Tumakur : 5 ಲಕ್ಷ ಮೌಲ್ಯದ ಬೆಳ್ಳಿ ದೋಚಿ ಕಳ್ಳರು ಪರಾರಿ

By Kannadaprabha News  |  First Published Oct 14, 2023, 8:50 AM IST

ಕೆಜಿ ಟೆಂಪಲ್ ಸಿರಿಯ ರಸ್ತೆಯಲ್ಲಿರುವ ಭವಾನಿ ಜ್ಯುವೆಲ್ಲರ್ಸ್ ಅಂಡ್ ಬ್ಯಾಂಕರ್ಸ್ ನಲ್ಲಿ ಬೆಳ್ಳಿ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.


 ಗುಬ್ಬಿ: ಕೆಜಿ ಟೆಂಪಲ್ ಸಿರಿಯ ರಸ್ತೆಯಲ್ಲಿರುವ ಭವಾನಿ ಜ್ಯುವೆಲ್ಲರ್ಸ್ ಅಂಡ್ ಬ್ಯಾಂಕರ್ಸ್ ನಲ್ಲಿ ಬೆಳ್ಳಿ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಕೆ ಜಿ ಟೆಂಪಲ್ -ಸಿರಿವರ ರಸ್ತೆಯ ಎಸ್ ಬಿ ಐ ಪಕ್ಕದಲ್ಲಿರುವ ಭವಾನಿ ಜುವೆಲರ್ಸ್ ಅಂಡ್ ಬ್ಯಾಂಕರ್ಸ್ ನಲ್ಲಿ ಮಧ್ಯರಾತ್ರಿ ಅಂಗಡಿಗೆ ಕಳ್ಳರು ನುಗ್ಗಿ ಕಬ್ಬಿಣದ ಕೊಲಬ್ರೇಶನ್ ಗೇಟ್ ಮತ್ತು ರೋಲಿಂಗ್ ಶೆಟರ್ ಅನ್ನು ಗ್ಯಾಸ್ ಕಟರ್ ನಿಂದ ಚೌಕಾಕಾರವಾಗಿ ಕಟ್ ಮಾಡಿ ಒಳ ನುಗ್ಗಿ ಅಂದಾಜು 5ಲಕ್ಷ ಮೌಲ್ಯದ ಬೆಳ್ಳಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

Tap to resize

Latest Videos

undefined

ಅಂಗಡಿಯಲ್ಲಿದ್ದ ಯ ಕೊಳಚೈನು, ಕೈಚೈನು, ಕಾಲುಂಗುರ, ತಟ್ಟೆಗಳು, ಚೊಂಬು, ದೀಪಾಲೆ ಕಂಬ, ಕುಂಕುಮ ಬಟ್ಟಲು, ಡಾಲರ್, ಕೈ ಕಡಗ, ಬಳೆಗಳು, ಗ್ಲಾಸುಗಳು ಮತ್ತು ದೇವರ ವಿಗ್ರಹಗಳನ್ನು ಕಳ್ಳತನ ಮಾಡಿದ್ದಾರೆ, 5ಲಕ್ಷ ಮೌಲ್ಯದ ಬೆಳ್ಳಿಯ ವಸ್ತುಗಳು ಕಳ್ಳತನವಾಗಿದೆ. ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಡಿವೈಎಸ್ಪಿ ಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿ ಎಸ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಷ್ಟಿದೆ ಚಿನ್ನ- ಬೆಳ್ಳಿ ದರ

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5891

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 43,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 47,128

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 54,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 58,910

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  5,40,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,89,100

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 54,000 ಆಗಿದ್ದರೆ ಚೆನ್ನೈ  54,100, ಮುಂಬೈ 54,000 ಹಾಗೂ ಕೋಲ್ಕತ್ತಾದಲ್ಲಿ 54,000 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  54,150 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 715 ರೂ. 7150 ಹಾಗೂ ರೂ. 71500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  75,000 ಆಗಿದ್ದರೆ,  ಮುಂಬೈನಲ್ಲಿ ರೂ. 72,600 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 72,600 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 72, 600 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

click me!