ಬಾಗಲಕೋಟೆಗೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್: ಇಬ್ಬರಲ್ಲಿ ಸೋಂಕು ಪತ್ತೆ

By Suvarna News  |  First Published May 15, 2021, 2:23 PM IST

* ಬ್ಯ್ಲಾಕ್ ಫಂಗಸ್ ಸೋಂಕಿತರಿಗೆ ಮುಂದುವರೆದ ಚಿಕಿತ್ಸೆ
* ಬೀಳಗಿ ಮತ್ತು ಬಾಗಲಕೋಟೆಯಲ್ಲಿ ಇಬ್ಬರಲ್ಲಿ ಕಾಣಿಸಿಕೊಂಡ ಬ್ಯ್ಲಾಕ್ ಫಂಗಸ್ 
* ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಡಿಎಚ್ಓ ಡಾ.ಅನಂತ ದೇಸಾಯಿ 


ಬಾಗಲಕೋಟೆ(ಮೇ.15): ಜಿಲ್ಲೆಗೂ ಬ್ಲ್ಯಾಕ್ ಫಂಗಸ್ ವಕ್ಕರಿಸಿದೆ. ಜಿಲ್ಲೆಯಲ್ಲಿ ಇಬ್ಬರು ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. 

Tap to resize

Latest Videos

ಈ ಬಗ್ಗೆ ಇಂದು(ಶನಿವಾರ) ಮಾಧ್ಯಮದವರ ಜೊತೆ ಮಾತನಾಡಿದ ಡಿಎಚ್ಓ ಡಾ.ಅನಂತ ದೇಸಾಯಿ ಅವರು, ಜಿಲ್ಲೆಯಲ್ಲಿ ಇಬ್ಬರು ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ ಕಾಣಿಸಿಕೊಂಡಿದ್ದು ಅವರಿಗೆ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಂಕಿತರು ಯಾವುದೇ ಕಾರಣಕ್ಕೂ ಭಯ ಪಡಬಾರದು: ಡಿಸಿಎಂ ಕಾರಜೋಳ

"

ಮಹಾಮಾರಿ ಕೊರೋನಾ ಸೋಂಕಿನಿಂದ ಗುಣಮುಖರಾದ ಜಿಲ್ಲೆಯ ಬೀಳಗಿ ಮತ್ತು ಬಾಗಲಕೋಟೆಯ ಇಬ್ಬರಲ್ಲಿ ಬ್ಯ್ಲಾಕ್ ಫಂಗಸ್ ಪತ್ತೆಯಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಡಿಎಚ್ಓ ಡಾ.ಅನಂತ ದೇಸಾಯಿ ಮಾಹಿತಿ ನೀಡಿದ್ದಾರೆ. 

ಕೊರೋನಾ ಸೋಂಕಿನ ಬೆನ್ನಲ್ಲೇ ಇಬ್ಬರು ರೋಗಿಗಳು ಬ್ಲ್ಯಾಕ್ ಫಂಗಸ್‌ನಿಂದ ಬಳಲುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಜನತೆ ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!