Bengaluru rain: ವಾಹನಗಳ ಮೇಲೆ ಬಿದ್ದ ಮರ, ಸಾರ್ವಜನಿಕರ ಪರದಾಟ

Published : May 20, 2023, 07:11 PM IST
Bengaluru rain: ವಾಹನಗಳ ಮೇಲೆ ಬಿದ್ದ ಮರ, ಸಾರ್ವಜನಿಕರ ಪರದಾಟ

ಸಾರಾಂಶ

ಬೆಂಗಳೂರಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮ ಮುಕ್ತಾಯಗೊಂಡ ಬೆನ್ನಲ್ಲೇ ನಗರದಲ್ಲಿ ಭರ್ಜರಿ ಮಳೆಯಾಗಿದೆ.

ಬೆಂಗಳೂರು (ಮೇ 20):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಕ್ತಾಯಗೊಂಡ ಬೆನ್ನಲ್ಲೇ ನಗರದಲ್ಲಿ ಗುಡುಗುಸಹಿತ ಭಾರಿ ಮಳೆ ಸುರಿದಿದೆ. ಕೆಲವೆಡೆ ಮರಗಳು ಬಿದ್ದಿವೆ.

ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಾದ್ಯಂದ ಸಾರ್ವಜನಿಕರು ಆಗಮಿಸಿದ್ದರು. ಸಮಾರಂಭದ ವೇಳೆಯೇ ಮಳೆ ಬರುವ ಸಾಧ್ಯತೆಯಿತ್ತು. ಆದರೆ, ಕಾರ್ಯಕ್ರಮದ ಮುಗಿದ ಬಳಿಕ ಮಳೆ ಬಂದಿದ್ದು, ಇದು ಕಾಂಗ್ರೆಸ್‌ ಸರ್ಕಾರಕ್ಕೆ ಶುಭ ಸೂಚನೆ ಎಮದು ಹೇಳಲಾಗುತ್ತಿದೆ. ಮತ್ತೊಂದೆಡೆ ನಗರದಲ್ಲಿ ಗುಡುಗು, ಗಾಳಿ ಸಹಿತ ಭರ್ಜರಿ ಮಳೆಯಾಗುವಾಗ ಕೆಲವೆಡೆ ಮರಗಳು ಬಸ್‌ ಹಾಗೂ ಕಾರುಗಳ ಮೇಲೆ ಉರುಳಿ ಬಿದ್ದಿವೆ.

ಸಿದ್ದರಾಮಯ್ಯ ಸಿಎಂ ಆದ ದಿನವೇ ಶುಭಸೂಚನೆ: ರಾಜ್ಯ ವಿವಿಧೆಡೆ ಭರ್ಜರಿ ಮಳೆ

5 ದಿನಗಳ ಕಾಲ ಬೆಂಗಳೂರಲ್ಲಿ ಮಳೆ: ಇಂದು ರಾಜಧಾನಿಯಲ್ಲಿ ಮಳೆ ಮುನ್ಸೂಚನೆ ಇತ್ತು ಈ ಹಿನ್ನಲೆ ಆರಂಭ ಆದ ಗಾಳಿ ಸಹಿತ ಮಳೆಯಾಗಿದೆ. ಬೆಂಗಳೂರಿನಲ್ಲಿ ಐದು  ದಿನಗಳ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಗರದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ಸಮುದ್ರ ಮಟ್ಟದಲ್ಲಿ ಉತ್ತರ ಭಾಗದಲ್ಲಿ ವಾಯು ಭಾರ ಕುಸಿತ ಹಿನ್ನಲೆಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಬೇರೆ ಬೇರೆ ಭಾಗಗಳಲ್ಲಿ 5 ದಿನಗಳ ಮಳೆಯಾಗಲಿದೆ. ಸಂಜೆಯಾಗ್ತಿದಂತೆ ನಗದರ ಹಲವು ಭಾಗಗಳಲ್ಲಿ ಜಿಟಿ ಜಿಟಿ ಮಳೆ ಆರಂಭಬವಾಗಿದೆ.

ರಸ್ತೆಗೆ ಮುರಿದು ಬಿದ್ದ ಮರ:
ಬೆಂಗಳೂರಿನಲ್ಲಿ ಭಾರಿ ಗಾಳಿ ಮಳೆಗೆ ಬೃಹತ್‌ ಮರಗಳು ರಸ್ತೆಗೆ ಮುರಿದು ಬಿದ್ದಿವೆ. ಆನಂದ್ ರಾವ್ ಸರ್ಕಲ್ ಬಳಿ ನಿಲ್ಲಿಸಲಾಗಿದ್ದ ಕಾರುಗಳ ಮೇಲೆ ಮರಗಳು ಬಿದ್ದಿವೆ. ಈ ಘಟನೆಯಲ್ಲಿ ಎರಡು ಕಾರು ಒಂದು ಆಟೋಗಳು ಜಖಂ ಆಗಿವೆ. ಮರದ ಕೆಳಗೆ ಸಿಲುಕಿರೋ ವಾಹನಗಳನ್ನು ತೆಗೆದುಕೊಳ್ಳಲು ವಾಹನ ಸವಾರರು ಪರದಾಡುತ್ತಿದ್ದಾರೆ. ಆದರೆ, ಅದೃಷ್ಟವಶಾತ್‌ ವಾಹನಗಳಲ್ಲಿ ಯಾರೂ ಇಲ್ಲದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯ ಜನರು ಸೇರಿಕೊಂಡು ಬಿದ್ದಿರುವ ಮರವನ್ನು ಎತ್ತಿ ಒಂದು ಕಾರನ್ನು ಹೊರಗೆ ತೆಗೆಯಲಾಗಿದೆ. ಉಳಿದ ಎರಡು ವಾಹನಗಳು ಭಾಗಶಃ ಜಖಂ ಆಗಿದ್ದು, ಅವುಗಳನ್ನು ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ನೆರವಿನಿಂದ ಹೊರಗೆ ತೆಗೆಯಲಾಗುತ್ತಿದೆ.

ಸಿದ್ದು ಸಿಎಂ, ಡಿಕೆಶಿ ಡಿಸಿಎಂ ಪ್ರಮಾಣವಚನದಲ್ಲಿ ಕಳ್ಳರ ಕೈಚಳಕ: ಅಟ್ಟಾಡಿಸಿ ಹಿಡಿದ ಪೊಲೀಸರು

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಶುಭಸೂಚನೆ: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಶನಿವಾರ ಬೆಳಗ್ಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇನ್ನು ಸಚಿವ ಸಂಪುಟ ಸಭೆಯನ್ನು ನಡೆಸಿದ ಕಾಂಗ್ರೆಸ್‌ ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಒಪ್ಪಿಗೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಈ ಮೂಲಕ ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಪರಿಸರವೇ ಶುಭಸೂಚನೆ ನೀಡಿದೆ ಎಂದು ಗ್ರಾಮೀಣ ಜನರು ಹೇಳುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿ.ಕೆ. ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುವ ಕಾರ್ಯಕ್ರಮದ ವೇಳೆಯೇ ಮಳೆ ಬರುವ ಸೂಚನೆಯಿತ್ತು. ಆದರೆ, ಪದಗ್ರಹಣ ಕಾರ್ಯಕ್ರಮ ಸಂಪೂರ್ಣವಾಗಿ ಮುಕ್ತಾಯಗೊಂಡ ನಂತರ ಬೆಳಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

PREV
Read more Articles on
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