ಫೋನ್ ಕದ್ದಾಲಿಕೆ ಬಗ್ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ರಾಜ್ಯದ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಿರುವುದನ್ನು ನೋಡಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಹಾಸನ(ಆ.20): ರಾಜ್ಯದ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಿರುವುದನ್ನು ನೋಡಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಗಂಭೀರವಾಗಿ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತನಿಖೆ ನಡೆಸಲಿ, ನಾವು ಸಿದ್ಧರಿದ್ದೇವೆ ಎಂದು ಸವಾಲು ಹಾಕಿದರು.
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ಗಮನಿಸಿದರೆ ರಾಜ್ಯದಲ್ಲಿ ಮೇಲ್ನೋಟಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಆಗಿರಬಹುದು ಎಂಬ ಅನುಮಾನ ಹುಟ್ಟುತ್ತದೆ ಎಂದರು.
ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಸಹ ಯಾವುದೇ ತನಿಖೆಗೂ ಸಿದ್ಧರಿರುವುದಾಗಿ ಹೇಳಿದ್ದಾರೆ. ಅಲ್ಲದೇ, ಪ್ರಕರಣವನ್ನು ಸಿಬಿಐಗೆ ಕಾಂಗ್ರೆಸ್ ನಾಯಕರು ಸಹ ಆಗ್ರಹಿಸಿದ್ದನ್ನು ಇಲ್ಲಿ ರೇವಣ್ಣ ಸ್ಮರಿಸಿದರು.
undefined
ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರದವರೂ ಜೆಡಿಎಸ್ ಮುಖಂಡರ ಫೋನ್ ಕದ್ದಾಲಿಕೆ ಮಾಡಿದ್ದರು. ಕೇಂದ್ರದವರು ಫೋನ್ ಟ್ಯಾಪಿಂಗ್ ಮಾಡಿ ಚುನಾವಣೆ ಸಮಯದಲ್ಲಿ ನಮ್ಮ ಬೆಂಬಲಿಗರ ಮೇಲೆ ಐಟಿ ದಾಳಿ ನಡೆಸಿದ್ದರು ಎಂದು ಆರೋಪಿಸಿದರು.
ಹಾಸನ: ವಿಷ್ಣುಸಮುದ್ರ ಕೆರೆಯಲ್ಲಿ ದೋಣಿ ವಿಹಾರ
ಎಚ್.ವಿಶ್ವನಾಥ್ ಅವರ ಋುಣವನನ್ನು ತೀರಿಸಲು ಯಡಿಯೂರಪ್ಪನವರು ವಿಶ್ವನಾಥ್‌ರ ಅಳಿಯನ್ನು ಲೋಕೋಪಯೋಗಿ ಇಲಾಖೆ ಚೀಫ್ ಎಂಜಿನಿಯರ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೇ, ಯಡಿಯೂರಪ್ಪನವರು ವಿಶ್ವನಾಥ್ ಅವರ ಒತ್ತಾಯದ ಮೇರೆಗೆ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದಾರೆ ಎಂದು ಟೀಕಿಸಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸುಮ್ಮನೆ ಮನೆಯಲ್ಲಿ ಕುಳಿತಿದ್ದ ಎಚ್.ವಿಶ್ವನಾಥ್ ಅವರನ್ನು ಎಚ್.ಡಿ. ಕುಮಾರಸ್ವಾಮಿ ಶಾಸಕರನ್ನಾಗಿ ಮಾಡಿದರು. ಆದರೆ, ವಿಶ್ವನಾಥ್ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದರು ಎಂದು ಆರೋಪಿಸಿದ ಅವರು, ವಿಶ್ವನಾಥ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿರುವ ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಇದ್ದರು.