ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಧೂಳಖೇಡ ಬಳಿಯ ಎನ್.ಎಚ್. 50 ರಲ್ಲಿ ಇಂದು(ಗುರುವಾರ) ನಡೆದಿದೆ.
ವಿಜಯಪುರ(ಅ.27): ಕಬ್ಬು ಸಾಗಿಸುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಪತಿ, ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿ, 9 ಜನ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಧೂಳಖೇಡ ಬಳಿಯ ಎನ್.ಎಚ್ 50 ರಲ್ಲಿ ಇಂದು(ಗುರುವಾರ) ನಡೆದಿದೆ.
ಮೃತರನ್ನ ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಅಂತ ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ರವಾನೆ ಮಾಡಲಾಗಿದೆ ಅಂತ ತಿಳಿದು ಬಂದಿದೆ.
ಅಥಣಿ ಮೂಲದ ಇವರೆಲ್ಲಾ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಈ ವೇಳೆ ಕಬ್ಬು ಸಾಗಿಸುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
Bengaluru: ಡಿವೈಡರ್ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರ ಭೀಕರ ಅಂತ್ಯ
ಘಟನಾ ಸ್ಥಳಕ್ಕೆ ಝಳಕಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.