ಪಾವಗಡ (ಜು.21): ಪಾವಗಡ ತಾಲೂಕಿನ ಮಾಜಿ ತಾಪಂ ಅಧ್ಯಕ್ಷ ಸೊಗಡು ವೆಂಕಟೇಸ್ ಕಾಂಗ್ರೆಸ್ ತೊರೆದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತ ಹಾಗೂ ತಾಲೂಕಿನ ನಾಗಲಮಡಿಕೆ ತಾಪಂ ಕ್ಷೇತ್ರದ ಸದಸ್ಯರಾಗಿದ್ದರು.
ಜೆಡಿಎಸ್ ತ್ಯಜಿಸ್ತಾರಾ ಶಾಸಕ : ಕೈ ಸೇರ್ಪಡೆ ಬಗ್ಗೆ ಸ್ಪಷ್ಟನೆ
ಮಾಜಿ ತಾಪಂ ಅಧ್ಯಕ್ಷ ಸೊಗಡು ವೆಂಕಟೇಶ್ ಅವರು ಸೋಮವಾರ ಬೆಂಗಳೂರಿನ ಕಚೇರಿಗೆ ತೆರಳಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿರುವುದಾಗು ತಿಳಿಸಿದ್ದಾರೆ.
ಇದೇ ವೇಳೆ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎನ್ ತಿಮ್ಮಾರೆಡ್ಡಿ ಜಿಲ್ಲಾ ಘಟಕದ ಜೆಡಿಎಸ್ ಅಧ್ಯಕ್ಷ ಪಾವಗಡ ಅರ್.ಸಿ ಆಂಜನಪ್ಪ ಹಾಗು ಇತರೆ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.