Tumakur : ಬಿಎಸ್‌ಪಿಗೆ ಸಾಮೂಹಿಕ ರಾಜೀನಾಮೆ

By Kannadaprabha NewsFirst Published Apr 22, 2023, 5:56 AM IST
Highlights

ನನ್ನ ವೈಯಕ್ತಿಕ ಕಾರಣಗಳಿಂದ ನಾನು ಮತ್ತು ತಾಲೂಕಿನ ಎಲ್ಲಾ ಸದಸ್ಯರು ಚರ್ಚೆ ನಡೆಸಿ ಸಾಮೂಹಿಕವಾಗಿ ಬಿಎಸ್‌ಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇವೆ ಎಂದು ಜಟ್ಟಿಅಗ್ರಹಾರ ನಾಗರಾಜು ತಿಳಿಸಿದರು.

ಕೊರಟಗೆರೆ: ನನ್ನ ವೈಯಕ್ತಿಕ ಕಾರಣಗಳಿಂದ ನಾನು ಮತ್ತು ತಾಲೂಕಿನ ಎಲ್ಲಾ ಸದಸ್ಯರು ಚರ್ಚೆ ನಡೆಸಿ ಸಾಮೂಹಿಕವಾಗಿ ಬಿಎಸ್‌ಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇವೆ ಎಂದು ಜಟ್ಟಿಅಗ್ರಹಾರ ನಾಗರಾಜು ತಿಳಿಸಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಹತ್ತಿರವಿರುವ ಪತ್ರಿಕಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿ, ಕ್ಷೇತ್ರದ 324 ಬೂತ್‌ನ ಸದಸ್ಯರು ಚರ್ಚೆ ನಡೆಸಿ ತೀರ್ಮಾನ ತಗೆದುಕೊಂಡು ಎಲ್ಲರೂ ಬಹುಜನ ಸಮಾಜ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಬೂತ್‌ ಮಟ್ಟದ ಕಮಿಟಿ ಸದಸ್ಯರೊಂದಿಗೆ ಚರ್ಚಿಸಿ ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ತಿಳಿಸುತ್ತೇನೆ ಎಂದು ಹೇಳಿದರು.

ಕ್ಷೇತ್ರದಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟದ ಬೂತ್‌ ಕಮಿಟಿಗಳನ್ನು ರಚಿಸಿ ಪ್ರತಿ ಗ್ರಾಮಗಳಲ್ಲಿಯೂ ಶಿಬಿರಗಳನ್ನು ಮಾಡಿದ್ದೇನೆ. ಸಂವಿಧಾನದ ಬಗ್ಗೆ ಸಾಮಾನ್ಯ ಜನರಲ್ಲಿ ಜಾಗೃತಿ ಮೂಡಿಸಿ ಅನೇಕ ಜನಪರ ಕೆಲಸ ಮಾಡಿದ್ದೇವೆ. ನಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸಿ ಯಾರು ಕ್ಷೇತ್ರದ ಪರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾರೆ ಎಂಬುದನ್ನು ಅರಿತು ಆ ಪಕ್ಷವನ್ನು ಬೆಂಬಲಿಸುತ್ತೇವೆ ಎಂದರು.

ಸುಮಾರು 2 ವರ್ಷಗಳಿಂದ ಕೊರಟಗೆರೆ ತಾಲೂಕಿನಲ್ಲಿ ತಳಮಟ್ಟದಿಂದಲ್ಲೂ ಸಂಘಟನೆ ಮಾಡಿ ಪಕ್ಷವನ್ನು ಕಟ್ಟಿದ್ದೇನೆ. ನಮ್ಮ ರಾಜ್ಯ ಪ್ರಧಾನ ಕಾರ್ಯದರ್ಶಿಯವರ ನಡವಳಿಕೆ ಬಗ್ಗೆ ಬೇಸತ್ತು ಈ ರಾಜೀನಾಮೆ ತೀರ್ಮಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಕಾಂಗ್ರೆಸ್‌ ಅಥವಾ ಜೆಡಿಎಸ್‌ ಪಕ್ಷ ಸೇರುವ ನಿರ್ಧಾರ ಮಾಡಲಿದ್ದೇವೆ ಎಂದರು.

ಸಮನಾಗಿ ಬಾಳಲು ಬಿಎಸ್‌ಪಿ ಅಧಿಕಾರಕ್ಕೆ ತನ್ನಿ

 ಶಿರಾ (ನ.19):  ದೇಶದಲ್ಲಿ ಎಲ್ಲಾ ಜಾತಿ ಧರ್ಮವರು ಸಮಾನವಾಗಿ ಬಾಳಲು ಜನತೆ ಬಿಎಸ್‌ಪಿ ಪಕ್ಷ ಅಧಿಕಾರಕ್ಕೆ ತನ್ನಿ. ಬಿಎಸ್‌ಪಿ ಪಕ್ಷವು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು. ಸಂವಿಧಾನವೇ ನಮ್ಮ ಪ್ರಣಾಳಿಕೆಯನ್ನಾಗಿ ಮಾಡಿಕೊಂಡಿರುವ ಏಕೈಕ ಪಕ್ಷ. ಯಾವುದಾದರೂ ಪಕ್ಷ ಸಂವಿಧಾನ ರಕ್ಷಣೆ ಬಗ್ಗೆ ಯಾತ್ರೆ ಮಾಡಿದ್ದರೆ ಅದು ಬಿಎಸ್‌ಪಿ ಪಕ್ಷ ಮಾತ್ರ ಎಂದು ರಾಜ್ಯಾಧ್ಯಕ್ಷ ಮಂಡ್ಯ ಕೃಷ್ಣಮೂರ್ತಿ ಹೇಳಿದರು.

