ಹೆಣ್ಣಾಗಿ ಪರಿವರ್ತನೆಗೊಂಡಿದ್ದ ಯುವಕ: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಕಾರಣ?

Kannadaprabha News   | Asianet News
Published : Mar 02, 2020, 09:57 AM IST
ಹೆಣ್ಣಾಗಿ ಪರಿವರ್ತನೆಗೊಂಡಿದ್ದ ಯುವಕ: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಕಾರಣ?

ಸಾರಾಂಶ

ತೃತೀಯ ಲಿಂಗಿ ಮೃತದೇಹ ಪತ್ತೆ| 8 ತಿಂಗಳ ಹಿಂದೆ ತೃತೀಯ ಲಿಂಗಿ ಆಗಿ ಪರಿವರ್ತನೆ ಆಗಿದ್ದ ಗೌತಮ್‌| ತೃತೀಯ ಲಿಂಗಿಯ ಅನುಮಾನಾಸ್ಪ ಸಾವು: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ|

ಬೆಂಗಳೂರು[ಮಾ.02]: ತೃತೀಯ ಲಿಂಗಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತ ದೇಹಪತ್ತೆಯಾಗಿದೆ. ಮೃತರನ್ನು ಗೌತಮ್ ಅಲಿಯಾಸ್‌ ರಮ್ಯಾ ಎಂದು ಗುರುತಿಸಲಾಗಿದೆ.

ಗೌತಮ್‌ ಎಂಟು ತಿಂಗಳ ಹಿಂದೆಯಷ್ಟೇ ತೃತೀಯ ಲಿಂಗಿಯಾಗಿ ಬದಲಾಗಿದ್ದು, ಟೆಂಟ್‌ ರಸ್ತೆ ಸಮೀಪ ಮನೆಯೊಂದರಲ್ಲಿ ಪ್ರತ್ಯೇಕವಾಗಿ ವಾಸವಿದ್ದರು. ಶನಿವಾರ ಮನೆಯಿಂದ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆಯೇ ಅವರು ಮೃತಪಟ್ಟಿರುವ ಶಂಕೆ ಇದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೆಣ್ಣಾಗಿ ಪರಿವರ್ತನೆಗೊಂಡಿದ್ದ ರಮ್ಯಾ, ಪರಿಚಯಸ್ಥ ಯುವಕನೊಬ್ಬನ ಜೊತೆ ಒಡನಾಟವಿಟ್ಟುಕೊಂಡಿದ್ದರು. ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರೆಂಬ ಮಾಹಿತಿ ಇದೆ. ಜೊತೆಗೆ, ಹಣಕ್ಕಾಗಿ ಯಾರಾದರೂ ಅವರನ್ನು ಕೊಲೆ ಮಾಡಿರುವ ಸಂಶಯವೂ ಇದೆ. ಕುಟುಂಬಸ್ಥರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!