ಮಲೆನಾಡಿನಲ್ಲಿ ಬಿರುಸಿನ ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು- ದಕ್ಷಿಣಕನ್ನಡ ಜಿಲ್ಲೆಗಳ ಸಂಪರ್ಕದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಆ.14 ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಿ ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ. ಮಂಗಳೂರು-ಬೆಂಗಳೂರು ರೈಲು ಸಂಚಾರವೂ ಆ.11ರ ತನಕ ಸ್ಥಗಿತವಾಗಿದೆ.
ಚಿಕ್ಕಮಗಳೂರು(ಆ.10): ಚಿಕ್ಕಮಗಳೂರು- ದಕ್ಷಿಣಕನ್ನಡ ಜಿಲ್ಲೆಗಳ ಸಂಪರ್ಕದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಆ.14 ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಿ ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಆ.14ರ ಮಧ್ಯ ರಾತ್ರಿ 12 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡದ ಮಣ್ಣು ಆಗಾಗ ಕುಸಿಯುತ್ತಿದ್ದು, ಮಣ್ಣು ತೆರವು ಕಾರ್ಯ ನಡೆಯುತ್ತಿದೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇಂತಹ ಸಂದರ್ಭದಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಆ.14 ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರವನ್ನೂ ಆ.11ರ ತನಕ ಸ್ಥಗಿತಗೊಳಿಸಲಾಗಿದೆ.
ಶೃಂಗೇರಿ ತಾಲೂಕು ಹಳ್ಳಿಗಳಲ್ಲಿ ಕಗ್ಗತ್ತಲು