ರಾಷ್ಟ್ರಮಟ್ಟದಲ್ಲಿ ಮಿಂಚಿದ ತುಮಕೂರು ಜಿಲ್ಲೆ; ರಾಜ್ಯಕ್ಕೆ ಫಸ್ಟ್, ದೇಶಕ್ಕೆ 9ನೇ ಸ್ಥಾನ

Published : Sep 02, 2026, 06:19 AM IST
Tumakuru

ಸಾರಾಂಶ

ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಮತ್ತು ದೇಶದಲ್ಲಿ 9ನೇ ಸ್ಥಾನ ಪಡೆದಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಈ ವಿಷಯವನ್ನು ಪ್ರಕಟಿಸಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರವೇ ಈ ಸಾಧನೆಗೆ ಕಾರಣವೆಂದು ತಿಳಿಸಿದ್ದಾರೆ.

ತುಮಕೂರು: ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಹಾಗೂ ದೇಶದಲ್ಲಿ 9ನೇ ರ‍್ಯಾಂಕ್ ಪಡೆದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು

ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಹಾಗೂ ದೇಶದಲ್ಲಿ 9ನೇ ರ‍್ಯಾಂಕ್

ಪ್ರಸಕ್ತ ಸಾಲಿನ ಜುಲೈ ಮಾಹೆಯವರೆಗೆ ಎಲ್ಲಾ ಇಲಾಖೆಗಳ ಪ್ರಗತಿಯ ಮಾನದಂಡಗಳ ಆಧಾರದಲ್ಲಿ ತುಮಕೂರು ಜಿಲ್ಲೆಯು ಕರ್ನಾಟಕ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಹಾಗೂ ದೇಶದಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜಿಲ್ಲಾ ನೋಡಲ್ ಅಧಿಕಾರಿ ಡಾ. ಏಕರೂಪ್ ಖೌರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಉಪ ಕಾರ್ಯದರ್ಶಿ ಈಶ್ವರಪ್ಪ ಅವರ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಕೆ.ವಿ.ಕೆ. ವಿಜ್ಞಾನಿಗಳು, ಲೀಡ್ ಬ್ಯಾಂಕ್, ನಬಾರ್ಡ್ ಅಧಿಕಾರಿಗಳ ಸಹಕಾರವು ಈ ಸಾಧನೆಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ತುಮಕೂರಿನಲ್ಲಿ HAL-SAFRAN ಕಂಪನಿಯಿಂದ ಜಂಟಿಯಾಗಿ ಅರಾವಳಿ ಹೆಲಿಕಾಪ್ಟರ್‌ ಇಂಜಿನ್‌ ನಿರ್ಮಾಣ

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಕೆವಿಕೆ ಮುಖ್ಯಸ್ಥ ಲೋಗಾನಂದನ್ ಸೇರಿದಂತೆ ಮತ್ತಿತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

ಇದನ್ನೂ ಓದಿ: 2ನೇ ಏರ್‌ಪೋರ್ಟ್ ತುಮಕೂರು ಜಿಲ್ಲೆಯಲ್ಲಾಗಲಿ: 3 ತಾಲೂಕುಗಳಲ್ಲಿ ನಿರ್ಮಾಣಕ್ಕೆ ಪ್ರಸ್ತಾವನೆ

PREV
Read more Articles on
click me!

Recommended Stories

ಪಟ್ಟಂದೂರಿನ ವಿವಾದಿತ ಜಾಗ: ನಿರ್ಮಾಣ ಚಟುವಟಿಕೆ ನಡೆಸದಂತೆ ಹೈಕೋರ್ಟ್‌ ಮಧ್ಯಂತರ ತಡೆ
ಚಟಕ್ಕೆ ಬಿದ್ದು ತಾವೇ ಹುಕ್ಕಾಬಾರ್‌ ತೆಗೆದ್ದಿದ್ದ ಟೆಕ್ಕಿ ಸೇರಿದಂತೆ ಇಬ್ಬರ ಸೆರೆ