ವಿಜಯಪುರ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳ ಸಾವು

Kannadaprabha News   | Asianet News
Published : Feb 13, 2021, 03:16 PM IST
ವಿಜಯಪುರ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳ ಸಾವು

ಸಾರಾಂಶ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದ ಘಟನೆ| ಮನೆಯ ಪಕ್ಕದ ಚಿಕ್ಕಪ್ಪನ ಜಮೀನಿನಲ್ಲಿ ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ಮಕ್ಕಳು| ಈ ಸಂಬಂಧ ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಕೊಲ್ಹಾರ(ಫೆ.13): ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. 

ಚಿಕ್ಕಆಸಂಗಿ ಗ್ರಾಮದ ಆಕಾಶ ಮಹಾದೇವ ಬೆನ್ನೂರ (4), ಬೋರಮ್ಮ ಸಂಗಣ್ಣ ಬೆನ್ನೂರ (4) ಮೃತಪಟ್ಟ ಮಕ್ಕಳು. ಇವರಿಬ್ಬರೂ ಮನೆಯ ಪಕ್ಕದ ಚಿಕ್ಕಪ್ಪನ ಜಮೀನಿನಲ್ಲಿ ಆಟವಾಡುತ್ತಾ ಹೋಗಿ ಅಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ. 

ನೋಟಿಸ್‌ಗೆ ಡೋಂಟ್ ಕೇರ್: ಮತ್ತೆ ಬಿಎಸ್‌ವೈ ವಿರುದ್ಧ ತಿರುಗಿಬಿದ್ದ ಯತ್ನಾಳ್

ಘಟನಾ ಸ್ಥಳಕ್ಕೆ ಕೊಲ್ಹಾರ ಪಿಎಸ್‌ಐ ಸಿದ್ದಪ್ಪ ಯಡಹಳ್ಳಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC