ದುಡಿಯುವ ಮಹಿಳೆಯರ ಮೂರು ವರ್ಷದವರೆಗಿನ ಮಕ್ಕಳನ್ನು ನೋಡಿಕೊಳ್ಳಲು ದೇಶದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಉಚಿತ ಸರ್ಕಾರಿ ಡೇ ಕೇರ್ ಸೆಂಟರ್’ಗಳ ಆರಂಭ
ತುಮಕೂರು: ದುಡಿಯುವ ಮಹಿಳೆಯರ ಮೂರು ವರ್ಷದವರೆಗಿನ ಮಕ್ಕಳನ್ನು ನೋಡಿಕೊಳ್ಳಲು ದೇಶದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಉಚಿತ ಸರ್ಕಾರಿ ಡೇ ಕೇರ್ ಸೆಂಟರ್’ಗಳನ್ನು ಆರಂಭಿಸಲಾಗಿದ್ದು, ‘ಕೂಸಿನ ಮನೆ’ ಹೆಸರಿನಲ್ಲಿ ತುಮಕೂರು ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇದಾಗಿದ್ದು, ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಭಾಷ್ಯ ಬರೆಯುವ ನಿರೀಕ್ಷೆ ಇದೆ. ಪ್ರಾರಂಭದಲ್ಲಿ ನರೇಗಾ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳಿಗೆ ಮಾತ್ರ ಈ ಕೂಸಿನ ಮನೆಯ ಸೌಲಭ್ಯ ದೊರೆಯಲಿದೆ. ಯೋಜನೆಯ ಯಶಸ್ಸನ್ನು ನೋಡಿಕೊಂಡು ಸರ್ಕಾರ ಇದನ್ನು ಗಾರ್ಮೆಂಟ್ಸ್ ಸೇರಿದಂತೆ ಇತರೆ ಕಾರ್ಮಿಕ ವರ್ಗದ ಮಹಿಳೆಯರಿಗೂ ವಿಸ್ತರಿಸಿದರೆ ಅಚ್ಚರಿಯಿಲ್ಲ.
ಏನಿದು ಕೂಸಿನ ಮನೆ?: ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳ ಪೋಷಣೆಗಾಗಿ ಕೂಸಿನ ಮನೆ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಕಾರ್ಮಿಕ ಮಹಿಳೆಯು ಕೆಲಸದ ವೇಳೆಯಲ್ಲಿ ತನ್ನ ಮಗುವನ್ನು ಕೂಸಿನ ಮನೆಯಲ್ಲಿ ಬಿಟ್ಟು ನೆಮ್ಮದಿಯಿಂದ ಕೆಲಸ ಮಾಡಲು ಅವಕಾಶ ನೀಡುವ ಉದ್ದೇಶವನ್ನು ಹೊಂದಿದೆ.
undefined
ತುಮಕೂರು ತಾಲ್ಲೂಕು ದೇವಲಾಪುರ ಯ ಕಾಡುಸಿದ್ದಯ್ಯನಪಾಳ್ಯ ಗ್ರಾಮದಲ್ಲಿ ದೇಶದ ಹಾಗೂ ರಾಜ್ಯದ ಮೊದಲ ಸರ್ಕಾರಿ ಡೇ ಕೇರ್ ಸೆಂಟರ್ ಎಂದು ಹೇಳಬಹುದಾದ ‘ಕೂಸಿನ ಮನೆ’ಯನ್ನು ಶನಿವಾರ ಗೃಹ ಸಚಿವ ಡಾ.ಜಿ ಪರಮೇಶ್ವರ್ ಉದ್ಘಾಟಿಸಿದ್ದಾರೆ.
ಜಿಲ್ಲೆಯಲ್ಲೇ ಪ್ರಥಮ: ರಾಜ್ಯದಲ್ಲೇ ಪ್ರಪ್ರಥಮವಾಗಿ ಕೂಸಿನ ಮನೆ ಯೋಜನೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯ ೧೭೫ ಗ್ರಾಮ ಪಂಚಾಯತಿಗಳಲ್ಲಿ ಕೂಸಿನ ಮನೆಗಳನ್ನು ಗುರುತಿಸಲಾಗಿದ್ದು, ಒಂದು ತಿಂಗಳೊಳಗಾಗಿ ಎಲ್ಲಾ 330 ಪಂಚಾಯತಿಗಳಲ್ಲಿಯೂ ಕೂಸಿನ ಮನೆ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಕೂಸಿನ ಮನೆಗೆ ದಾಖಲಾದ ಪ್ರತಿ ಮಗುವಿಗೆ ದಿನವೊಂದಕ್ಕೆ ಸ್ಥಳೀಯ ಆಹಾರ ಪದ್ಧತಿಗನುಗುಣವಾಗಿ ಪೌಷ್ಠಿಕಾಂಶಗಳನ್ನೊಳಗೊಂಡ ಸಮತೋಲನ ಆಹಾರ ನೀಡಲಾಗುತ್ತದೆ.