ತುಂಗಭದ್ರಾ ನದಿಯಿಂದ ಬಳ್ಳಾರಿಗೆ ಹರಿಯಲಿದೆ ಶುದ್ಧ ನೀರು! ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ₹770 ಕೋಟಿ ಮೆಗಾ ಯೋಜನೆ!

Ravi Janekal   | Kannada Prabha
Published : Nov 21, 2026, 12:37 PM ISTUpdated : Nov 21, 2026, 12:40 PM IST
Ballari drinking water mega project

ಸಾರಾಂಶ

Ballari drinking water mega project: ಬಳ್ಳಾರಿ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ₹770 ಕೋಟಿ ವೆಚ್ಚದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಜೊತೆಗೆ ಯುಜಿಡಿ ವ್ಯವಸ್ಥೆ ನವೀಕರಣ ಮತ್ತು ಬಡವರಿಗೆ 10,000 ನಿವೇಶನ ನೀಡುವ ಗುರಿ ಹೊಂದಲಾಗಿದೆ.

ಬಳ್ಳಾರಿ (ನ.21): ಬಳ್ಳಾರಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ತುಂಗಭದ್ರಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಆದ್ಯತೆ ನೀಡಲಾಗಿದ್ದು, ಸುಮಾರು ₹770 ಕೋಟಿ ವೆಚ್ಚದ ಯೋಜನೆಯಡಿ ಮೊದಲ ಹಂತದಲ್ಲಿ ₹270 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.

ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ನಗರದ ಬಂಡಿಮೋಟ್ ಪ್ರದೇಶದ ಎಪಿಎಂಸಿ ಮುಖ್ಯ ಹರಾಜು ಮಾರುಕಟ್ಟೆ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೇವಾ ಸಭೆ ಉದ್ಘಾಟಿಸಿ ಮಾತನಾಡಿದರು.

ನಗರದಲ್ಲಿ ಓವರ್‌ಹೆಡ್ ಟ್ಯಾಂಕ್‌ಗಳ ನಿರ್ಮಾಣ ಹಾಗೂ ಮನೆಮನೆಗೆ ಪೈಪ್‌ಲೈನ್ ಮೂಲಕ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿವಿಧ ಮೂಲಗಳ ನೀರು ಮಿಶ್ರಣವಾಗುವುದರಿಂದ ಎದುರಾಗುವ ಸಮಸ್ಯೆ ನಿವಾರಿಸಿ, ತುಂಗಭದ್ರಾ ನದಿಯ ನೀರನ್ನು ನಗರದ ಜನರಿಗೆ ಪೂರೈಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಎಂ ಗೃಹ ಕಚೇರಿ ಔತಣಕೂಟದಲ್ಲಿ ಬಿಜೆಪಿ ಶಾಸಕರು! ಗಾಲಿ ಜನಾರ್ದನ ರೆಡ್ಡಿ ಸೇರಿ ಹಲವರು ಭಾಗಿ, ವಿಜಯೇಂದ್ರ ಗರಂ

₹220 ಕೋಟಿ ಅನುದಾನದಲ್ಲಿ ಬಳ್ಳಾರಿ ನಗರದಾದ್ಯಂತ ಹೊಸ ಯುಜಿಡಿ ವ್ಯವಸ್ಥೆ

ನಗರದಲ್ಲಿ ಹಲವು ವರ್ಷಗಳಿಂದ ಇರುವ ಒಳಚರಂಡಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸುಮಾರು 40 ವರ್ಷಗಳಷ್ಟು ಹಳೆಯದಾದ ಒಳಚರಂಡಿ ಪೈಪ್‌ಲೈನ್‌ಗಳಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ ಸುಮಾರು ₹220 ಕೋಟಿ ಅನುದಾನದಲ್ಲಿ ಬಳ್ಳಾರಿ ನಗರದಾದ್ಯಂತ ಹೊಸ ಯುಜಿಡಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಉತ್ತಮ ನಗರ ವಾತಾವರಣ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

ಬಳ್ಳಾರಿಯಲ್ಲಿ 10 ಸಾವಿರ ನಿವೇಶನ ನೀಡುವ ಗುರಿ

ಇದಲ್ಲದೆ ಸ್ವಂತ ಮನೆ ಅಥವಾ ನಿವೇಶನ ಇಲ್ಲದ ಬಡ ಕುಟುಂಬಗಳಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಳ್ಳಾರಿ ನಗರ ಕ್ಷೇತ್ರದಲ್ಲಿ ಸುಮಾರು 10 ಸಾವಿರ ನಿವೇಶನ ಅರ್ಹ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಲಾಗಿದೆ. ಜನವರಿಯೊಳಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿ ಬಡ ಕುಟುಂಬಗಳಿಗೆ ಸ್ವಂತ ನಿವೇಶನ ಕಲ್ಪಿಸುವ ಆಶಯ ಹೊಂದಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಕೊಳ್ಳೇಗಾಲ: ತಮಗೆ ಕೊಟ್ಟ ಪ್ರಶಸ್ತಿಯ ಮೊತ್ತ ಮಕ್ಕಳ ಶಿಕ್ಷಣಕ್ಕೆ ಸಮರ್ಪಿಸಿದ ನ್ಯಾ. ಸಂತೋಷ್ ಹೆಗ್ಡೆ

ಕಾರ್ಯಕ್ರಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆ, ಜೆಸ್ಕಾಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮೀನುಗಾರಿಕೆ ಇಲಾಖೆ, ಕೃಷಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ವಿವಿಧ ಇಲಾಖೆಗಳ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆ, ಸೌಲಭ್ಯ ಹಾಗೂ ಸೇವೆಗಳ ಕುರಿತು ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇದನ್ನೂ ಓದಿ: ಮಲ್ಲೇಶ್ವರಂ ಆನೆ ಪಾರ್ಕ್ ಓಪನ್ ಆಗಿದ್ದೇ ತಡ, ಶುರುವಾಯ್ತು ಬಿಜೆಪಿ-ಕಾಂಗ್ರೆಸ್ ನಡುವೆ ಕ್ರೆಡಿಟ್ ವಾರ್‌!

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿದಾನಂದಪ್ಪ, ಪಾಲಿಕೆ ಆಯುಕ್ತ ಮಂಜುನಾಥ್ ಎಸ್., ತಹಸೀಲ್ದಾರ್ ನರಸಪ್ಪ, ಪಾಲಿಕೆ ಸದಸ್ಯ ನೂರು ಮಹಮದ್, ಮಿಂಚು ಶ್ರೀನಿವಾಸ್, ರಾಜೇಶ್ವರಿ ಸುಬ್ಬರಾಯುಡು, ರವಿ, ಚಿದಾನಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ! ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ ಮೋಸಕ್ಕೆ ಬಲಿ
ರಾಜ್ಯದಲ್ಲಿ ಮೊದಲ ಬಾರಿ ಬಿ.ಇಡಿ ಪ್ರವೇಶಕ್ಕೂ ಕೆಇಎ ಕೌನ್ಸೆಲಿಂಗ್‌! ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಯಾವಾಗ?