ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕನಿಷ್ಠ ಇಬ್ಬರು ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೇಟ್ ನೀಡಬೇಕು. ಇಲ್ಲದಿದ್ದಲ್ಲಿ ಸಮುದಾಯದ ಜನರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕನಕ ಸೇನೆಯ ಜಿಲ್ಲಾಧ್ಯಕ್ಷ ಕೆಂಪರಾಜು ತಿಳಿಸಿದರು.
ತುಮಕೂರು (ಅ.22): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕನಿಷ್ಠ ಇಬ್ಬರು ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೇಟ್ ನೀಡಬೇಕು. ಇಲ್ಲದಿದ್ದಲ್ಲಿ ಸಮುದಾಯದ ಜನರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕನಕ ಸೇನೆಯ ಜಿಲ್ಲಾಧ್ಯಕ್ಷ ಕೆಂಪರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ತುಮಕೂರು (Tumakur) ಜಿಲ್ಲೆಯ (congress) ಪಕ್ಷದಲ್ಲಿ ಗುರುತಿಸಿಕೊಂಡಿರುವ ಕುರುಬ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡದೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ 2000 ಇಸವಿ ನಂತರ ನಡೆದ ಐದು ಚುನಾವಣೆಗಳಲ್ಲಿ 11 ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಜನರಿಗೆ ಟಿಕೇಟ್ ನೀಡಿಲ್ಲ. ಜಿಲ್ಲೆಯ ನಾಯಕರಾದ ಡಾ.ಜಿ.ಪರಮೇಶ್ವರ್, ಟಿ.ಬಿ.ಜಯಚಂದ್ರ ಮತ್ತು ಕೆ.ಎನ್. ರಾಜಣ್ಣ ಸೇರಿದಂತೆ ಎಲ್ಲಾ ನಾಯಕರ ಪರವಾಗಿ ಕುರುಬ ಸಮುದಾಯ ಕೆಲಸ ಮಾಡುತ್ತಿದೆ. ಆದರೆ ಕುರುಬ ಸಮುದಾಯದ ಮುಖಂಡರಿಗೆ ಟಿಕೇಟ್ ಕೊಡಿಸುವ ನಿಟ್ಟಿನಲ್ಲಿ ಯಾರು ಸಹ ಸಹಕಾರ ನೀಡುತ್ತಿಲ್ಲ. ಒಂದು ರೀತಿಯ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಇದು ಸರಿಯಲ್ಲ ಎಂದರು.
ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಭೈಲಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನಾವು ಬೇಕು, ನಮಗೆ ಮಾತ್ರ ಅಧಿಕಾರವಿಲ್ಲ. ಈ ರೀತಿಯ ಧೋರಣೆಯನ್ನು ನಾವು ಖಂಡಿಸುತ್ತೇವೆ. ಇದನ್ನು ತಿದ್ದಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ವ್ಯತಿರಿಕ್ತ ಪರಿಣಾಮ ಎದುರಿಸುವುದು ಅನಿವಾರ್ಯ ಎಂದರು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ, 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕುರುಬ ಸಮುದಾಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.
ಮಾಜಿ ಶಾಸಕ ಲಕ್ಕಪ್ಪ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಮೈಲಾರಪ್ಪ,ಅನಿಲ್ ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಮಾರು 4.50 ಲಕ್ಷ ದಷ್ಟುಜನಸಂಖ್ಯೆಯನ್ನು ಹೊಂದಿರುವ ಕುರುಬ ಸಮುದಾಯ ಜಿಲ್ಲೆಯಲ್ಲಿದೆ. ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತದಾರ ರನ್ನು ಹೊಂದಿದೆ. ಅಲ್ಲದೆ ಉಳಿದ ಕ್ಷೇತ್ರಗಳಲ್ಲಿಯೂ ನಿರ್ಣಯ ಮತದಾರರಾಗಿದ್ದರೂ ಕಾಂಗ್ರೆಸ್ ಪಕ್ಷ ನಮ್ಮನ್ನು ಕಡೆಗಣಿಸುತ್ತಿದೆ.
-ಕೆಂಪರಾಜು ,ಕನಕ ಸೇನೆಯ ಜಿಲ್ಲಾಧ್ಯಕ್ಷ
ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಟಿಕೆಟ್
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಹೊಸಬರಿಗೆ ಮಣೆ ಹಾಕದೇ ನಿಷ್ಠ, ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.
ಪಟ್ಟಣದಲ್ಲಿ ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್ ನೇತೃತ್ವದಲ್ಲಿ ನಡೆದ ಮೂಲ (BJP) ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಪ್ರಾಮಾಣಿಕ, ನಿಷ್ಠೆಯುಳ್ಳವರು ಹಾಗೂ ನಿರಂತರವಾಗಿ ಕಾರ್ಯಕರ್ತರ ಸಮಸ್ಯೆ ಆಲಿಸುವ ಮಂದಿಗೆ Ticket) ನೀಡಬೇಕು. ವಿಧಾನಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತಂತೆ ವಿಸ್ತೃತ ಚರ್ಚೆ ನಡೆಯಿತು.
