ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆಯಲ್ಲಿ ಮುಂದಿನ ವಾರದಿಂದ ಪ್ರಾಯೋಗಿಕ ಸಂಚಾರ

Kannadaprabha News   | Kannada Prabha
Published : Nov 06, 2025, 06:45 AM IST
Hosakere halli

ಸಾರಾಂಶ

ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಬಾಕಿ ಕಾಮಗಾರಿಯನ್ನು ವಾರಾಂತ್ಯದೊಳಗೆ ಪೂರ್ಣಗೊಳಿಸಿ, ಮುಂದಿನ ವಾರದಿಂದ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ನೀಡುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು : ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಬಾಕಿ ಕಾಮಗಾರಿಯನ್ನು ವಾರಾಂತ್ಯದೊಳಗೆ ಪೂರ್ಣಗೊಳಿಸಿ, ಮುಂದಿನ ವಾರದಿಂದ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ನೀಡುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೇಲ್ಸೇತುವೆ ಪರಿಶೀಲನೆ

ವರ್ತುಲ ರಸ್ತೆಯ ಪಿ.ಇ.ಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿ ಕೈಗೆತ್ತಿಕೊಳ್ಳಲಾದ ಮೇಲ್ಸೇತುವೆ ಪರಿಶೀಲನೆ ನಡೆಸಿದ ಅವರು ಈ ಸೂಚನೆ ನೀಡಿದರು.

500 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯು ಶೇ. 90 ರಷ್ಟು ಪೂರ್ಣ

ಈ ವೇಳೆ ಅಧಿಕಾರಿಗಳು 500 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯು ಶೇ. 90 ರಷ್ಟು ಪೂರ್ಣಗೊಂಡಿದ್ದು, ಮೇಲ್ಸೇತುವೆ ಮಧ್ಯಭಾಗದಲ್ಲಿ ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಎರಡೂ ಕಡೆ ವೆಟ್ ಮಿಕ್ಸ್ ಹಾಕಿದ್ದು, ಡಾಂಬರೀಕರಣ ಮಾಡುವ ಕೆಲಸ ಬಾಕಿಯಿದೆ. ಬಣ್ಣ ಬಳಿಯುವ ಕೆಲಸವೂ ಬಹುತೇಕ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಮೇಲ್ಸೇತುವೆಯ ಎರಡೂ ಬದಿಯ ಸರ್ವೀಸ್ ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಹಾಗೂ ಹಾಳಾದ ಭಾಗಗಳನ್ನು ಕೂಡಲೇ ದುರಸ್ತಿಪಡಿಸಬೇಕು. ಮೇಲ್ಸೇತುವೆ ಸುತ್ತಮುತ್ತಲಿರುವ ಭಗ್ನಾವಶೇಷ, ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು. ಬಳಿಕ ಸೂಕ್ತ ದಿನಾಂಕವನ್ನು ನಿಗದಿಪಡಿಸಿ ಲೋಕಾರ್ಪಣೆ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಕ್ರಮವಹಿಸುವಂತೆ ತಿಳಿಸಿದರು.

ಈ ವೇಳೆ ಮುಖ್ಯ ಎಂಜಿನಿಯರ್‌ ಸ್ವಯಂಪ್ರಭಾ ಮೊದಲಾದವರಿದ್ದರು.

PREV
Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!