ಜಿಲ್ಲಾ ಕಾಂಗ್ರೆಸ್‌ನಲ್ಲಿ ಮುಂದುವರಿದ ರಾಜೀನಾಮೆ
ಕೊಂಡವಾಡಿ ಚಂದ್ರಶೇಖರ್ ಕಾಂಗ್ರೆಸ್‌ಗೆ ವಿದಾಯ
ತುಮಕೂರು: ಮಾಜಿ ಶಾಸಕ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಷÜಫಿ ಅಹಮದ್ ರಾಜೀನಾಮೆ ಬೆನ್ನಲ್ಲೇ ಜಿಲ್ಲೆಯ ಮತ್ತೊಬ್ಬ ಕಾಂಗ್ರೆಸ್ ಮುಖಂಡ, ಮಾಜಿ ತುಮುಲ್ ಅಧ್ಯಕ್ಷರೂ ಆಗಿದ್ದ ಕೊಂಡವಾಡಿ ಚಂದ್ರಶೇಖರ್ ಕಾಂಗ್ರೆಸ್‌ಗೆ ವಿದಾಯ ಹೇಳಿದ್ದಾರೆ.
ತಾವು ಮಧುಗಿರಿ ಎಂಎಲ್‌ಎ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿ, ರಾಜಿನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.
ಟಿಕೆಟ್ ವಿಚಾರವಾಗಿ ನನ್ನೊಂದಿಗೆ ಯಾವುದೇ ರೀತಿ ಚರ್ಚೆ ನಡೆಸದೇ ಟಿಕೆಟ್ ಘೋಷಣೆ ಮಾಡಿರುವುದಕ್ಕೆ ಅಸಮಾಧಾನಗೊಂಡು ರಾಜಿನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಮಗನ ರಾಜಿನಾಮೆ: ತಂದೆ ಕೊಂಡವಾಡಿ ಚಂದ್ರಶೇಖರ್‌ಗೆ ಅನ್ಯಾಯವಾಗಿದೆ ಎಂದು ದೂರಿ ಅವರ ಪುತ್ರ, ಸುಮುಖ ಕೊಂಡವಾಡಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಇಂದು ಜೆಡಿಎಸ್‌ಗೆ ಸೇರ್ಪಡೆ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವ ಕೊಂಡವಾಡಿ ಚಂದ್ರಶೇಖರ್ ಭಾನುವಾರ ಮಧುಗಿರಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಹಿರಿಯ ಮುಖಂಡ ರಾಜೀನಾಮೆ
ನಂಜನಗೂಡು: ಪಟ್ಟಣದ ನಗರಸಭೆಯ ಹಿರಿಯ ಸದಸ್ಯ ಹಾಗೂ ಬಿಜೆಪಿ ಮುಖಂಡ ದೊರೆಸ್ವಾಮಿ ಬುಧವಾರ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದು, ಶೀಘ್ರದಲ್ಲೇ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ದೊರೆಸ್ವಾಮಿ ಅವರು ಎರಡು ಬಾರಿ ಕಾಂಗ್ರೆಸ್‌ನಿಂದ ಪುರಸಭೆಗೆ ಆಯ್ಕೆಯಾಗಿದ್ದು, ಒಮ್ಮೆ ಪುರಸಭೆಯ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಳೆದ ಬಾರಿ ನಗರದ 20ನೇ ವಾರ್ಡ್‌ನಿಂದ ನಗರಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದು, ಸಕ್ರಿಯ ರಾಜಕಾರಣದಲ್ಲಿದ್ದು, ಜನಮನ್ನಣೆ ಗಳಿಸಿಕೊಂಡಿದ್ದಾರೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಸಂಸದ ವಿ. ಶ್ರೀನಿವಾಸಪ್ರಸಾದ್, ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಕಟ್ಟಾಬೆಂಬಲಿಗರಾಗಿದ್ದರು. ಆರ್. ಧ್ರುವನಾರಾಯಣ್ ಅವರ ಅಕಾಲಿಕ ನಿಧನದಿಂದ ಖಿನ್ನತೆಗೊಳಗಾಗಿದ್ದರು.
ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕವು 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳ ಪಟ್ಟಿಸಿದ್ಧಪಡಿಸಿದ್ದು, ಗುರುವಾರ ಈ ಪಟ್ಟಿ ಹೈಕಮಾಂಡ್‌ಗೆ ರವಾನಿಸಲಿದೆ. ಬುಧವಾರ ತಡರಾತ್ರಿವರೆಗೆ ನಗರದ ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯು ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ವಿವರಗಳನ್ನು ಪರಿಶೀಲಿಸಿ ಪಟ್ಟಿಅಖೈರುಗೊಳಿಸಿತು.
ಮೋದಿ, ಸಿಎಂ ಕಾರ್ಯ ಮೆಚ್ಚಿ ಸುದೀಪ್ ಪ್ರಚಾರಕ್ಕೆ ಒಪ್ಪಿದ್ದಾರೆ: ಸಚಿವ ಸುಧಾಕರ್
ಮಂಗಳವಾರ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಅಂತಿಮಗೊಳಿಸಿತ್ತು. ಬುಧವಾರ ಇನ್ನುಳಿದ 122 ವಿಧಾನಸಭಾ ಕ್ಷೇತ್ರಗಳಿಗೆ ಆಕಾಂಕ್ಷಿಗಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು ಎಂದು ತಿಳಿದು ಬಂದಿದೆ. ಬಹುತೇಕ ಶನಿವಾರ ಅಥವಾ ಭಾನುವಾರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆದು ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಅಖೈರುಗೊಳಿಸಿ ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.
