ಹುಬ್ಬಳ್ಳಿ: ಕಿಮ್ಸ್‌ನಲ್ಲಿ 96 ಜನ ಬ್ಲ್ಯಾಕ್‌ ಫಂಗಸ್‌ ಸೋಂಕಿತರಿಗೆ ಚಿಕಿತ್ಸೆ

Kannadaprabha News   | Asianet News
Published : May 27, 2021, 07:12 AM IST
ಹುಬ್ಬಳ್ಳಿ: ಕಿಮ್ಸ್‌ನಲ್ಲಿ 96 ಜನ ಬ್ಲ್ಯಾಕ್‌ ಫಂಗಸ್‌ ಸೋಂಕಿತರಿಗೆ ಚಿಕಿತ್ಸೆ

ಸಾರಾಂಶ

* ಕಿಮ್ಸ್‌ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆಯ 20 ಜನ ಸೋಂಕಿತರು * ಇತರೆ ಜಿಲ್ಲೆಗಳಿಂದ ಒಟ್ಟು 96 ಜನ ಬ್ಲ್ಯಾಕ್‌ ಫಂಗಸ್‌ ಸೋಂಕಿತರಿಗೆ ಚಿಕಿತ್ಸೆ * ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್‌ ಆಸ್ಪತ್ರೆ

ಹುಬ್ಬಳ್ಳಿ(ಮೇ.27): ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಬ್ಲ್ಯಾಕ್‌ ಫಂಗಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಅನ್ಯ ಜಿಲ್ಲೆಗಳ ರೋಗಿಗಳ ಪೈಕಿ ಕೆಲವರು ತಮ್ಮ ತವರು ಜಿಲ್ಲೆಗೆ ತೆರಳಿದ್ದಾರೆ. ಇದರಿಂದಾಗಿ ಸದ್ಯ 96 ಜನ ಬ್ಲ್ಯಾಕ್‌ ಫಂಗಸ್‌ ಸೋಂಕಿತರಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್‌ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕಿಮ್ಸ್‌ನಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ 109 ಜನ ಬ್ಲ್ಯಾಕ್‌ ಫಂಗಸ್‌ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ಸೋಂಕಿತರು ತಮ್ಮ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿದ್ದಾರೆ.

ಕೊರೋನಾ ಪ್ರವೇಶಕ್ಕೆ ರಹದಾರಿ: ಧಾರವಾಡದಲ್ಲಿ ಅಂತರ್‌ ಜಿಲ್ಲಾ ಗಡಿ ಚೆಕ್‌ಪೋಸ್ಟೇ ಇಲ್ಲ!

ಸದ್ಯ ಕಿಮ್ಸ್‌ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆಯ 20 ಜನ ಸೇರಿದಂತೆ ಇತರ ಜಿಲ್ಲೆಗಳಿಂದ ಒಟ್ಟು 96 ಜನ ಬ್ಲ್ಯಾಕ್‌ ಫಂಗಸ್‌ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
 

PREV
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