ಬೆಂಗ್ಳೂರು ಪ್ರತಿಭಟನೆಯಲ್ಲಿದ್ದ ಹಾಸನ ಜಿಲ್ಲೆಯ ಆಶಾ ಕಾರ್ಯಕರ್ತೆಯ ಮಗನ ಧಾರುಣ ಸಾವು

Published : Nov 26, 2026, 12:49 PM IST
Hassan

ಸಾರಾಂಶ

ಬೆಂಗಳೂರಿನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಾಸನದ ಆಶಾ ಕಾರ್ಯಕರ್ತೆಯೊಬ್ಬರ ಮಗ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಾವಿನ ಸುದ್ದಿ ಕೇಳಿ ತಾಯಿ ಗ್ರಾಮಕ್ಕೆ ಮರಳಿದ್ದು, ಆಲೂರು ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹಾಸನ: ಕಳೆದ 10 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು (Asha Worker) ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮಗ ಅಪಘಾತದಲ್ಲಿ ಮೃತರಾಗಿದ್ದಾರೆ. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಶಾ ಕಾರ್ಯಕರ್ತೆ ಗ್ರಾಮಕ್ಕೆ ಮರಳಿದ್ದಾರೆ.

21 ವರ್ಷದ ಸುಜಯ್ ಸಾವು

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ರೂಪಾ ಅವರು ಎಲ್ಲರಂತೆ ಬೆಂಗಳೂರಿನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರೂಪಾ ಅವರ ಮಗ 21 ವರ್ಷದ ಸುಜಯ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಸುಜಯ್ ಬೈಕ್ ಅಪಘಾತದಲ್ಲಿ ಮೃತರಾಗಿದ್ದು, ಆಕ್ಸಿಡೆಂಟ್‌ಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ನವೆಂಬರ್ 25ರಂದು ಲಕ್ಷ್ಮೀಪುರ ಬಳಿ ಈ ಅಪಘಾತ ಸಂಭವಿಸಿದೆ.

ಕುಟುಂಬಸ್ಥರ ಕಣ್ಣೀರು

ಸುಜಯ್ ಮೃತದೇಹವನ್ನು ಆಲೂರು ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮರಣೋತ್ತರ ಶವಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಇಂದು ರಾತ್ರಿಯೇ ಸುಜಯ್ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದು, ಆಸ್ಪತ್ರೆ ಆವರಣದಲ್ಲಿ ತಾಯಿ ಸೇರಿದಂತೆ ಸಂಬಂಧಿಕ ಆಕ್ರಂದನ ಮುಗಿಲು ಮುಟ್ಟಿದೆ. ಈ ಬೈಕ್ ಅಪಘಾತ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

PREV
Read more Articles on
click me!

Recommended Stories

ಮಂತ್ರ ಮಾಂಗಲ್ಯದಲ್ಲೇ ಮಂಡ್ಯ ಹುಡುಗಿ ಡಾ. ಶ್ರೀನಿಧಿ ವರಿಸಿದ ಶಾಸಕ ದರ್ಶನ್ ಧ್ರುವನಾರಾಯಣ! ಡಿಸಿಎಂ ಹಾಜರು
Asha Workers: 'ಸರ್ಕಾರಕ್ಕೆ ಹೆದರಿಸುವ ಕೆಲಸ ಮಾಡ್ಬೇಡಿ', ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಂದೇಶ!