ಕೊಚ್ಚಿ ಹೋದ ರಸ್ತೆಯಲ್ಲಿ ಸಿಲುಕಿಕೊಂಡ ಎರಡು ಲಾರಿಗಳು| ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಕೊಣ್ಣೂರು ಬಳಿ ನಡೆದ ಘಟನೆ| ಲಾರಿಗಳು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ತಾತ್ಕಾಲಿಕ ಸ್ಥಗಿತ|
ಬಾಗಲಕೋಟೆ(ಆ.23): ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆಯಲ್ಲಿ ಎರಡು ಲಾರಿಗಳು ಸಿಲುಕಿಕೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಕೊಣ್ಣೂರು ಹೊಸ ಸೇತುವೆ ಬಳಿ ಇಂದು(ಭಾನುವಾರ) ನಡೆದಿದೆ.
ಕೆಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಮಲಪ್ರಭಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಬಂದೊದಗಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕೊಣ್ಣೂರು ಬಳಿ ಇರುವ ಸೇತುವೆ ಕೊಚ್ಚಿ ಹೋಗಿತ್ತು. ಕೊಚ್ಚಿ ಹೋದ ರಸ್ತೆಗೆ ಮಣ್ಣು ಹಾಕಿ ರಿಪೇರಿ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಸರಿಯಾಗಿ ರಸ್ತೆ ಸುಧಾರಣೆಯಾಗದ ಹಿನ್ನೆಲೆ ಎರಡು ಲಾರಿಗಳು ಸಿಲುಕಿಕೊಂಡಿವೆ.
ಬಾದಾಮಿ: ಪ್ರವಾಹದಲ್ಲಿ ಸಿಲುಕಿದ್ದ 15ಕ್ಕೂ ಹೆಚ್ಚು ಕೋತಿಗಳ ರಕ್ಷಣೆ
ರಸ್ತೆಯಲ್ಲಿ ಸಿಲುಕಿಕೊಂಡಿರುವ ಎರಡೂ ಲಾರಿಗಳು ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆಗೆ ಹೊರಟಿದ್ದವು ಎಂದು ತಿಳಿದು ಬಂದಿದೆ. ಲಾರಿಗಳು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ತಾತ್ಕಾಲಿಕ ಸ್ಥಗಿತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.