ಎಲ್ಲರನ್ನು ಒಳಗೊಂಡ ನಗರವಾಗಿ ತುಮಕೂರು ಮಾರ್ಪಾಡು

By Kannadaprabha News  |  First Published Jun 29, 2023, 6:02 AM IST

ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವ ತುಮಕೂರು ನಗರವನ್ನು ಪ್ರಮುಖ ಸ್ಮಾರ್ಚ್‌ ನಗರವನ್ನಾಗಿ ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ಸ್ಮಾರ್ಚ್‌ ಸಿಟಿ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿಯು ಜೀವನದ ಗುಣಮಟ್ಟವನ್ನು ಸುಧಾರಿಸಿ ಕೌಶಲ್ಯಭರಿತ ಉದ್ಯೋಗವನ್ನು ಸೃಷ್ಟಿಸುತ್ತದೆ ಮತ್ತು ವಿಶೇಷವಾಗಿ ಬಡವರು ಮತ್ತು ಹಿಂದುಳಿದವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಹೊಂದಿದ ನಗರವಾಗಿ ತುಮಕೂರು ಮಾರ್ಪಾಡಾಗುತ್ತದೆ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್‌ ಕೆ. ಅವರು ತಿಳಿಸಿದರು.


  ತುಮಕೂರು :  ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವ ತುಮಕೂರು ನಗರವನ್ನು ಪ್ರಮುಖ  ಸ್ಮಾರ್ಟ್ ನಗರವನ್ನಾಗಿ ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ಸ್ಮಾರ್ಟ್ ಸಿಟಿ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿಯು ಜೀವನದ ಗುಣಮಟ್ಟವನ್ನು ಸುಧಾರಿಸಿ ಕೌಶಲ್ಯಭರಿತ ಉದ್ಯೋಗವನ್ನು ಸೃಷ್ಟಿಸುತ್ತದೆ ಮತ್ತು ವಿಶೇಷವಾಗಿ ಬಡವರು ಮತ್ತು ಹಿಂದುಳಿದವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಹೊಂದಿದ ನಗರವಾಗಿ ಮಾರ್ಪಾಡಾಗುತ್ತದೆ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್‌ ಕೆ. ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 178 ಯೋಜನೆಗಳ ಪೈಕಿ 170 ಯೋಜನೆಗಳು ಈಗಾಗಲೇ ಪೂರ್ಣಗೊಂಡಿದ್ದು, 6 ಯೋಜನೆಗಳು ಪ್ರಗತಿಯಲ್ಲಿವೆ. ಪೂರ್ಣಗೊಂಡ ಕಟ್ಟಡಗಳ ನಿರ್ವಹಣೆಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ ಸೂಕ್ತ ವರದಿಯನ್ನು ತಮಗೆ ಸಲ್ಲಿಸುವಂತೆ  ಸ್ಮಾರ್ಟ್ ಸಿಟಿ ಎಂಡಿ ರಂಗಸ್ವಾಮಿ ಅವರಿಗೆ ಸೂಚಿಸಿದರು.

Latest Videos

undefined

ನಗರದಲ್ಲಿ ಈಗಾಗಲೇ ಸುಸಜ್ಜಿತವಾದ ಟ್ರಾಮಾಕೇರ್‌ ಸೆಂಟರ್‌ಅನ್ನು ಅನುಷ್ಟಾನಗೊಳಿಸಿದ್ದು, ಸಾರ್ವಜನಿಕ ಬಳಕೆಗಾಗಿ ಜಿಲ್ಲಾ ಆಸ್ಪತ್ರೆ ವತಿಯಿಂದ ನಿರ್ವಹಿಸಲು ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಟೆಂಡರ್‌ ಕರೆಯುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ವೀಣಾ ಅವರಿಗೆ ಸೂಚಿಸಿದರು.

ನಗರದಲ್ಲಿ ಅರಣ್ಯೀಕರಣ ಹಾಗೂ ರಸ್ತೆಗಳ ಸೌಂದರೀಕರಣದ ಬಗ್ಗೆ ಚರ್ಚಿಸಿದ ಅವರು, ಸಸಿಗಳನ್ನು ನೆಟ್ಟು 5 ವರ್ಷ ನಿರ್ವಹಣೆ ಮಾಡುವ ಸಂಬಂಧ ಅರಣ್ಯ ಇಲಾಖೆಗೆ ಹಂತಹಂತವಾಗಿ ಅನುದಾನ ಠೇವಣಿ ಇಡುವಂತೆ ಸೂಚಿಸಿದರು.

ಸ್ಮಾರ್ಚ್‌ ಸಿಟಿ ವತಿಯಿಂದ ಜಿಮ್ನಾಸ್ಟಿಕ್‌ ಸೆಂಟರ್‌ಅನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಶಕ್ಕೆ ಹಸ್ತಾಂತರಿಸುವಂತೆ ಸೂಚಿಸಿದ ಅವರು, ಬಿ.ಎಚ್‌ ರಸ್ತೆಯ ಎರಡೂ ಬದಿಗಳಲ್ಲಿ ಸ್ವಾಗತ ಕಮಾನು ನಿರ್ಮಿಸುವ ಸಂಬಂಧ ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಚರ್ಚಿಸಿ ವರದಿ ನೀಡುವಂತೆ ಸ್ಮಾರ್ಚ್‌ ಸಿಟಿ ಎಂಡಿ ರಂಗಸ್ವಾಮಿ ಅವರಿಗೆ ಸೂಚಿಸಿದರು.

ತುಮಕೂರು ಸ್ಮಾರ್ಚ್‌ ಸಿಟಿ ಲಿಮಿಟೆಡ್‌ ವತಿಯಿಂದ ನಿರ್ಮಿಸಿರುವ ಕನ್ರ್ಸವೆನ್ಸಿ ಪಾರ್ಕಿಂಗ್‌ ಜಾಗವನ್ನು ಬಳಸಿಕೊಳ್ಳುವ ಸಂಬಂಧ ತುಮಕೂರು ಮಹಾನಗರಪಾಲಿಕೆ ವತಿಯಿಂದ ಶುಲ್ಕವನ್ನು ನಿಗಧಿಪಡಿಸಿ ಗುತ್ತಿಗೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಸಂಸದ ಜಿ.ಎಸ್‌.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪೂರ್‌ ವಾಡ್‌, ಪಾಲಿಕೆ ಆಯುಕ್ತ ದರ್ಶನ್‌, ಸ್ಮಾರ್ಚ್‌ ಸಿಟಿ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಉದ್ಯಾನವನಗಳ ನಿರ್ವಹಣೆಗೆ ಕ್ರಮವಹಿಸಿ

ತುಮಕೂರು ಸ್ಮಾರ್ಚ್‌ ಸಿಟಿ ಲಿಮಿಟೆಡ್‌ ವತಿಯಿಂದ ನಿರ್ಮಿಸಲಾಗಿರುವ ಉದ್ಯಾನವನಗಳ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಸ್ಮಾರ್ಚ್‌ ರಸ್ತೆಗಳಲ್ಲಿ ಅಳವಡಿಸಿರುವ ಡಕ್ಟಿಂಗ್‌ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಲು ಸೂಕ್ತ ದರಗಳನ್ನು ನಿಗದಿಗೊಳಿಸಿ ತಮಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

click me!