ಕಳೆದ 31 ವರ್ಷಗಳ ಹಿಂದಿನ ಆಯೋಧ್ಯೆ ರಾಮಮಂದಿರದ ಹೋರಾಟದ ಕಾಲದಿಂದಲೂ ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆಗೆ ಪಕ್ಷವನ್ನು ಸದೃಢವಾಗಿ ಕಟ್ಟಲು ಮುಂದಾಗಬೇಕಿದೆ ಎಂಬ ಅಭಿಪ್ರಾಯಗಳು ಸಭೆಯಲ್ಲಿ ವ್ಯಕ್ತವಾದವು.
ಎಚ್.ಎನ್.ಮಂಜುನಾಥ್ ಮಾತನಾಡಿ, ಪಿಎಲ್ಡಿ ಬ್ಯಾಂಕ್, ಕಸಬಾ ಸೊಸೈಟಿ, ಗೃಹ ನಿರ್ಮಾಣ ಸಹಕಾರ ಸಂಘ, ಹಿರೇಮರಳಿ ಗ್ರಾಪಂ, ತಾಲೂಕು ಪಂಚಾಯ್ತಿಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಡೆ ದಿನ ಅಭ್ಯರ್ಥಿ ಕಣಕ್ಕಿಳಿಸಿ ಕಡಿಮೆ ಅಂತರ ಸೋಲಾಯಿತು. ಜತೆಗೆ ಕಳೆದ ಜಿಪಂ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲುಂಟಾಗಿದೆ ಎಂದರು.
ಆಯೋಧ್ಯೆ ರಾಮಮಂದಿರದ ಹೋರಾಟ ಆರಂಭವಾದ ದಿನದಿಂದಲೂ ಪಕ್ಷದಲ್ಲಿ ನಿಷ್ಠೆಯಿಂದ ಮೂಲ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಜತೆಗೆ ನಾನೂ ಕೂಡ 31 ವರ್ಷಗಳಿಂದಲೂ ಕೇಸರಿ ಟವೆಲ… ಹಾಕಿ, ಪಕ್ಷದ ಬ್ಯಾನರ್ , ಬಂಟಿಂW್ಸ… ಕಟ್ಟಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ಯಾವ ಪಕ್ಷದವರು ಬಂದರೂ ಇದೇ ಕೇಸರಿ ಟವೆಲ… ಹಾಕಿಕೊಂಡಿದ್ದೇವೆ. ಬಿಜೆಪಿ ಬಿಟ್ಟು ಯಾವ ಪಕ್ಷಕ್ಕೂ ಹೋಗಿಲ್ಲ. ಕೇಸರಿ ಟವೆಲ… ಹಾಕಿಕೊಂಡು ನಾವು ಸುಮ್ಮನೇ ಕೂರಬೇಕೆ ಎಂದು ಪ್ರಶ್ನಿಸಿದರು.
ಕೆಲ ದಿನಗಳ ಹಿಂದೆ ನಾನೇ ಬಿಜೆಪಿ ಅಭ್ಯರ್ಥಿ, ನನ್ನನ್ನು ಬೆಂಬಲಿಸಿ ಎನ್ನುವ ಕರಪತ್ರಗಳು ಎಲ್ಲೆಡೆ ಹರಿದಾಡಿದೆ. ಪಕ್ಷ ಇನ್ನೂ ಯಾರು ಅಭ್ಯರ್ಥಿ ಎಂಬುದನ್ನು ತೀರ್ಮಾನಿಸಿಲ್ಲ. ಜತೆಗೆ ಯಾರಿಗೂ ಟಿಕೆಚ್ ಭರವಸೆ ನೀಡಿಲ್ಲ. ಈ ಮಧ್ಯೆ ನಾನೇ ಅಭ್ಯರ್ಥಿ ಎಂದರೆ ನಾವು ಯಾರೂ ಇಲ್ವ. ಕೇಸರಿ ಟವೆಲ… ಹಾಕಿಕೊಂಡು ತಿರುಗಲು ನಮಗೆ ಹುಚ್ಚ. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ನಿರ್ಣಯದ ಜತೆಗೆ ಪಕ್ಷ ಯಾರಿಗೆ ಟಿಕೆಚ್ ನೀಡಿದರೂ ಅದಕ್ಕೆ ಬದ್ದನಿದ್ದು, ನಮ್ಮೆಲ್ಲರ ವಿಶ್ವಾಸ ಗಳಿಸಿ ಟಿಕೆಚ್ ತರುವ ಯಾರೇ ಅಭ್ಯರ್ಥಿಯಾದರೂ ಅವರ ಪರ ಪ್ರಚಾರ ನಡೆಸುವೆ ಎಂದರು.
ಕಾರ್ಯಕರ್ತರ ಒತ್ತಾಸೆಯಂತೆ 2004ರಲ್ಲಿ ಅಭ್ಯರ್ಥಿಯಾಗಿದ್ದೆ. 54ಸಾವಿರ ಮತ ಪಡೆದವರು ಶಾಸಕರಾಗಿದ್ದರು. ಈಗ ಗೆಲ್ಲುವವರ ಮತಗಳಿಕೆ ಹೆಚ್ಚಾಗುತ್ತಿದೆ. ಬಳಿಕ 2008ರಲ್ಲಿ ನನ್ನ ಹೆಸರು ಪ್ರಸ್ತಾಪವಾದರೂ ಮಾಜಿ ಶಾಸಕ ಕೆಂಪೇಗೌಡರಿಗೆ ಟಿಕೆಚ್ ನೀಡಲಾಯಿತು. 2013ರಲ್ಲಿ ಜಿ.ಎಂ.ರವೀಂದ್ರ ಅವರಿಗೆ ಟಿಕೆಚ್ ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.