ಗದಗ: ಲಾರಿ, ಕಾರು ಡಿಕ್ಕಿ, ಇಬ್ಬರು ಸಾವು

Kannadaprabha News   | Asianet News
Published : Feb 18, 2021, 01:39 PM IST
ಗದಗ: ಲಾರಿ, ಕಾರು ಡಿಕ್ಕಿ, ಇಬ್ಬರು ಸಾವು

ಸಾರಾಂಶ

ಹುಲಕೋಟಿ ರೂರಲ್‌ ಎಂಜಿನಿಯರಿಂಗ್‌ ಕಾಲೇಜ್‌ ಬಳಿ ನಡೆದ ಅಪಘಾತ| ಗಾಯಾಳಿಗಳಿಗೆ ಗದಗ ಜಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗದಗ ಗ್ರಾಮೀಣ ಪೊಲೀಸರು| 

ಗದಗ(ಫೆ.18): ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 

ತಾಲೂಕಿನ ಹುಲಕೋಟಿ ಹೊರವಲಯದಲ್ಲಿರುವ ಹುಲಕೋಟಿ ರೂರಲ್‌ ಎಂಜಿನಿಯರಿಂಗ್‌ ಕಾಲೇಜ್‌ ಬಳಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಪ್ರೇಮಾ ಈಶ್ವರಗೌಡ ಪಾಟೀಲ, ಕಾರು ಚಾಲಕ ಅನ್ವರ್‌ ಮೃತಪಟ್ಟಿದ್ದಾರೆ. ಈಶ್ವರಗೌಡ ಪಾಟೀಲ, ಶಿವಾಬಾಯಿ ಪಾಟೀಲ, ಮಹಾರಾಜ ಪಾಟೀಲ ಈ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!

ಮೂಲತಃ ರೋಣ ತಾಲೂಕಿನ ಮಾಳವಾಡ ಗ್ರಾಮದವರಾದ ಇವರು ಧಾರವಾಡದಲ್ಲಿ ನೆಲೆಸಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

PREV
click me!

Recommended Stories

ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ: ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?
ಮಕ್ಕಳಿಗಾಗಿ ಕೊನೆಗೂ ಒಂದಾದ್ರು ಲೀಲಾ-ಮಂಜು; ಚಿನ್ನೀ, ಬಂಗಾರಿ ಫ್ಲೇವರ್ ಬಿಟ್ಟುಕೊಟ್ಟ ಸಂತೋಷ್!