜನರಿಗೆ ಗಾಯಗಳಾದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ರೋಡ್ ಕಲ್ಲೂರ ಗ್ರಾಮದ ಬಳಿ ಇಂದು(ಭಾನುವಾರ) ನಡೆದಿದೆ.

ಮೃತ ಮಹಿಳೆಯನ್ನ ಜಿಲ್ಲೆ ಮಳಖೇಡ ಗ್ರಾಮದ ಯಲ್ಲಮ್ಮ ಭೀಮರಾವ್ (41) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಚಿಂಚೋಳಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಾವೇರಿ: ಟ್ರ್ಯಾಕ್ಟರ್‌ ಪಲ್ಟಿ, ಬಿಹಾರದ ಇಬ್ಬರು ಕಾರ್ಮಿಕರ ದುರ್ಮರಣ

ಟೈರ್ ಸಿಡಿದು ರಸ್ತೆ ಬದಿಗೆ ಉರುಳಿದ್ದ ಟ್ರಾಕ್ಟರ್ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