ಕಲಬುರಗಿ: ಲಾರಿ, ಕಾರು ಮಧ್ಯೆ ಅಪಘಾತ, ಇಬ್ಬರ ಸಾವು

Suvarna News   | Asianet News
Published : Jan 24, 2020, 12:12 PM IST
ಕಲಬುರಗಿ: ಲಾರಿ, ಕಾರು ಮಧ್ಯೆ ಅಪಘಾತ, ಇಬ್ಬರ ಸಾವು

ಸಾರಾಂಶ

ಲಾರಿ, ಕಾರು ಮಧ್ಯೆ ಅಪಘಾತ| ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ| ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುದ್ರಿಮೋತಿ ಕ್ರಾಸ್ ಬಳಿ ನಡೆದ ಘಟನೆ| ಗಾಯಾಳುಗಳನ್ನ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು|

ಕಲಬುರಗಿ(ಜ.24): ಲಾರಿ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುದ್ರಿಮೋತಿ ಕ್ರಾಸ್ ಬಳಿ ಇಂದು ಬೆಳಗಿನ ಜಾವ (ಶುಕ್ರವಾರ) ನಡೆದಿದೆ. 

ಮೃತರನ್ನು ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿಗಳಾದ ರೋಶನ್ ದರ್ಗಿ(20), ಸಂತೋಷ್(24) ಎಂದು ಗುರುತಿಸಲಾಗಿದೆ. ಲಾರಿ, ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗಾಯಾಳುಗಳನ್ನ ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!