ನಂಜನಗೂಡು: ಪಟ್ಟಣದ ನಗರಸಭೆಯ ಹಿರಿಯ ಸದಸ್ಯ ಹಾಗೂ ಬಿಜೆಪಿ ಮುಖಂಡ ದೊರೆಸ್ವಾಮಿ ಬುಧವಾರ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದು, ಶೀಘ್ರದಲ್ಲೇ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ದೊರೆಸ್ವಾಮಿ ಅವರು ಎರಡು ಬಾರಿ ಕಾಂಗ್ರೆಸ್‌ನಿಂದ ಪುರಸಭೆಗೆ ಆಯ್ಕೆಯಾಗಿದ್ದು, ಒಮ್ಮೆ ಪುರಸಭೆಯ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಳೆದ ಬಾರಿ ನಗರದ 20ನೇ ವಾರ್ಡ್‌ನಿಂದ ನಗರಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದು, ಸಕ್ರಿಯ ರಾಜಕಾರಣದಲ್ಲಿದ್ದು, ಜನಮನ್ನಣೆ ಗಳಿಸಿಕೊಂಡಿದ್ದಾರೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಸಂಸದ ವಿ. ಶ್ರೀನಿವಾಸಪ್ರಸಾದ್, ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಕಟ್ಟಾಬೆಂಬಲಿಗರಾಗಿದ್ದರು. ಆರ್. ಧ್ರುವನಾರಾಯಣ್ ಅವರ ಅಕಾಲಿಕ ನಿಧನದಿಂದ ಖಿನ್ನತೆಗೊಳಗಾಗಿದ್ದರು.
BJP ಸಂಭಾವ್ಯರ ಪಟ್ಟಿ ಇಂದು ಹೈ ಕಮಾಂಡ್‌ಗೆ
ಬೆಂಗಳೂರು (ಏ.06): ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕವು 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳ ಪಟ್ಟಿಸಿದ್ಧಪಡಿಸಿದ್ದು, ಗುರುವಾರ ಈ ಪಟ್ಟಿ ಹೈಕಮಾಂಡ್‌ಗೆ ರವಾನಿಸಲಿದೆ. ಬುಧವಾರ ತಡರಾತ್ರಿವರೆಗೆ ನಗರದ ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯು ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ವಿವರಗಳನ್ನು ಪರಿಶೀಲಿಸಿ ಪಟ್ಟಿಅಖೈರುಗೊಳಿಸಿತು.
ಮಂಗಳವಾರ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಅಂತಿಮಗೊಳಿಸಿತ್ತು. ಬುಧವಾರ ಇನ್ನುಳಿದ 122 ವಿಧಾನಸಭಾ ಕ್ಷೇತ್ರಗಳಿಗೆ ಆಕಾಂಕ್ಷಿಗಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು ಎಂದು ತಿಳಿದು ಬಂದಿದೆ. ಬಹುತೇಕ ಶನಿವಾರ ಅಥವಾ ಭಾನುವಾರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆದು ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಅಖೈರುಗೊಳಿಸಿ ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.
ಚಿತ್ರ ನಟರ ಮುಖ ತೋರಿಸಿ ಬಿಜೆಪಿ ಮತಭಿಕ್ಷೆ: ಎಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಗೋವಿಂದ ಕಾರಜೋಳ ಮತ್ತಿತರ ನಾಯಕರು ಎರಡು ದಿನಗಳ ಕಾಲ ಸತತವಾಗಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶೋಧಿಸಿದರು. ಈಗಾಗಲೇ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಸ್ಥಳೀಯ ಮುಖಂಡರ ಹಾಗೂ ಜಿಲ್ಲಾ ಕೋರ್ ಕಮಿಟಿಗಳ ಸದಸ್ಯರ ಅಭಿಪ್ರಾಯ ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಆ ಮಾಹಿತಿಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಮಟ್ಟದ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ.
ಬೆಂಬಲಿಗರ ಟಿಕೆಟ್, ನಾಳೆ ಸಿಎಂ ದಿಲ್ಲಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಧ್ಯಾಹ್ನ ದೆಹಲಿಗೆ ಪ್ರಯಾಣಿಸಲಿದ್ದಾರೆ. ಶನಿವಾರ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಂಸದೀಯ ಮಂಡಳಿ ಸಭೆ ನಡೆಯುವ ಸಾಧ್ಯತೆ ಇರುವುದರಿಂದ ತಮ್ಮ ಬೆಂಬಲಿಗರಿಗೆ ಟಿಕೆಟ್ ಖಾತ್ರಿಪಡಿಸಿಕೊಳ್ಳುವ ಸಂಬಂಧ ಬೊಮ್ಮಾಯಿ ಅವರು ವರಿಷ್ಠರ ಜತೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.