ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನ ಸಂಪೂರ್ಣ ಲಾಕ್‌ಡೌನ್‌

By Kannadaprabha News  |  First Published Jun 9, 2021, 1:29 PM IST

* ಬೀಜ, ಗೊಬ್ಬರ ಖರೀದಿಗೆ ಸಮಯ ನಿಗದಿಪಡಿಸಿದ ಜಿಲ್ಲಾಧಿಕಾರಿ
* ವಾರಾಂತ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಘೋಷಣೆ 
* ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು 


ಬೆಳಗಾವಿ(ಜೂ.09):  ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡದಂತೆ ತಡೆಗಟ್ಟಲು ಜೂ.12ರ ಬೆಳಗ್ಗೆ 6ರಿಂದ ಜೂ.14ರ ಬೆಳಗ್ಗೆ 6ರವರೆಗೆ ವೀಕೆಂಡ್‌ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಕಳೆದ ವಾರವಷ್ಟೇ ಶುಕ್ರವಾರದಿಂದ ಸೋಮವಾರ ಬೆಳಗ್ಗೆಯವರೆಗೆ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ, ಈ ಬಾರಿ ಕೇವಲ ಎರಡು ದಿನಗಳ ಕಾಲ ವೀಕೆಂಡ್‌ ಸಂಪೂರ್ಣ ಲಾಕ್‌ಡೌನ್‌ಗೆ ಆದೇಶ ನೀಡಿದ್ದಾರೆ.

Latest Videos

undefined

ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ. ಆದರೆ, ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್‌ ಫುಡ್‌ ಸರ್ವಿಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ, ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಿಎಸ್‌ವೈ ಮನಸಿಗೆ ನೋವಾಗಿ ರಾಜೀನಾಮೆ ಬಗ್ಗೆ ಮಾತನಾಡಿರಬಹುದು: ಸವದಿ

ಇದರ ಜತೆಗೆ ಲಾಕ್‌ಡೌನ್‌ ಷೋಷಿಸಿರುವ ದಿನಗಳಂದು ಸಾರ್ವಜನಿಕ ವಿತರಣಾ ಪದ್ಧತಿ ಅಡಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳು ಬೆ.6ರಿಂದ ಬೆ10 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಬೇಕು. ಅದೇ ರೀತಿ, ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆ.6ರಿಂದ ಮಧ್ಯಾಹ್ನ 12ರವರೆಗೆ ಅಂಗಡಿಗಳನ್ನು ತೆರೆದು ಬೀಜ ಹಾಗೂ ರಸಗೊಬ್ಬರಗಳನ್ನು ವಿತರಿಸಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 05 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿದೆ.

ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಲಾಕ್‌ಡೌನ್‌ ದಿನಗಳಂದು ಬೆ.6ರಿಂದ ಮಧ್ಯಾಹ್ನ 12ರವರೆಗೆ ತೆರೆಯಲು ಅವಕಾಶವಿದ್ದು, ಅಲ್ಲಿ ತೆರಳುವ ರೈತರು ಗ್ರಾಮ ಪಂಚಾಯತಿ ಪಿಡಿಒ ಹಾಗೂ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
 

click me!