ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರ ಭರವಸೆಗಳನ್ನು ಈಡೇರಿಸುವ ಅಂಶಗಳನ್ನು ಒಳಗೊಂಡ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಕೋರಾ ಹೋಬಳಿಯ ಮನೆಮನೆಗೂ ಹಂಚಲಾಗುತ್ತಿದ್ದು ಭರವಸೆಗಳ ಈಡೇರಿಕೆಗೆ ಕಾಂಗ್ರೆಸ್ ಬೆಂಬಲಿಸುವಂತೆ ನಿವೃತ್ತ ನೌಕರರ ಮಧುಗಿರಿ ಶೈಕ್ಷಣಿಕ ಜಿಲ್ಲಾ ವಿಭಾಗದ ಜಿಲ್ಲಾಧ್ಯಕ್ಷ ಪುಟ್ಟರಾಜು ಪ್ರತಿ ಮನೆಗೂ ಅರಿವು ಮೂಡಿಸುವಂತಹ ಕಾರ್ಯ ಕೈಗೊಂಡಿದ್ದಾರೆ.
ಕೊರಟಗೆರೆ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರ ಭರವಸೆಗಳನ್ನು ಈಡೇರಿಸುವ ಅಂಶಗಳನ್ನು ಒಳಗೊಂಡ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಕೋರಾ ಹೋಬಳಿಯ ಮನೆಮನೆಗೂ ಹಂಚಲಾಗುತ್ತಿದ್ದು ಭರವಸೆಗಳ ಈಡೇರಿಕೆಗೆ ಕಾಂಗ್ರೆಸ್ ಬೆಂಬಲಿಸುವಂತೆ ನಿವೃತ್ತ ನೌಕರರ ಮಧುಗಿರಿ ಶೈಕ್ಷಣಿಕ ಜಿಲ್ಲಾ ವಿಭಾಗದ ಜಿಲ್ಲಾಧ್ಯಕ್ಷ ಪುಟ್ಟರಾಜು ಪ್ರತಿ ಮನೆಗೂ ಅರಿವು ಮೂಡಿಸುವಂತಹ ಕಾರ್ಯ ಕೈಗೊಂಡಿದ್ದಾರೆ.
ತೋವಿನಕೆರೆ ಸಮೀಪದ ಎಲ್ದೊಡ್ಲು, ಕೂಡಿ ತಿಮ್ಮನಹಳ್ಳಿ, ತಿಮ್ಮದಾಸರಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಮನೆ ಮನೆಗೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 3 ಪ್ರಧಾನ ಭರವಸೆಗಳನ್ನು ಈಡೇರಿಸುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮಹಿಳೆಯರಿಗೆ ಕಾಂಗ್ರೆಸ್ ಗೆಲುವು ಸಾಧಿಸಿದರೆ ಮುಂದೆ ಆಗಬಹುದಾದಂತಹ ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಕೆಸ್ತೂರಿನ ವಿಎಸ್‌ಎಸ್‌ನ ನಿರ್ದೇಶಕ ಸಿದ್ದರಾಜು ಮಾತನಾಡಿ, ರಾಜ್ಯದಲ್ಲಿ ಇಲ್ಲಿಯವರೆಗೂ ಜನಪರ ಮತ್ತು ಬಡವರ ಪರ ಯಾವುದಾದರೂ ಸರ್ಕಾರ ಕಾರ್ಯ ನಿರ್ವಹಿಸಿದೆ ಎಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂಬ ಅರಿವು ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಮನೆಗೂ ಬಿತ್ತರಿಸುವಂತಾಗಬೇಕು ಎಂದರು.
ತಾಲೂಕು ಪಂಚಾಯತಿ ಮಾಜಿ ಸದಸ್ಯ ಸಿದ್ದಬೋಲಯ್ಯ ಮಾತನಾಡಿ ಗೃಹ ಜ್ಯೋತಿ ಕಾರ್ಯಕ್ರಮದಡಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಅಡಿ ತಿಂಗಳಿಗೆ 2 ಸಾವಿರ ಜಮಾ ಬಿಪಿಎಲ್ ಕಾರ್ಡುದಾರರಿಗೆ 10 ಕೇಜಿ ಉಚಿತ ಅಕ್ಕಿ ನೀಡುವ ಇಂತಹ ಜನಪರ ಯೋಜನೆಯನ್ನು ಸಾರ್ವಜನಿಕರು ಅರ್ಥ ಮಾಡಿಕೊಂಡು ಕಾಂಗ್ರೆಸ್‌ಗೆ ಬೆಂಬಲ ಸೂಚಿಸುವ ಮುಖೇನಾ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದು ಜನಸಾಮಾನ್ಯರ ಯೋಜನೆಗೆ ಸಹಕಾರ ನೀಡುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಹಾಲಿ ಅಧ್ಯಕ್ಷರಾದ ದೊಡ್ಡಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ಗುಡ್ಡಯ್ಯ ಸೇರಿದಂತೆ ಇನ್ನಿತರರು ಇದ್ದರು.
ಕಾಂಗ್ರೆಸ್ ಮೊದಲ ಲಿಸ್ಟ್ ಬಿಡುಗಡೆ
2023 ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ 3 - 4 ದಿನಗಳಿಂದ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಈವರೆಗೆ ಪಟ್ಟಿ ಬಿಡುಗಡೆಯಾಗಿರಲಿಲ್ಲ. ಆದರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುವ ದಿನವೇ ಕಾಂಗ್ರೆಸ್ 124 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಮುಖವಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿತ್ತು. ಈಗ ಸಿದ್ದರಾಮಯ್ಯ ವರುಣಾದಿಂದಲೇ ಸ್ಪರ್ಧಿಸುವುದು ಸ್ಪಷ್ಟವಾಗಿದೆ. ಅಲ್ಲದೆ, ಮೊದಲ ಪಟ್ಟಿಯಲ್ಲಿ ಕೋಲಾರ ಹಾಗೂ ಬಾದಾಮಿ ಕ್ಷೇತ್ರದ ಅಭ್ಯರ್ಥಿ ಹೆಸರಿಲ್ಲ. ಸಿದ್ದರಾಮಯ್ಯ 2 ಕ್ಷೇತ್ರ ಸ್ಪರ್ಧೆ ಸುಳಿವು ಬೆನ್ನಲ್ಲೇ ಮೊದಲ ಪಟ್ಟಿಯಲ್ಲಿ ಕೋಲಾರ, ಬಾದಾಮಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿರದಿರುವುದು ಕುತೂಹಲ ಮೂಡಿಸಿದೆ.
ಇದನ್ನು ಓದಿ: ಕೋಲಾರ, ವರುಣಾ ಎರಡೂ ಕಡೆ ಸ್ಪರ್ಧೆಗೆ ಸಿದ್ದರಾಮಯ್ಯ ಸಿದ್ಧತೆ: ಹೈಕಮಾಂಡ್‌ನಿಂದಲೂ ಒಪ್ಪಿಗೆ ಸಾಧ್ಯತೆ