Tumakur : ಬಿಜೆಪಿ ಕಟ್ಟಾಕಾರ‍್ಯಕರ್ತರ ಪಡೆ ನಿರ್ಮಾಣ ಮಾಡಿ

By Kannadaprabha News  |  First Published Dec 14, 2022, 5:02 AM IST

ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರಿಗೆ ಪ್ರಶಿಕ್ಷಣದ ವರ್ಗ ಆಯೋಜಿಸಿ, ಪಕ್ಷದ ಸಂಘಟನೆ, ಸಮರ್ಪಣಾ ಮನೋಭಾವ, ರಾಷ್ಟ್ರೀಯತೆಯ ಬಗ್ಗೆ ಅರಿವು ಮೂಡಿಸಿ, ಕಟ್ಟಾಕಾರ್ಯಕರ್ತರ ಪಡೆ ನಿರ್ಮಾಣ ಮಾಡಿಸುವ ಕಾರ್ಯ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಅಧ್ಯಕ್ಷ ಡಾ.ಸಂದೀಪ್‌ಕುಮಾರ್‌ ತಿಳಿಸಿದರು.


 ತುಮಕೂರು (ಡಿ.14):ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರಿಗೆ ಪ್ರಶಿಕ್ಷಣದ ವರ್ಗ ಆಯೋಜಿಸಿ, ಪಕ್ಷದ ಸಂಘಟನೆ, ಸಮರ್ಪಣಾ ಮನೋಭಾವ, ರಾಷ್ಟ್ರೀಯತೆಯ ಬಗ್ಗೆ ಅರಿವು ಮೂಡಿಸಿ, ಕಟ್ಟಾಕಾರ್ಯಕರ್ತರ ಪಡೆ ನಿರ್ಮಾಣ ಮಾಡಿಸುವ ಕಾರ್ಯ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಅಧ್ಯಕ್ಷ ಡಾ.ಸಂದೀಪ್‌ಕುಮಾರ್‌ ತಿಳಿಸಿದರು.

ತುಮಕೂರು ತಾಲೂಕಿನ ದೇವರಾಯನದುರ್ಗದಲ್ಲಿ ಬಿಜೆಪಿ ತುಮಕೂರು ಮತ್ತು ಮಧುಗಿರಿ ಸಂಘಟನಾತ್ಮಕ ಜಿಲ್ಲೆಗಳ ಯುವಮೋರ್ಚಾದ ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರಿಗೆ ನಡೆಯುತ್ತಿರುವ ಎರಡು ದಿನಗಳ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿದರು.

Tap to resize

Latest Videos

ಯುವಕರಿಗೆ ಆದ್ಯತೆ:

ಬಿಜೆಪಿ ಪ್ರಪಂಚದಲ್ಲೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿದ್ದು, ಪಕ್ಷದ ಸಂಘಟನೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರಾಗಿ ನೊಂದಾವಣೆಯಾಗಿದೆ. ಯುವಮೋರ್ಚಾ ಘಟಕದ ಕಾರ್ಯಕರ್ತರು ಪಕ್ಷದ ಸಂಘಟನೆ, ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆಂದು ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಎಚ್‌.ಎಸ್‌.ರವಿಶಂಕರ್‌ ಹೆಬ್ಬಾಕ ಹಿತನುಡಿಗಳನ್ನಾಡಿದರು. ಮುಂಬರುವ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯುವಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರ ಪಾತ್ರ ಮಹತ್ವದಾಗಿದ್ದು, ಪಕ್ಷದ ಗೆಲುವಿಗೆ ಸಕ್ರಿಯರಾಗಿ ಕಾರ್ಯನಿರ್ವಹಿಸಲು ರವಿಶಂಕರ್‌ ಹೆಬ್ಬಾಕ ಕರೆ ನೀಡಿದರು..

ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ತುಮಕೂರು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಟಿ.ವೈ.ಯಶಸ್‌ ವಹಿಸಿದ್ದರು. ವೇದಿಕೆಯಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಟಿ.ಎನ್‌.ರುದ್ರೇಶ್‌, ಮಧುಗಿರಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಮಾಲಿಭರತ್‌, ಪ್ರಧಾನ ಕಾರ್ಯದರ್ಶಿಗಳಾದ ಗಿರೀಶ್‌, ಕೆ.ಸಿ.ಪರಮೇಶ್‌, ಶಿವಕುಮಾರಸ್ವಾಮಿ ಉಪಸ್ಥಿತರಿದ್ದರು.

