ನರಗುಂದ: ಸ್ಟೇರಿಂಗ್ ಕಟ್ಟಾಗಿ ಕಂದಕಕ್ಕೆ ಉರುಳಿ ಬಿದ್ದ ಲಾರಿ!

Suvarna News   | Asianet News
Published : Mar 08, 2020, 03:15 PM IST
ನರಗುಂದ: ಸ್ಟೇರಿಂಗ್ ಕಟ್ಟಾಗಿ ಕಂದಕಕ್ಕೆ ಉರುಳಿ ಬಿದ್ದ ಲಾರಿ!

ಸಾರಾಂಶ

ಕಂದಕಕ್ಕೆ ಉರುಳಿ ಬಿದ್ದ ಸಿಮೆಂಟ್ ತುಂಬಿದ್ದ ಲಾರಿ| ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದ ಘಟನೆ| ಪ್ರಾಣಾಪಾಯದಿಂದ ಪಾರಾದ ಚಾಲಕ, ಕ್ಲೀನರ್|   

ಗದಗ(ಮಾ.08): ಸ್ಟೇರಿಂಗ್ ಕಟ್ಟಾದ ಪರಿಣಾಮ ಸಿಮೆಂಟ್ ತುಂಬಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ಇಂದು(ಭಾನುವಾರ) ನಡೆದಿದೆ. ಲಾರಿಯ ಮುಂಭಾಗ ಸಂಪೂರ್ಣ ಪೀಸ್ ಪೀಸ್ ಆಗಿದೆ.  

ವೇಗವಾಗಿ ಬರುತ್ತಿದ್ದ ಲಾರಿ ರೋಡ್ ಬ್ರೇಕ್ ದಾಟುವ ವೇಳೆ ಸ್ಟೇರಿಂಗ್ ಕಟ್ ಆಗಿದ್ದರಿಂದ ಕಂದಕಕ್ಕೆ ಉರುಳಿ ಬಿದ್ದಿದೆ. ಲಾರಿಯಲ್ಲಿ‌ ಸಿಲುಕಿದ್ದ ಚಾಲಕ, ಕ್ಲೀನರ್‌ನನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಲಾರಿ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಶಿವಕುಮಾರ ದೊಶೆಟ್ಟಿ, ಕ್ಲೀನರ್ ಇಸ್ಮಾಯಿಲ್ ಸಾಬ್‌ಗೆ ಗಾಯವಾಗಿದೆ. ಚಾಲಕ, ಕ್ಲೀನರ್ ಇಬ್ಬರು ಕಲಬುರಗಿ ಜಿಲ್ಲೆ ಚಿಂಚೊಳ್ಳಿ ಹಾಗೂ ನಾಗರಾಳ ಗ್ರಾಮದ  ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಲಬುರಗಿಯಿಂದ ಹುಬ್ಬಳ್ಳಿಗೆ ಸಿಮೆಂಟ್ ಲಾರಿ ಹೊರಟಿತ್ತು ಎಂದು ತಿಳಿದು ಬಂದಿದೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 
 

PREV
click me!

Recommended Stories

Bigg boss 12 winner ‘ಗಿಲ್ಲಿ’ ನಟನಿಗೆ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ; ಮಂಡ್ಯದ ಮಣ್ಣಿನ ಮಗನ ಸಾಧನೆಗೆ ಮೆಚ್ಚುಗೆ!
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು; ಕಾರು ನಿಲ್ಲಿಸಿ ಆಸ್ಪತ್ರೆಗೆ ಸೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ!