ಚಿತ್ರದುರ್ಗದ ಬಳಿ ಭೀಕರ ಅಪಘಾತ: ಇಬ್ಬರ ದುರ್ಮರಣ

Published : Nov 24, 2019, 11:38 AM IST
ಚಿತ್ರದುರ್ಗದ ಬಳಿ ಭೀಕರ ಅಪಘಾತ: ಇಬ್ಬರ ದುರ್ಮರಣ

ಸಾರಾಂಶ

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ| ಇಬ್ಬರು ಸಾವು| ಜಿಲ್ಲೆಯ ಹಿರಿಯೂರು ತಾಲೂಕಿನ ಆದಿವಾಲ ಗ್ರಾಮ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ ಘಟನೆ| ಮೃತರು ಬೆಂಗಳೂರು ಮೂಲದವರಾಗಿದ್ದಾರೆ| ಚಾಲಕ ಆಲಮ್ ಸ್ಥಳದಲ್ಲೇ‌ ಸಾವನ್ನಪ್ಪಿದರೆ| ಕರೀಂ ಹಿರಿಯೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ|

ಚಿತ್ರದುರ್ಗ(ನ.24): ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಆದಿವಾಲ ಗ್ರಾಮ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು(ಭಾನುವಾರ) ಬೆಳಗ್ಗೆ ನಡೆದಿದೆ. ಮೃತರನ್ನು ಆಲಮ್(30) ಹಾಗೂ ಕರೀಂ(32) ಎಂದು ಗುರುತಿಸಲಾಗಿದೆ. 

ಮೃತರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ದುರ್ಘಟನೆಯಲ್ಲಿ ಚಾಲಕ ಆಲಮ್ ಸ್ಥಳದಲ್ಲೇ‌ ಸಾವನ್ನಪ್ಪಿದರೆ, ಕರೀಂ ಹಿರಿಯೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. 
 

PREV
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!