ತುಮಕೂರು: ಬಿಜೆಪಿ ಮಾಜಿ ಶಾಸಕನ ಮೇಲೆ ಹಲ್ಲೆಗೆ ಯತ್ನ

Published : Jun 18, 2019, 03:20 PM IST
ತುಮಕೂರು: ಬಿಜೆಪಿ ಮಾಜಿ ಶಾಸಕನ ಮೇಲೆ ಹಲ್ಲೆಗೆ ಯತ್ನ

ಸಾರಾಂಶ

ತುಮಕೂರು ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು  ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ತುಮಕೂರು, (ಜೂ.18): ಜೆಡಿಎಸ್ ಕಾರ್ಯಕರ್ತರು, ಮುಖಂಡರು ಸೇರಿಕೊಂಡು ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಇಂದು (ಮಂಗಳವಾರ) ತುಮಕೂರಿನ ಸುದ್ದಿಗೋಷ್ಠಿ ಮುಗಿಸಿ ಖಾಸಗಿ ಹೋಟೆಲ್‌ನಲ್ಲಿ ವಾಪಸ್ಸಾಗುತಿದಾಗ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಸುರೇಶ್ ಗೌಡರ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನಿಸಿದ್ದಾರೆ.

ತುಮಕೂರು ಗ್ರಾಮಾಂತರದಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿರುವುದರ ಕುರಿತಂತೆ ಸುದ್ದಿಗೋಷ್ಠಿ ನಡೆಸಿದ ಸುರೇಶ್ ಗೌಡ ಅವರು,  ಕಳ್ಳತನದಲ್ಲಿ ಪೊಲೀಸರು ಶಾಮಿಲಾಗಿರುವ ಶಂಕೆ ವ್ಯಕ್ತಪಡಿಸಿದರು.

ಇದರಿಂದ ಕೆರಳಿದ ಜೆಡಿಎಸ್ ಮುಖಂಡರು ಸುರೇಶ್ ಗೌಡರ ಮೇಲೆ ಮುಗಿಬಿದ್ದು ತಳ್ಳಾಟ ನೂಕಾಟ ಮಾಡಿ ಹಲ್ಲೆಗೆ ಮುಂದಾಗಿದ್ದಾರೆ.

PREV
click me!

Recommended Stories

ಬೆಂಗಳೂರು ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಅಗ್ನಿ ಅವಘಡ: ನಡುರಸ್ತೆಯಲ್ಲೇ ಭಸ್ಮವಾದ ಕಾರು
ಬೆಂಗಳೂರು ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ, ಪೊಲೀಸ್ ಬಂದಾಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ!