ತುಮಕೂರು : ಕೃಷಿ ಭಾಗ್ಯ ಯೋಜನೆಗಾಗಿ ಅರ್ಜಿ ಆಹ್ವಾನ

Published : Jan 02, 2024, 09:57 AM IST
ತುಮಕೂರು :  ಕೃಷಿ ಭಾಗ್ಯ ಯೋಜನೆಗಾಗಿ ಅರ್ಜಿ ಆಹ್ವಾನ

ಸಾರಾಂಶ

ಕೃಷಿ ಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರ ಹಿತದೃಷ್ಟಿಯಿಂದ 2023-24ನೇ ಸಾಲಿನಿಂದ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್. ಚನ್ನಕೇಶವಮೂರ್ತಿ ತಿಳಿಸಿದ್ದಾರೆ.

  ತಿಪಟೂರು :  ಕೃಷಿ ಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರ ಹಿತದೃಷ್ಟಿಯಿಂದ 2023-24ನೇ ಸಾಲಿನಿಂದ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್. ಚನ್ನಕೇಶವಮೂರ್ತಿ ತಿಳಿಸಿದ್ದಾರೆ.

ಸದರಿ ಯೋಜನೆಯನ್ನು ಕೃಷಿ ನೀತಿ, 2014 ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸುತ್ತಿದ್ದು, ಮಳೆಯ ನೀರನ್ನು ಸಂಗ್ರಹಿಸಿ ಸಂದಿಗ್ದ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರುಣಿಸಿ ನೀರಿನ ಸಮರ್ಪಕ ಬಳಕೆ ಮಾಡುವುದನ್ನು ಉತ್ತೇಜಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ ಸೆಟ್, ಸೋಲಾರ್ ಪಂಪ್ ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಂತೆ ಒಟ್ಟು ಆರು ಘಟಕಗಳನ್ನು ಹೊಂದಿರುತ್ತದೆ. ಅರ್ಜಿದಾರರು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ಎಲ್ಲಾ ಘಟಕಗಳನ್ನು ಅನುಷ್ಠಾನ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಕ್ಷೇತ್ರದ ಬದು ನಿರ್ಮಾಣಕ್ಕೆ, ನೀರು ಸಂಗ್ರಹಣಾ ರಚನೆಗೆ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆಗೆ ಸಾಮಾನ್ಯ ವರ್ಗಕ್ಕೆ 80ರಷ್ಟು, ಪ.ಜಾತಿ. ಪಂಗಡಕ್ಕೆ 90ರಷ್ಟು ಧನಸಹಾಯ ಹಾಗೂ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿಗೆ ಸಾಮಾನ್ಯ ವರ್ಗಕ್ಕೆ ಶೇ.೪೦ರಷ್ಟು, ಪಂಗಡಕ್ಕೆ 50ರಷ್ಟು, ಹೊಂಡದಿಂದ ನೀರು ಹಾಯಿಸಲು ಸಾಮಾನ್ಯ ವರ್ಗಕ್ಕೆ 50ರಷ್ಟು ಪ.ಪಂಗಡಕ್ಕೆ 90ರಷ್ಟು, ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ ನೀರಾವರಿ ಯೋಜನೆಯ ಒಗ್ಗೂಡಿಸುವಿಕೆಯಡಿ ಶೇ. 90ರಷ್ಟು ಧನಸಹಾಯ ನೀಡಲಾಗುವುದು.

ಕೃಷಿಭಾಗ್ಯ ಯೋಜನೆಯ ಪ್ರಯೋಜನೆ ಪಡೆಯಲು ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು. ಹಿಂದಿನ ವರ್ಷಗಳಲ್ಲಿ ಕೃಷಿ ಭಾಗ್ಯ ಅಥವಾ ಸರ್ಕಾರದ ಇನ್ಯಾವುದೇ ಯೋಜನೆಯಡಿ ಕೃಷಿ ಹೊಂಡಕ್ಕೆ ಸಹಾಯಧನ ಪಡೆದಿರಬಾರದು. ತಾಲೂಕು ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು, ಜ.೫ರವರೆಗೆ ಅರ್ಜಿ ವಿತರಿಸಲಾಗುತ್ತಿದೆ. ಆಸಕ್ತ ರೈತರು ಅರ್ಜಿಗಳನ್ನು ಪಡೆದು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳಾದ ಆಧಾರ್ ಪ್ರತಿ, ಪಹಣಿ, ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿಗಳೊಂದಿಗೆ ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

PREV
click me!

Recommended Stories

ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್