ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ: ಸ್ಥಳದಲ್ಲೇ ಇಬ್ಬರ ದುರ್ಮರಣ

Published : Dec 01, 2019, 02:29 PM IST
ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ಸಾರಾಂಶ

ರಸ್ತೆ ಬದಿ ನಿಂತಿದ್ದ ಮಹಿಂದ್ರಾ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ| ಸ್ಥಳದಲ್ಲೇ ಇಬ್ಬರ ಸಾವು| ಬಸವನ ಬಾಗೇವಾಡಿ ತಾಲೂಕಿನ ಕೂಡಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ದುರ್ಘಟನೆ| 

ವಿಜಯಪುರ(ಡಿ.01): ರಸ್ತೆ ಬದಿ ನಿಂತಿದ್ದ ಮಹಿಂದ್ರಾ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕೂಡಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಭಾನುವಾರ) ನಡೆದಿದೆ. 

ಮೃತರನ್ನು ಧೀರಜ್ ಗಾಳೆ(35) ಹಾಗೂ ನಜೀರ್ ತಳಪಿ(50) ಎಂದು ಗುರುತಿಸಲಾಗಿದೆ. ಇವರು ಮಧ್ಯಪ್ರದೇಶದ ಮೂಲದವರು ಎಂದು ತಿಳಿದು ಬಂದಿದೆ.  

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಸ್ತೆ ಬದಿ ನಿಂತಿದ್ದ ಪಿಕಪ್ ವಾಹನಕ್ಕೆ ನಿಡಗುಂದಿ ಕಡೆಯಿಂದ ವಿಜಯಪುರದ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!