ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಬ್ಬಳ್ಳಿಯ ಮನೆಯ ಬಳಿಯೇ ವಿದ್ಯತ್ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದೆ.
ಹುಬ್ಬಳ್ಳಿ (ಮೇ 12): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಬ್ಬಳ್ಳಿ ನಿವಾಸದ ಬಳಿಯೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಹೊತ್ತಿ ಉರಿದಿದೆ. ಇನ್ನು ಈ ಘಟನೆಯನ್ನು ಕಂಡ ಜನರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯುವ ಮೊದಲು ವಿದ್ಯುತ್ ದರ ಏರಿಕೆ ಮಾಡಿರುವುದಕ್ಕೆ ಜನರ ಶಾಪದಿಂದಲೇ ಸಿಎಂ ಮನೆ ಬಲಿಯ ಟ್ರಾನ್ಸ್‌ಫಾರ್ಮರ್ ಸಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ನಗರದ ವಿಶ್ವೇಶ್ವರನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯ ಸಮೀಪವಿರುವ ವಿದ್ಯುತ್ ಪರಿವರ್ತಕ (electric transformer blast) ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಟ್ರಾನ್ಸಫರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಟ್ರಾನ್ಸ್‌ಫಾರ್ಮರ್ ಸ್ಪೋಟದಿಂದ ಉಂಟಾದ ಶಬ್ದ ಹಾಗೂ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಕೆಲ ಕಾಲ ಆತಂಕದ ವಾತಾವರಣ ಉಂಟಾಗಿತ್ತು. ಸ್ಥಳೀಯ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದ್ದಾರೆ.
ರಾಜ್ಯದ ಜನತೆಗೆ ವಿದ್ಯುತ್ ಶಾಕ್: ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ
ಸಿಎಂ ವಿರುದ್ಧ ಜನರಿಂದ ಆಕ್ರೋಶ: ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ವಿದ್ಯುತ್ ಸರಬರಾಜು ದರ ಏರಿಕೆ ಮಾಡಲು ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆ ಆಗಿತ್ತು. ಆದರೆ, ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ವಿದ್ಯುತ್ ದರ ಹೆಚ್ಚಳವನ್ನು ಮುಂದೂಡುತ್ತಾ ಬಂದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೊನೆಯ ದಿನಗಳ ಆಡಳಿತಾವಧಿಯಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿದ್ದಾರೆ. ಅದಕ್ಕಾಗಿಯೇ ಅವರ ಮನೆಯ ಬಳಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ ಮಾಡಿ ಆದೇಶ: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ವು (karnataka electricity regulatory commission- KERC) ಸಲ್ಲಿಸಿದ್ದ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಒಪ್ಪಿಗೆ ಲಭಿಸಿದ್ದು, ಪ್ರತಿ ಯೂನಿಟ್ ಗೆ ಶೇ.16.83 ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಏಪ್ರಿಲ್ 1 ರಿಂದ ಪೂರ್ವಾನ್ವಯ ಆಗುವಂತೆ ಪ್ರತಿ ಯೂನಿಟ್‌ಗೆ 1.46 ರೂ. ಹೆಚ್ಚಳ ಮಾಡುವಂತೆ ಎಲ್ಲ ಎಸ್ಕಾಂಗಳು ಬೇಡಿಕೆ ಸಲ್ಲಿಸಿದ್ದವು. ಆದರೆ, ಈಗ ಕೇವಲ 70 ಪೈಸೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹೊಸ ದರ ಜಾರಿಯಾದ ಬೆನ್ನಲ್ಲೇ ವಿದ್ಯುತ್ ಗ್ರಾಹಕರ ಪ್ರತಿ ತಿಂಗಳ ಬಿಲ್‌ನಲ್ಲಿ ಶೇ.8.31ರಷ್ಟು ಃನ ಪಾವತಿ ಹೆಚ್ಚಾಗಲಿದೆ ಎಂದು ತಿಳಿದುಬಂದಿದೆ.
ರಾಜ್ಯದ ಜನತೆಗೆ ಭರ್ಜರಿ ಆಫರ್: ಬಿಜೆಪಿ ಗಳಿಸುವ ಮತಗಳನ್ನು ಗೆಸ್ ಮಾಡಿ, ಬಹುಮಾನ ಗೆಲ್ಲಿ