ತುಮಕೂರು : ಬಿಸಿಯೂಟದಲ್ಲಿ ಹುಳು ಪತ್ತೆ: ಆತಂಕದಲ್ಲಿ ವಿದ್ಯಾರ್ಥಿಗಳು

By Kannadaprabha News  |  First Published Feb 1, 2024, 10:15 AM IST

ಮಧ್ಯಾಹ್ನದ ಬಿಸಿಯೂಟದ ವೇಳೆ ಆಹಾರ ಪದಾರ್ಥಗಳಲ್ಲಿ ಹುಳು ಪತ್ತೆಯಾಗಿದ್ದು ಇದರಿಂದ ವಿದ್ಯಾರ್ಥಿಗಳು ತೀವೃ ಆತಂಕಕ್ಕೀಡಾದ ಘಟನೆ ಮಂಗಳವಾರ ತಾಲೂಕಿನ ಜಾಜೂರಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದಿದೆ.


  ಪಾವಗಡ :  ಮಧ್ಯಾಹ್ನದ ಬಿಸಿಯೂಟದ ವೇಳೆ ಆಹಾರ ಪದಾರ್ಥಗಳಲ್ಲಿ ಹುಳು ಪತ್ತೆಯಾಗಿದ್ದು ಇದರಿಂದ ವಿದ್ಯಾರ್ಥಿಗಳು ತೀವೃ ಆತಂಕಕ್ಕೀಡಾದ ಘಟನೆ ಮಂಗಳವಾರ ತಾಲೂಕಿನ ಜಾಜೂರಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದಿದೆ.

ತಾಲೂಕು ಕಸಬಾ ಹೋಬಳಿ ವ್ಯಾಪ್ತಿಯ ಜಾಜೂರಾಯನಹಳ್ಳಿ ಗಡಿ ಪ್ರದೇಶದಲ್ಲಿದ್ದು ಇಲ್ಲಿನ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ಬಿಸಿಯೂಟದ ಅಡುಗೆಯ ಹಳೆ , ಬೇಳೆ ಇತರೆ ಆಹಾರ ಪದಾರ್ಥಗಳಲ್ಲಿ ಪದೇ ಪದೇ ಹುಳುಗಳು ಪತ್ತೆಯಾಗುತ್ತಿದ್ದು, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಫೋಷಕರು ಆನೇಕ ಭಾರಿ ಇಲ್ಲಿನ ಶಿಕ್ಷಕರ ಗಮನಕ್ಕೆ ತಂದಿದ್ದಾರೆ.

Tap to resize

Latest Videos

undefined

ಹುಳು ಪತ್ತೆಯ ಬಗ್ಗೆ ಸೂಕ್ತ ಮಾಹಿತಿ ಇದ್ದರೂ ಇಲ್ಲಿನ ಶಾಲೆಯ ಮುಖ್ಯ ಶಿಕ್ಷಕ ಯಾವುದೇ ಕ್ರಮವಹಿಸಿರಲಿಲ್ಲವೆಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಮಂಗಳವಾರ ಮಧ್ಯಾಹ್ನ ಬಿಸಿಯೂಟದ ಸೇವನೆ ವೇಳೆ ಊಟ ಹಾಗೂ ಸಾಂಬಾರು ಪದಾರ್ಥದಲ್ಲಿ ಹೆಚ್ಚು ಹುಳುಗಳು ಪತ್ತೆಯಾಗಿವೆ. ಇದರಿಂದ ಆತಂಕಗೊಂಡ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ್ದಾರೆ.

ಇನ್ನೂ ಘಟನೆಯ ವಿಷಯ ಹೊರಬೀಳುತ್ತಿದ್ದಂತೆ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರಪ್ಪ ಶಾಲೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು ಪರಿಶೀಲನೆ ನಡೆಸಿದ್ದು, ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಅಡುಗೆ ಮಾಡಬೇಕು. ಇದೇ ರೀತಿ ಮುಂದುವರಿದರೆ ಕಟ್ಟುನಿಟ್ಟಿನ ಕ್ರಮ ಜರಿಗಿಸುವುದಾಗಿ ಅಡಿಗೆ ಸಿಬ್ಬಂದಿಗೆ ಎಚ್ಚರಿಸಿದ್ದಾರೆ

ಬಳಿಕ ಮಾತನಾಡಿದ ಅವರು, ಸೆಪ್ಟೆಂಬರ್ ತಿಂಗಳಲ್ಲಿ ನೀಡಿರುವಂತಹ ಬೇಳೆ ಮತ್ತು ಗೋಧಿ ಆಹಾರ ಪದಾರ್ಥಗಳಿಗೆ ಹುಳುಗಳು ಬಿದ್ದಿರುವುದನ್ನು ಪರಿಶೀಲಿಸಲಾಗಿದೆ. ತಕ್ಷಣವೇ ಆಹಾರ ಪದಾರ್ಥಗಳನ್ನು ಬದಲಾಯಿಸಿ ಕೊಡುವ ಭರವಸೆ ವ್ಯಕ್ತಪಡಿಸಿದರು.

ಆಹಾರ ಧಾನ್ಯಗಳನ್ನು ಯಾವ ರೀತಿ ಶೇಖರಣೆ ಮಾಡಬೇಕು ಎಂಬುದರ ಬಗ್ಗೆ ಅಡುಗೆ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಹಳೆಯ ಬೇಳೆ ಮತ್ತು ಗೋದಿ ಬಳಸಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ. ಇನ್ನೂ ಮಂದೆ ಈ ರೀತಿ ಆಗದಂತೆ ಸರಿಪಡಿಸಿಕೊಳ್ಳಲು ಕ್ರಮವಹಿಸಿರುವುದಾಗಿ ಹೇಳಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಜಾಜೂರಾಯನಹಳ್ಳಿಯ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದು, ಆಹಾರ ಪದಾರ್ಥಗಳಲ್ಲಿ ಹುಳುಗಳಿರುವ ಆಹಾರ ಸೇವನೆ ಮಾಡಿದರೆ ವಿದ್ಯಾರ್ಥಿಗಳ ಆರೋಗ್ಯದ ಪರಿಸ್ಥಿತಿ ಏನಾಗಬೇಕು.ಶಾಲಾ ಮಕ್ಕಳಿಗೆ ತೊಂದರೆಯಾದರೆ ಸಹಿಸುವುದಿಲ್ಲ. ಇದೇ ರೀತಿ ಮುಂದುವರಿದರೆ, ತಾಲೂಕಿನ ಬಿಇಒ ಹಾಗೂ ಆಕ್ಷರ ದಾಸೋಹ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

click me!