ಕೇರಳದ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಇಲಾಖೆ ಸ್ಪಷ್ಟಪಡಿಸಿದೆ.
ಮಂಗಳೂರು(ಏ.14): ಕೇರಳದ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಇಲಾಖೆ ಸ್ಪಷ್ಟಪಡಿಸಿದೆ.
ತಸ್ಲೀಮಾ ಎಂಬವರು ಏಪ್ರಿಲ್ 8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮಾ (65) ಎಂಬ ಮಹಿಳೆ ಏಪ್ರಿಲ್ 8ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಕಾಯಿಲೆಯಿಂದ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ನಾಳೆಯಿಂದ ಸರಳ, ಸ್ಮಾರ್ಟ್ ಲಾಕ್‌ಡೌನ್?: ಯಾರಿಗೆಲ್ಲಾ ಇರುತ್ತೆ ರಿಯಾಯಿತಿ?
ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂತಿರುಗಿರುತ್ತಾರೆ. ಜೈನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂತಿರುಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆ ತಿಳಿಸಿದೆ.