ಸಂವಿಧಾನದ ಸಂರಕ್ಷಣೆಗಾಗಿ ಬಹುಜನ ಸಮಾಜ ಪಾರ್ಟಿ ವತಿಯಿಂದರಾಜ್ಯವ್ಯಾಪಿ ಹಮ್ಮಿಕೊಂಡಿದ್ದ ಜೈ ಭೀಮ್‌ ಜನಜಾಗೃತಿ ಜಾಥಾ ಶಿರಾ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದರು.

(BSP)  ರಾಜ್ಯ ಉಪಾಧ್ಯಕ್ಷ ಕೆ.ಬಿ.ವಾಸು ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿ (Karnataka)  ಭ್ರಷ್ಟಾಚಾರ ಮಿತಿಮೀರಿದೆ. ಬಡವರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಮತಗಳನ್ನು ಖರೀದಿ ಮಾಡಿ ಅಧಿಕಾರದಲ್ಲಿರುವ ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಮಹಿಳೆಯರಿಗೆ ಸಬ್ಸಿಡಿಯಲ್ಲಿ ಗ್ಯಾಸ್‌ ಸಿಲಿಂಡರ್‌ ನೀಡಿ ಈಗ ಒಂದು ಸಿಲಿಂಡರ್‌ಗೆ 1100 ರುಪಾಯಿ ಅಡುಗೆ ಅನಿಲ ದರ ಮಾಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಹಾಗೂ ದಿನಬಳಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿ ಬಡವರನ್ನು ಇನ್ನಷ್ಟುಬಡವರನ್ನಾಗಿ ಮಾಡಿರುವ ಸರ್ಕಾರ ದೇಶದಲ್ಲಿ ಹೊಸ ಶಿಕ್ಷಣ ನೀತಿ ತಂದು ದಲಿತರಿಗೆ ಹಿಂದುಳಿದವರಿಗೆ ಶಿಕ್ಷಣವನ್ನು ವಂಚಿಸುವ ಪ್ರಯತ್ನ ಹಾಗೂ ಇದು ಮನುಸ್ಮೃತಿಯನ್ನು ಜಾರಿಗೆ ತರುವ ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಇದು ನಡೆಯೋದಿಲ್ಲ. ರಾಜ್ಯದ ಎಲ್ಲಾ ಬಹುಜನರಾದ ಲಿಂಗಾಯತ, ಒಕ್ಕಲಿಗ, ಕುರುಬ, ಮಡಿವಾಳ, ಕಮ್ಮಾರ, ಎಸ್‌ಸಿ, ಎಸ್‌ಟಿ ಸೇರಿದಂತೆ ಹಲವು ತಳಸಮುದಾಯಗಳು ಅಭಿವೃದ್ಧಿ ಹೊಂದಬೇಕಾದರೆ ಮುಂದಿನ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದರು.

ಜೈ ಭೀಮ್‌ ಜನಜಾಗೃತಿ ಜಾಥಾವು ನಗರದ ಅಂಬೇಡ್ಕರ್‌ ಸರ್ಕಲ್‌ನಿಂದ ಹೊರಟು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್‌ ರಾರ‍ಯಲಿ ನಡೆಸಿತು. ಈ ಸಂದರ್ಭದಲ್ಲಿ ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರಸಂದ್ರ ಮುನಿಯಪ್ಪ, ಖಜಾಂಚಿ ಮಹಮದ್‌ ಆಸೀಫ್‌ ಇಕ್ಬಾಲ್‌, ರಾಜ್ಯ ಕಾರ್ಯದರ್ಶಿ ಶೂಲಯ್ಯ, ಜಿಲ್ಲಾಧ್ಯಕ್ಷ ಜೆ.ಎನ್‌.ರಾಜಸಿಂಹ, ತುಮಕೂರು ಜಿಲ್ಲೆ ಉಸ್ತುವಾರಿ ರುದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸಿ.ರಂಗಧಾಮಯ್ಯ, ಜಿಲ್ಲಾ ಕಾರ್ಯದರ್ಶಿ ತಾಲೂಕು ಉಸ್ತುವಾರಿ ಗುಮ್ಮನಹಳ್ಳಿ ಮಂಜುನಾಥ, ತಾಲೂಕು ಅಧ್ಯಕ್ಷ ವೀರಕ್ಯಾತಯ್ಯ, ಉಪಾಧ್ಯಕ್ಷ ಶಿವಕುಮಾರ್‌, ಪ್ರಧಾನ ಕಾರ್ಯದರ್ಶಿ ಸಣ್ಣಭೂತಣ್ಣ, ನಗರ ಅಧ್ಯಕ್ಷ ಚಾಂದ್‌ ಪಾಷ ಸೇರಿದಂತೆ ಹಲವರು ಭಾಗವಹಿಸಿದ್ದರು.

click me!