ಈ ಎರಡು ದಿನಗಳ ಪ್ರಶಿಕ್ಷಣ ವರ್ಗದಲ್ಲಿ ತುಮಕೂರು ಮತ್ತು ಮಧುಗಿರಿ ಸಂಘಟನಾತ್ಮಕ ಜಿಲ್ಲೆಗಳ ಎಲ್ಲಾ ಮಂಡಲ ಅಧ್ಯಕ್ಷರು, ಪ್ರಧಾನಕಾರ್ಯದರ್ಶಿಗಳು ಪ್ರಮುಖರು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಮಧುಗಿರಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಪಾವಗಡರವಿ ಪ್ರಸ್ತಾವಿಕ ನುಡಿದರು. ಪ್ರಶಿಕ್ಷಣ ವರ್ಗದ ಸಂಚಾಲಕ ಸಾಗರ್‌ ದಯಾನಂದ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಬಿಜೆಪಿ ಪ್ರತಿವರ್ಷ ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳಿಗೆ ಪಕ್ಷದ ಸಂಘಟನೆಗೆ ಪೂರಕವಾದ ವಿವಿಧ ವಿಷಯಗಳನ್ನು ಹಿರಿಯ ನಾಯಕರಿಂದ ಮಾರ್ಗರ್ಶನ ಕೊಡಿಸಿಕೊಡುವುದರ ಮೂಲಕ ಪ್ರಚಲಿತ ವಿದ್ಯಮಾನಗಳನ್ನು ಪರಿಚಯಿಸಿ ಸಂಘಟನೆಗೆ ಒತ್ತು ನೀಡಿ ಕಾರ್ಯಕರ್ತರಿಗೆ ರಾಷ್ಟ್ರೀಯತೆಯ ಜಾಗೃತಿ ಮತ್ತು ಸಮರ್ಪಣಾ ಮನೋಭಾವದ ಭೂಮಿಕೆ ಸಿದ್ಧಪಡಿಸಿ, ಕ್ರಿಯಾಶೀಲರಾಗುವಂತೆ ಮಾಡುವುದಾಗಿದೆ.

ಡಾ.ಸಂದೀಪ್‌ಕುಮಾರ್‌ ಘಟಕದ ಅಧ್ಯಕ್ಷ, ಬಿಜೆಪಿ ರಾಜ್ಯ ಯುವಮೋರ್ಚಾ

10 ಕಚೇರಿ ಉದ್ಘಾಟನೆ

ಕೋಲಾರ (ಡಿ.14) : ಬಿಜೆಪಿ ಜಿಲ್ಲಾ ಕಚೇರಿ ಸ್ವಂತ ಕಟ್ಟಡವನ್ನು ಡಿ.15ರ ಗುರುವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ವೇಣುಗೋಪಾಲ್‌ ತಿಳಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮೊದಲ ಹಂತದಲ್ಲಿ ಈಗಾಗಲೇ 10 ಜಿಲ್ಲೆಯಲ್ಲಿ ಬಿಜೆಪಿ ಕಚೇರಿಯ ಸ್ವಂತ ಕಚೇರಿಗಳನ್ನು ಉದ್ಥಾಟಿಸಲಾಗಿದೆ. 2ನೇ ಹಂತದಲ್ಲಿ 11 ಜಿಲ್ಲೆಗಳಲ್ಲಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಡಿ.15ರಂದು ರಾಜ್ಯದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ನಂತರ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಕೋಲಾರ, ಬಾಗಲಕೋಟೆ, ರಾಯಚೂರು, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೀದರ್‌, ಗದಗ, ಚಾಮರಾಜನಗರದಲ್ಲಿ ಬಿಜೆಪಿ ಕಚೇರಿಯನ್ನು ನಡ್ಡಾ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

Bagalakote: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಸಿದ್ದರಾಮಯ್ಯ ಕಾರ್ಯಕ್ರಮ ರದ್ದು

ಸಂಸದ, ಸಚಿವರು, ಎಂಎಲ್ಸಿಗಳು ಭಾಗಿ

ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಎಸ್‌.ಮುನಿಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ, ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರು ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡುವ ನಿರೀಕ್ಷೆ ಇದೆ ಎಂದರು.

ಕರ್ನಾಟಕ, 2024ರ ಚುನಾವಣೆಗೆ ಪಕ್ಷ ಅಣಿಗೊಳಿಸಿ: ಬಿಜೆಪಿ ನಾಯಕರಿಗೆ ಪ್ರಧಾನಿ ಗುರಿ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಮುಂದಿನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ವರ್ಧಿಸಲಿದ್ದು, ಮುಂದಿನ ಶಾಸಕ ನಾನೇ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬಿಜೆಪಿ ಪದಾಧಿಕಾರಿಗಳು ಯಾರೂ ಈ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲವೇಕೆ ಎಂಬ ಪ್ರಶ್ನೆಗೆ ಜಿಲ್ಲಾ ಅಧ್ಯಕ್ಷ ಡಾ.ವೇಣುಗೋಪಾಲ್‌ ಪ್ರತಿಕ್ರಿಯಿಸಿ, ವಿಧಾನಸಭಾ ಕ್ಷೇತ್ರದ ಅಕಾಂಕ್ಷಿಯಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಅವರು ಬಿಜೆಪಿ ಟಿಕೆಟ್‌ ಅಕಾಂಕ್ಷಿಯಾಗಿದ್ದಾರೆ ಹೊರತಾಗಿ ಅವರನ್ನು ಅಭ್ಯರ್ಥಿಯಾನ್ನಾಗಿ ಘೋಷಿಸಿಲ್ಲ ಎಂದು ಸ್ವಷ್ಟಪಡಿಸಿದರು.

click me!