ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

Suvarna News   | Asianet News
Published : Feb 16, 2020, 11:38 AM IST
ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಸಾರಾಂಶ

ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ| ಮೂವರು ಸಾವು| ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನಡೆದ ಘಟನೆ| 

ವಿಜಯಪುರ(ಫೆ.16): ಎರಡು ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಗರಸಂಗಿ ಕ್ರಾಸ್ ಬಳಿ ಇಂದು(ಭಾನುವಾರ) ನಡೆದಿದೆ. 

ಮೃತರನ್ನ ಜಿಲ್ಲೆಯ ಅಥರ್ಗಾದ ಕಾಸು ಅಹಿರವಾಡಗಿ, ನಾಗಠಾಣ ಗ್ರಾಮದ ದಾವಲ್ ಮತ್ತು ಮಧ್ಯ ಪ್ರದೇಶ ಮೂಲದ 65 ವರ್ಷದ ಜಗದೀಶ ಬಾಮಾ ಎಂದು ಗುರುತಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಬೆಳ್ಳುಳ್ಳಿ ಮತ್ತು ಇತರ ಸಾಮಗ್ರಿಗಳನ್ನ ಸಾಗಿಸುತ್ತಿದ್ದ ಲಾರಿ ಎದುರಿಗೆ ಹುಬ್ಬಳ್ಳಿ ಕಡೆಯಿಂದ ವಿಜಯಪುರ ಕಡೆಗೆ ಬಂದ ಟೆಂಗಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 
 

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