ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ

Published : Jan 25, 2021, 09:24 AM IST
ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ

ಸಾರಾಂಶ

ಆಕಸ್ಮಿಕವಾಗಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು| ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಗಲಮರಿ ಗ್ರಾಮದಲ್ಲಿ ನಡೆದ ಘಟನೆ| ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕರಿಬ್ಬರ ಸಾವು| 

ಚಿಕ್ಕಬಳ್ಳಾಪುರ(ಜ.25):  ಬಾಲಕರಿಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತ ಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಗಲಮರಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. 

ಗ್ರಾಮದ ಚರಣ್‌(10) ಮತ್ತು ತೇಜು(11) ಮೃತಪಟ್ಟ ಬಾಲಕರು. ಇವರಿಬ್ಬರು ಗ್ರಾಮದ ಸಮೀಪ ಇರುವ ಕೃಷಿ ಹೊಂಡದ ಬಳಿ ತೆರಳಿದ್ದು ಆಕಸ್ಮಿಕವಾಗಿ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದರು. ತಕ್ಷಣಲೇ ಮಕ್ಕಳನ್ನು ರಕ್ಷಿಸಿದ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ ಎಷ್ಟು ಹೊತ್ತಾದರೂ ಆ್ಯಂಬುಲೆನ್ಸ್‌ ಸ್ಥಳಕ್ಕೆ ಬಂದಿರಲಿಲ್ಲ. ಆ್ಯಂಬುಲೆನ್ಸ್‌ ಸ್ಥಳಕ್ಕಾಗಮಿಸಿ ಚಿಂತಾಮಣಿ ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಬಾಲಕರಿಬ್ಬರು ಅಸುನೀಗಿರುವುದು ದೃಢಪಟ್ಟಿದೆ. 

ಕೋಳಿಮರಿಗಳನ್ನು ಕಾಡಿಗೆ ಬಿಟ್ಟ ರೈತರು, ತೆಗೆದುಕೊಳ್ಳಲು ಮುಗಿಬಿದ್ದ ಜನ!

ಇದರಿಂದ ರೊಚ್ಚಿಗೆದ್ದ ಯುವಕರ ಗುಂಪು ಸಾರ್ವಜನಿಕ ಆಸ್ಪತ್ರೆ ಮೇಲೆ ದಾಳಿ ನಡೆಸಿ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಯುವಕರು ಗುಂಪು ಅಲ್ಲಿಂದ ಪರಾರಿಯಾಗಿದೆ.
 

PREV
click me!

Recommended Stories

ಅರಣ್ಯ ಸಿಬ್ಬಂದಿ ಗುಂಡಿಗೆ 3 ಬೇಟೆಗಾರರು ಬಲಿ ಪ್ರಕರಣ; ಶವ ಏಕೆ ಮೈಸೂರಿಗೆ ತಂದರು? ಸಂಸದರ ಸಂಶಯದ ಪ್ರಶ್ನೆಗೆ ಉತ್ತರ ಇಲ್ಲ!
ಉತ್ತರಕನ್ನಡದಲ್ಲಿ ಉಲ್ಟಾ, ವಿಜಯಪುರದಲ್ಲಿ ಅರ್ಧಕ್ಕೆ ಹಾರಾಡಿದ ರಾಷ್ಟ್ರಧ್ವಜ!