ತುಮಕೂರು: 1.5 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹ

By Kannadaprabha NewsFirst Published Aug 3, 2019, 8:07 AM IST
Highlights

ತಂಬಾಕು ಮಾರುವುದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇರಿ ಹಲವು ನಿಯಮಗಳನ್ನು ಉಲ್ಲಂಘಿಸಿದವರಿಂದ ಸುಮಾರು 1,69,800 ರು. ದಂಡ ವಸೂಲಿ ಮಾಡಲಾಗಿದೆ. ಒಟ್ಟು 1403 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ರವಿಪ್ರಕಾಶ ಎಂ.ಆರ್‌ ತಿಳಿಸಿದ್ದಾರೆ.

ತುಮಕೂರು(ಆ.03): ತಂಬಾಕು ಮಾರುವುದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇರಿ ಹಲವು ನಿಯಮಗಳನ್ನು ಉಲ್ಲಂಘಿಸಿದವರಿಂದ ಸುಮಾರು 1,69,800 ರು. ದಂಡ ವಸೂಲಿ ಮಾಡಲಾಗಿದೆ. ಒಟ್ಟು 1403 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ರವಿಪ್ರಕಾಶ ಎಂ.ಆರ್‌ ತಿಳಿಸಿದ್ದಾರೆ.

25 ದಿನಗಳ ಕಾರ್ಯಾಚರಣೆ:

ತುಮಕೂರು ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ, ಅಂಗಡಿಗಳಲ್ಲಿ ನಾಮಫಲಕ ಪ್ರದರ್ಶಿಸದಿರುವವರ, ತಂಬಾಕು ಉತ್ಪನ್ನಗಳನ್ನು ಜಾಹಿರಾತು ಮಾಡುವವರ, ಶಾಲಾ ಆವರಣಗಳಲ್ಲಿ ತಂಬಾಕು ಉತ್ಪನ್ನಗಳ ವಹಿವಾಟು ನಡೆಸುತ್ತಿರುವವರ ವಿರುದ್ಧ ಸತತವಾಗಿ ನಡೆಸಿದ 25 ದಿನಗಳ ಕಾರ್ಯಾಚರಣೆ ನಡೆಸಲಾಗಿದೆ.

ಹೆಲ್ಮೆಟ್‌ ಧರಿಸದೆ ಸಂಚರಿಸಿದ ಮಹಿಳಾ ಗಾರ್ಡ್‌ಗೆ ದಂಡ

1403 ಪ್ರಕರಣ:

ಒಟ್ಟು 1403 ಪ್ರಕರಣ ದಾಖಲಿಸಿ 1,69,800 ರು. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ರವಿಪ್ರಕಾಶ ಎಂ.ಆರ್‌ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್‌ ಇಲಾಖೆಯ ಸಿಬ್ಬಂದಿ ಹಾಗೂ ಸಮಾಜ ಕಾರ್ಯಕರ್ತ ಪುಂಡಲೀಕ ಲಕಾಟಿ, ಆರೋಗ್ಯ ಇಲಾಖೆ ಸಿಬ್ಬಂದಿ ನರಸಿಂಹರಾಜು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ತಾಲೂಕಿನ ಸಹಾಯಕ ಸಿಬ್ಬಂದಿಗಳು ಹಾಜರಿದ್ದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!