ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ನೌಕರರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರವನ್ನು ಮೇ 6 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ತುಮಕೂರು : ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ನೌಕರರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರವನ್ನು ಮೇ 6 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಎಲ್ಲಾ ಗಳಲ್ಲಿ ಮೇ 6ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣಾ ಕೆಲಸಕ್ಕೆ ನಿಯೋಜನೆಯಾಗಿರುವ ಅಧಿಕಾರಿ/ಸಿಬ್ಬಂದಿಗಳಿಗೆ ಪುನಃಶ್ಚೇತನ ತರಬೇತಿ (ಸಂದೇಹ ಪರಿಹಾರಾತ್ಮಕ ತರಬೇತಿ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
undefined
ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಲ್ಲಿ ಚುನಾವಣೆ ಕೆಲಸಕ್ಕೆ ನಿಯೋಜಿಸಿರುವ ಅಧಿಕಾರಿ, ನೌಕರರಿಗೆ ಮೇ 3, 2023ರಂದು ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತರಬೇತಿಯನ್ನು ನೀಡಲಾಗಿದ್ದು, ಸದರಿ ತರಬೇತಿಯಲ್ಲಿ ಈಗಾಗಲೇ ತರಬೇತಿ ಪಡೆದಿರುವ ಚುನಾವಣಾ ಸಿಬ್ಬಂದಿಗಳು ತಮಗೆ ಹೆಚ್ಚಿನ ತರಬೇತಿ ಅವಶ್ಯವಿದ್ದಲ್ಲಿ ಪುನಃಶ್ಚೇತನ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಮತ್ತು ಫೆಸಿಲಿಟೇಷನ್ ಸೆಂಟರ್‌ನಲ್ಲಿ ಅಂಚೆ ಮೂಲಕ ಮತದಾನ ಮಾಡದಿರುವ ಅಧಿಕಾರಿ, ಸಿಬ್ಬಂದಿಗಳು ಅಂಚೆ ಮತದಾನ ಮಾಡಬಹುದಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವ, ಆಯಾ ವಿಧಾನಸಭಾ ಕ್ಷೇತ್ರಗಳ ಪುನಃಶ್ಚೇತನ ತರಬೇತಿ ಸ್ಥಳಗಳಲ್ಲಿಯೇ ಅಂಚೆ ಮತದಾನ ಮಾಡಲು ಅವಕಾಶವಿದ್ದು, ಮೇ 6, 2023ರಂದು ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ತಮ್ಮ ಗುರುತಿನ ಚೀಟಿ ತೋರಿಸಿ ಫೆಸಿಲಿಟೇಷನ್ ಸೆಂಟರ್‌ನಲ್ಲಿ ಮತದಾನ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಚಿ.ನಾ.ಹಳ್ಳಿ - ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶೆಟ್ಟಿಕೆರೆ ರಸ್ತೆ, ತಿಪಟೂರು - ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆ, ತುರುವೇಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾಯಸಂದ್ರ ರಸ್ತೆ, ಕುಣಿಗಲ್ - ಸರ್ಕಾರಿ ಮಹಾತ್ಮ ಗಾಂಧಿ ಪದವಿಪೂರ್ವ ಕಾಲೇಜು, ಹಾಸನ ರಸ್ತೆ, ತುಮಕೂರು ನಗರ- ಸರ್ಕಾರಿ ಎಂಪ್ರೆಸ್ ಪದವಿ ಪೂರ್ವ ಕಾಲೇಜು, ಅಶೋಕ ರಸ್ತೆ, ತುಮಕೂರು ಗ್ರಾಮಾಂತರ - ಸರ್ಕಾರಿ ಪದವಿಪೂರ್ವ ಕಾಲೇಜು, ಭದ್ರಮ್ಮ ಛತ್ರದ ಹತ್ತಿರ, ಡಾ. ಶಿವಕುಮಾರ ಸ್ವಾಮೀಜಿ ರಸ್ತೆ, ತುಮಕೂರು ನಗರ, ಕೊರಟಗೆರೆ- ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ರಸ್ತೆ, ಗುಬ್ಬಿ- ಸರ್ಕಾರಿ ಪದವಿಪೂರ್ವ ಕಾಲೇಜು, ಗುಬ್ಬಿ ಟೌನ್, ಶಿರಾ - ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅಮರಾಪುರ ರಸ್ತೆ, ಪಾವಗಡ - ವೈ.ಎಸ್.ಆರ್. ರಂಗಯ್ಯ ಶೆಟ್ಟಿಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ರಸ್ತೆ, ಮಧುಗಿರಿ- ಸರ್ಕಾರಿಪ್ರಥಮ ದರ್ಜೆ ಕಾಲೇಜು, ಮಧುಗಿರಿ ಈ ವಿಳಾಸದಲ್ಲಿ ತರಬೇತಿ ನಡೆಯಲಿದೆ.