ತುಮಕೂರು : ಶ್ರೇಷ್ಠ ತೋಟಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ

By Kannadaprabha News  |  First Published Jan 3, 2024, 9:07 AM IST

ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಒಬ್ಬ ಕೃಷಿಕರಿಗೆ, ಶ್ರೇಷ್ಠ ತೋಟಗಾರಿಕೆ ರೈತ/ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದರಿಂದ ತುಮಕೂರು ಜಿಲ್ಲೆಯ ಅರ್ಹ ರೈತ ಅಭ್ಯರ್ಥಿಗಳು 10ನೇ ಜನವರಿ, 2024ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಕೆವಿಕೆ ಪ್ರಕಟಣೆ ತಿಳಿಸಿದೆ.


ತಿಪಟೂರು: ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಬಾಗಲಕೋಟದಲ್ಲಿ 2024ರ ಫೆಬ್ರವರಿ 10 ರಿಂದ 12ರವರೆಗೆ ಬರ ಸಹಿಷ್ಣುತೆಗಾಗಿ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಒಬ್ಬ ಕೃಷಿಕರಿಗೆ, ಶ್ರೇಷ್ಠ ತೋಟಗಾರಿಕೆ ರೈತ/ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದರಿಂದ ತುಮಕೂರು ಜಿಲ್ಲೆಯ ಅರ್ಹ ರೈತ ಅಭ್ಯರ್ಥಿಗಳು 10ನೇ ಜನವರಿ, 2024ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಕೆವಿಕೆ ಪ್ರಕಟಣೆ ತಿಳಿಸಿದೆ.

ಈ ಪ್ರಶಸ್ತಿಗೆ ಕಳೆದ ಮೂರು ವರ್ಷಗಳಲ್ಲಿ ಯಾವುದೇ ತೋಟಗಾರಿಗೆ, ಪಶುಸಂಗೋಪನೆ ಮತ್ತು ಐಸಿಎಸ್‌ಆರ್ ಪ್ರಶಸ್ತಿಗಳನ್ನು ತಮ್ಮ ಹಾಗೂ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಪಡೆದಿರಬಾರದು. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ತುಮಕೂರು ಜಿಲ್ಲೆಯ ರೈತ/ರೈತ ಮಹಿಳೆಯರು ಅರ್ಜಿ ನಮೂನೆಯನ್ನು, ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಚೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ದೊಡ್ಡಬೆಟ್ಟಹಳ್ಳಿ ಎದರು, ವಿದ್ಯಾರಣ್ಯಪುರ-ಯಲಹಂಕ ರಸ್ತೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ ಆಂಚೆ, . ಅಥವಾ ತೋ.ವಿ.ವಿ.ಯ ವೆಬ್‌ಸೈಟ್ www.uhsbagalkot.karnataka.gov.inಮೂಲಕ (ಆರ್ಜಿ ನಮೂನೆ: ಅನುಬಂಧ-೧) ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಅಥವಾ ದಿನಾಂಕ 10ನೇ ಜನವರಿ, 2024ಸಂಜೆ 5 ರೊಳಗಾಗಿ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಚೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ದೊಡ್ಡ ಬೆಟ್ಟಹಳ್ಳಿ ಎದರು, ವಿದ್ಯಾರಣ್ಯಪುರ-ಯಲಹಂಕ ರಸ್ತೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ ಆಂಚೆ, ಬೆಂಗಳೂರುಇಲ್ಲಿ ಸಲ್ಲಿಸಬೇಕು

Tap to resize

Latest Videos

ಹೆಚ್ಚಿನ ಮಾಹಿತಿಗಾಗಿ ಡಾ. ಎಸ್.ಎಲ್. ಜಗದೀಶ್, ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರು,,(9008492395/9448902528) ಅಥವಾ ಡಾ.ಬಿ.ಎಸ್.ಲಕ್ಷ್ಮಣರೆಡ್ಡಿ, ವಿಸ್ತರಣಾ ಮುಂದಾಳು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಬೆಂಗಳೂರು (9900585242) ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ 18004257910ಗೆ ಸಂಪರ್ಕಿಸಬಹುದು ಎಂದು ಕೆವಿಕೆ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

click me!